ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಾರ್ಡರ್-ಗವಾಸ್ಕರ್ ಟ್ರೋಫಿ: ಮೊದಲ ಟೆಸ್ಟ್‌ನಿಂದ ಹೊರಗುಳಿಯುವ ಬಗ್ಗೆ ಸುಳಿವು ನೀಡಿದ ಆಸಿಸ್ ಸ್ಟಾರ್

Border-Gavaskar Trophy: australian star pacer said he is likely to miss first Test of the series against India

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಫೆಬ್ರವರಿ ತಿಂಗಳಿನಲ್ಲಿ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೆಸ್ಟ್ ಮಾದರಿಯ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿರುವ ಕಾರಣ ಕ್ರಿಕೆಟ್ ಅಭಿಮಾನಿಗಳು ಈ ಸರಣಿಯನ್ನು ಎದುರು ನೋಡುತ್ತಿದ್ದಾರೆ. ಇನ್ನು ಈ ಸರಣಿಯ ಆರಂಭಕ್ಕೂ ಮುನ್ನವೇ ಸಾಕಷ್ಟು ಉತ್ಸುಕತೆಗಳು ವ್ಯಕ್ತವಾಗುತ್ತಿದೆ. ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಸೇರಿದಂತೆ ಈಗಾಗಲೇ ಅನೇಕರು ಈ ಸರಣಿಯ ಬಗ್ಗೆ ತಮ್ಮ ನಿರೀಕ್ಷೆಗಳನ್ನು ಹಂಚಿಕೊಳ್ಳಲು ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ವೇಗಿ ಮಿಚೆಲ್ ಸ್ಟಾರ್ಕ್ ಸರಣಿಯ ಮೊದಲ ಪಂದ್ಯಕ್ಕೆ ತಾನು ಲಭ್ಯವಾಗುವ ಸಂಭವವಿಲ್ಲ ಎಂದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಬಾಕ್ಸಿಂಗ್‌ಡೇ ಟೆಸ್ಟ್‌ನಲ್ಲಿ ಸ್ಟಾರ್ಕ್ ಗಾಯಕ್ಕೆ ತುತ್ತಾಗಿದ್ದು ಮೊದಲ ಪಂದ್ಯಕ್ಕೆ ಅಲಭ್ಯವಾಗುವ ಸುಳಿವು ನೀಡಿದ್ದಾರೆ.

"ಮೊದಲ ಟೆಸ್ಟ್ ಪಂದ್ಯವನ್ನು ನಾನು ಆಡುವ ಸಾಧ್ಯತೆಯಿಲ್ಲ. ಆದರೆ ಎರಡನೇ ಟೆಸ್ಟ್ ಪಂದ್ಯಕ್ಕೆ ನಾನು ಲಭ್ಯವಾಗುವ ವಿಶ್ವಾಸವಿದೆ. ಆ ಸಮಯಕ್ಕೆ ನನ್ನ ಬೆರಳುಗಳು ಸ್ಥಿತಿ ಹೇಗಿರಲಿದೆ ಎಂದು ನೋಡೋಣ" ಎಂದಿದ್ದಾರೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್. ಇನ್ನು ನಾಗ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಮಿಚೆಲ್ ಸ್ಟಾರ್ಕ್ ಜೊತೆಗೆ ಕ್ಯಾಮರೂನ್ ಗ್ರೀನ್ ಕೂಡ ಗಾಯದ ಕಾರಣದಿಂದಾಗಿ ಅಲಭ್ಯವಾಗುವ ಸಾಧ್ಯತೆಯಿದೆ. ಗ್ರೀಸ್ ಕೂಡ ದಕ್ಷಿಣ ಆಫ್ರಿಕಾದ ಎರಡನೇ ಪಂದ್ಯದಲ್ಲಿಯೇ ಗಾಯಕ್ಕೆ ತುತ್ತಾಗಿದ್ದರು.

