ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಾರ್ಡರ್- ಗವಾಸ್ಕರ್ ಟ್ರೋಫಿ: ಭಾರತದ ಬ್ಯಾಟರ್‌ಗಳಿಗೆ ಕಂಟಕವಾಗಬಲ್ಲ ಸ್ಪಿನ್ನರ್‌ಗಳನ್ನು ಹೆಸರಿಸಿದ ಲೆಹ್ಮನ್

Border-Gavaskar Trophy: Darren Lehmann said these 2 spinners should play in Test series against India

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಹು ನಿರೀಕ್ಷಿತ ಟೆಸ್ಟ್ ಸರಣಿ ಬಾರ್ಡರ್-ಗವಾಸ್ಕರ್ ಸರಣಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 9ರಿಂದ ಆರಂಭವಾಗಲಿರುವ ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯ ಮೇಲೆ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ಎರಡು ತಂಡಗಳು ಕೂಡ ಟೆಸ್ಟ್ ಮಾದರಿಯ ಅಗ್ರ ಎರಡು ತಂಡಗಳಾಗಿದ್ದು ಈ ಎರಡು ತಂಡಗಳ ನಡುವಿನ ಹಣಾಹಣಿ ಯಾವಾಗಲೂ ಅತ್ಯಂತ ರೋಚಕವಾಗಿರುತ್ತದೆ. ಈ ಬಾರಿ ಈ ಸರಣಿ ಭಾರತದ ನೆಲದಲ್ಲಿಯೇ ನಡೆಯುತ್ತಿರುವ ಕಾರಣ ಕುತೂಹಲ ಹೆಚ್ಚಾಗಿದೆ.

ಆಸ್ಟ್ರೇಲಿಯಾ ತಂಡ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲಲು ಸಾಧ್ಯವಾಗದೆ ಬಹುತೇಕ ಎರಡು ದಶಕಗಳಾಗುತ್ತಾ ಬಂದಿದೆ. ಇದರ ಮಧ್ಯೆ ಕಳೆದ ಎರಡು ಭಾರಿ ಭಾರತ ಆಸ್ಟ್ರೇಲಿಯಾಗೆ ಪ್ರವಾಸ ಕೈಗೊಂಡು ಬಾರ್ಡರ್‌-ಗವಾಸ್ಕರ್ ಟ್ರೋಪಿಯಲ್ಲಿ ಆಡಿದಾಗಲೂ ಆಸ್ಟ್ರೇಲಿಯಾ ತಂಡ ತವರಿನಲ್ಲಿಯೇ ಸೋಲು ಅನುಭವಿಸಿ ಮುಖಭಂಗ ಅನುಭವಿಸಿದೆ. ಹೀಗಾಗಿ ಈ ಬಾರಿ ಭಾರತದ ನೆಲದಲ್ಲಿ ಆಸಿಸ್ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ.

ಭಾರತದ ನೆಲದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಬೇಕಾದರೆ ತಂಡದ ಸ್ಪಿನ್ ಬೌಲಿಂಗ್ ವಿಭಾಗದ ಪ್ರದರ್ಶನ ನಿರ್ಣಾಯಕವಾಗಿರಲಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಡ್ಯಾರೆನ್ ಲೆಹ್ಮನ್ ಪ್ರತಿಕ್ರಿಯೆ ನೀಡಿದ್ದು ಬಾರತದ ವಿರುದ್ಧ ಆಸ್ಟ್ರೇಲಿಯಾ ಮೇಲುಗೈ ಸಾಧಿಸಬೇಕಾದರೆ ಈ ಇಬ್ಬರು ಸ್ಪಿನ್ನರ್‌ಗಳು ಕಣಕ್ಕಿಳಿಯುವುದು ಅಗತ್ಯವಾಗಿದೆ ಎಂದಿದ್ದಾರೆ. ಲೆಹ್ಮನ್ ಹೇಳಿದ ಆ ಇಬ್ಬರು ಆಟಗಾರರು ಯಾರು? ಮುಂದೆ ಓದಿ..

