For Quick Alerts
ALLOW NOTIFICATIONS  
For Daily Alerts
 

BGT 2023: ಆಸ್ಟ್ರೇಲಿಯಾಗೆ ಮತ್ತೊಂದು ಆಘಾತ: ಮತ್ತೋರ್ವ ಪ್ರಮುಖ ಆಟಗಾರ ಸರಣಿಯಿಂದ ಔಟ್!

Border Gavaskar Trophy: Australian opener David Warner ruled out of reminder matches of the test series

ಸತತ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಕೂಡ ಬಹುವಾಗಿ ಕಾಡುತ್ತಿದೆ. ಈಗಾಗಲೇ ಜೋಶ್ ಹೇಜಲ್‌ವುಡ್ ಗಾಯಗೊಂಡು ತವರಿಗೆ ವಾಪಾಸಾಗಿದ್ದರೆ ನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ ಕೌಟುಂಬಿಕ ಕಾರಣಗಳಿಂದಾಗಿ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಈ ಮಧ್ಯೆ ಆಸ್ಟ್ರೇಲಿಯಾ ತಂಡದ ಮತ್ತೋರ್ವ ಪ್ರಮುಖ ಆಟಗಾರ ಗಾಯದಿಂದ ಸರಣಿಯಿ ಉಳಿದ ಪಂದ್ಯಗಳಿಂದ ಹೊರಗುಳಿಯುವುದು ದೃಢಪಟ್ಟಿದೆ.

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಗಾಯದಿಂದಾಗಿ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಂದ ಹೊರಬಿದ್ದಿದ್ದು ಆಸ್ಟ್ರೇಲಿಯಾಗೆ ವಾಪಾಸಾಗಿದ್ದಾರೆ. ಮಂಗಳವಾರ ಈ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಅಧಿಕೃತವಾಗಿ ಮಾಹಿತಿ ನೀಡಿದೆ. ಇದು ಈಗಾಗಲೇ ಸೋಲಿನ ಮೇಲೆ ಸೋಲು ಕಾಣುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಹಿನ್ನಡೆಯನ್ನುಂಟು ಮಾಡಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 0-2 ಅಂತರದಿಂದ ಹಿನ್ನಡೆಯಲ್ಲಿದೆ.

ಏಕದಿನ ಸರಣಿಗೆ ಮರಳುವ ಸಾಧ್ಯತೆ: ಗಾಯಗೊಂಡಿರುವ ಡೇವಿಡ್ ವಾರ್ನರ್ ಆಸ್ಟ್ರೇಲಿಯಾಗೆ ಮರಳಿದ್ದು ಸಿಡ್ನಿಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. ಆದರೆ ಡೇವಿಡ್ ವಾರ್ನರ್ ಭಾರತದಲ್ಲಿಯೇ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ವಾಪಾಸಾಗುವ ಸಾಧ್ಯತೆಯಿದೆ. ಏಕದಿನ ಸರಣಿ ಮಾರ್ಚ್ 17ರಿಂದ ಆರಂಭವಾಗಲಿದ್ದು ಮುಂಬೈನಲ್ಲಿ ಮೊದಲ ಪಂದ್ಯ ನಡೆಯಲಿದೆ.

ಟೆಸ್ಟ್ ಸರಣಿಯಲ್ಲಿ ವಾರ್ನರ್ ವೈಫಲ್ಯ: ಇನ್ನು ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದಾರೆ. ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಲು ವಿಫಲವಾದ ವಾರ್ನರ್ ಆಡಿದ ಮೂರು ಇನ್ನಿಂಗ್ಸ್‌ಗಳಲ್ಲಿ ವಾರ್ನರ್ ಒಟ್ಟು ಗಳಿಸಿದ್ದು ಕೇವಲ 26 ರನ್ ಮಾತ್ರ. ಹೀಗಾಗಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದೀಗ ಗಾಯದ ಕಾರಣದಿಂದಾಗಿ ಅವರು ಸರಣಿಯಿಂದ ಹೊರಗುಳಿಯಬೇಕಾಗಿದೆ.

ಈ ಮಧ್ಯೆ ಮೂರನೇ ಪಂದ್ಯಕ್ಕೆ ಮುನ್ನ ಆಸ್ಟ್ರೇಲಿಯಾ ತಂಡದ ಇಬ್ಬರು ಪ್ರಮುಖ ಆಟಗಾರರು ಆಡುವ ಬಳಗದಲ್ಲಿ ಸೇರಿಕೊಳ್ಳಲು ಸಿದ್ಧವಾಗಿದ್ದಾರೆ. ಗಾಯದ ಕಾರಣದಿಂದಾಗಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಮಿಚೆಲ್ ಸ್ಟಾರ್ಕ್ ಹಾಗೂ ಕ್ಯಾಮರೂನ್ ಗ್ರೀನ್ ಆಡಲು ಸಮರ್ಥವಾಗಿದ್ದು ಮೂರನೇ ಟೆಸ್ಟ್ ಪಂದ್ಯದ ಆಯ್ಕೆಗೆ ಲಭ್ಯವಾಗಲಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಎರಡನೇ ಟೆಸ್ಟ್ ಪಂದ್ಯದ ಮುಕ್ತಾಯದ ಬಳಿಕ ತವರಿಗೆ ವಾಪಾಸಾಗಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ಕಮ್ಮಿನ್ಸ್ ಆಸ್ಟ್ರೇಲಿಯಾಗೆ ವಾಪಾಸಾಗಿದ್ದು ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ವಾಪಾಸಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Story first published: Tuesday, February 21, 2023, 14:36 [IST]
Other articles published on Feb 21, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+