2014-15ರ ಬಳಿಕ ಆಸ್ಟ್ರೇಲಿಯಾಗೆ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. 2017ರಲ್ಲಿ ತವರಿನಲ್ಲಿ ನಡೆದ ಸರಣಿ ಸೇರಿದಂತೆ ಭಾರತ ಕಳೆದ ಮೂರು ಸರಣಿಯಲ್ಲಿಯೂ ಟ್ರೋಫಿ ಎತ್ತಿ ಹಿಡಿದಿದೆ. ಈ ಮಧ್ಯೆ ಕಳೆದ ಎರಡು ಬಾರ್ಡರ್ ಗವಾಸ್ಕರ್ ಸರಣಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದು ಎರಡರಲ್ಲಿಯೂ ಭಾರತ ಸರಣಿ ಗೆಲುವು ಸಾಧಿಸಿದೆ. ಹೀಗಾಗಿ ಆಸ್ಟ್ರೇಲಿಯಾ ತವರಿನಲ್ಲಿಯೇ ಭಾರೀ ಮುಖಭಂಗ ಅನುಭವಿಸಿದ್ದು ಈ ಬಾರಿ ಸರಣಿ ಗೆಲುವು ಸಾಧಿಸುವ ಒತ್ತಡದಲ್ಲಿದೆ. ಇನ್ನು ಆಸ್ಟ್ರೇಲಿಯಾ ತಂಡ ಭಾರತದಲ್ಲಿ 2004ರ ಬಳಿಕ ಟೆಸ್ಟ್ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ ಎಂಬುದು ಮತ್ತೊಂದು ಗಮನಾರ್ಹ ಅಂಶ.

ಇನ್ನು ಈ ಬಾರಿಯ ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಫೆಬ್ರವರಿ 9ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದ್ದು ನಾಗ್ಪುರ, ದೆಹಲಿ, ಧರ್ಮಶಾಲಾ ಹಾಗೂ ಅಹ್ಮದಾಬಾದ್‌ನಲ್ಲಿ ಈ ನಾಲ್ಕು ಪಂದ್ಯಗಳು ಆಯೋಜನೆಯಾಗಲಿದೆ. ಇನ್ನು ನಾಗ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಮಿಚೆಲ್ ಸ್ಟಾರ್ಕ್ ಹಾಗೂ ಕ್ಯಾಮರೂನ್ ಗ್ರೀನ್ ಗಾಯದ ಕಾರಣದಿಂದಾಗಿ ಅಲಭ್ಯವಾಗುವ ಸಾಧ್ಯತೆಯಿದೆ.

ಇನ್ನು ಈ ಬಾರಿ ಆಸ್ಟ್ರೇಲಿಯಾ ಅದ್ಭುತ ಪ್ರದರ್ಶನ ನೀಡಿಕೊಂಡು ಬರುತ್ತಿದ್ದು ತವರಿನಲ್ಲಿ ನಡೆದ ಸರಣಿಯಲ್ಲಿ ಭಾರೀ ಮೇಲುಗೈ ಸಾಧಿಸಿದೆ. ತವರಿನ ಆವೃತ್ತಿಯಲ್ಲಿ ಕಳೆದ ಐದು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಒಂದು ಪಂದ್ಯದಲ್ಲಿ ಡ್ರಾ ಸಾಧಿಸಿದೆ. ವೆಸ್ಟ್ ಇಂಡೀಸ್ ವಿರುದ್ಧ 2-0 ಅಂತರದ ಗೆಲುವು ಸಾಧಿಸಿದರೆ ದಕ್ಷಿಣ ಆಫ್ರಿಕಾ ವಿರುದ್ಧದ ಮುರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ಸಿಡ್ನಿ ಪಂದ್ಯಕ್ಕೆ ಮಳೆ ಅಡ್ಡಿಯಾಗಿರದಿದ್ದರೆ ದಕ್ಷಿಣ ಆಫ್ರಿಕಾ ಕೂಡ ವೈಟ್‌ವಾಶ್ ಅವಮಾನಕ್ಕೆ ತುತ್ತಾಗುವ ಸಾಧ್ಯತೆಯಿತ್ತು. ಪ್ರಸ್ತುತ ಆಸ್ಟ್ರೇಲಿಯಾ ತಂಡ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು ಭಾರತ ಎರಡನೇ ಸ್ಥಾನದಲ್ಲಿದೆ.

Story first published: Tuesday, January 10, 2023, 5:35 [IST]
Other articles published on Jan 10, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X