4 ಪಂದ್ಯಗಳ ನಿಷೇಧ ಶಿಕ್ಷೆಯಿಂದ ತಪ್ಪಿಸಿಕೊಂಡ ಇಶಾನ್ ಕಿಶನ್: ಖಡಕ್ ವಾರ್ನಿಂಗ್ ಕೊಟ್ಟ ರೆಫರಿ4 ಪಂದ್ಯಗಳ ನಿಷೇಧ ಶಿಕ್ಷೆಯಿಂದ ತಪ್ಪಿಸಿಕೊಂಡ ಇಶಾನ್ ಕಿಶನ್: ಖಡಕ್ ವಾರ್ನಿಂಗ್ ಕೊಟ್ಟ ರೆಫರಿ

ಈ ಸ್ಪಿನ್ ಜೋಡಿ ಸೂಕ್ತ ಎಂದ ಲೆಹ್ಮನ್

ಈ ಸ್ಪಿನ್ ಜೋಡಿ ಸೂಕ್ತ ಎಂದ ಲೆಹ್ಮನ್

ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ನಾಲ್ವರು ಸ್ಪಿನ್ ಬೌಲಿಂಗ್ ಆಯ್ಕೆಗಳನ್ನು ತಂಡದಲ್ಲಿ ಹೊಂದಿದೆ. ಆದರೆ ಈ ನಾಲ್ವರ ಪೈಕಿ ಟೀಮ್ ಇಂಡಿಯಾ ವಿರುದ್ಧದ ಆಡುವ ಬಳಗದಲ್ಲಿ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್‌ ಅವರೊಂದಿಗೆ ಆಶ್ಟನ್ ಅಗರ್ ಕಣಕ್ಕಿಳಿಯಬೇಕು ಎಂದಿದ್ದಾರೆ ಡ್ಯಾರನ್ ಲೆಹ್ಮನ್. ಈ ಜೋಡಿಯೊಂದಿಗೆ ಕಣಕ್ಕಿಳಿದರೆ ಭಾರತದ ವಿರುದ್ಧ ಹೆಚ್ಚಿನ ಯಶಸ್ಸು ಸಾಧಿಸಬಹುದು ಎಂದಿದ್ದಾರೆ ಮಾಜಿ ಕ್ರಿಕೆಟಿಗ.

ಆಸಿಸ್ ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳು

ಆಸಿಸ್ ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳು

ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರುವ ಆಸ್ಟ್ರೇಲಿಯಾ ತಂಡದಲ್ಲಿ ನಾಲ್ವರು ಸ್ಪೆಶಲಿಸ್ಟ್ ಸ್ಪಿನ್ನರ್‌ಗಳಿದ್ದಾರೆ. ಭಾರತದ ಸ್ಪಿನ್ ಸ್ನೇಹಿ ಪಿಚ್‌ಗಳಿಗೆ ಸೂಕ್ತವೆನಿಸುವ ಸ್ಪಿನ್ನರ್‌ಗಳು ತಂಡದಲ್ಲಿದ್ದಾರೆ. ಅನುಭವಿ ಆಟಗಾರ ನಾಥನ್ ಲಿಯಾನ್ ಹಾಗೂ ಆಶ್ಟನ್ ಅಗರ್ ಜೊತೆಗೆ ಟಾಡ್ ಮರ್ಫಿ ಹಾಗೂ ಮಿಚೆಲ್ ಸ್ವೆಪ್ಸನ್ ಕೂಡ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.

2017ರಲ್ಲಿ ಭಾರತದಲ್ಲಿ ಕೊನೆಯ ಬಾರಿ ಟೆಸ್ಟ್ ಆಡಿದ್ದ ಆಸಿಸ್

2017ರಲ್ಲಿ ಭಾರತದಲ್ಲಿ ಕೊನೆಯ ಬಾರಿ ಟೆಸ್ಟ್ ಆಡಿದ್ದ ಆಸಿಸ್

2017ರಲ್ಲಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಪ್ರವಾಸ ಕೈಗೊಂಡು ಕೊನೆಯ ಬಾರಿ ಟೆಸ್ಟ್ ಸರಣಿ ಆಡಿದ್ದಾಗ ಆಸಿಸ್ ತಂಡದ ಕೋಚ್ ಆಗಿದ್ದವರು ಡ್ಯಾರನ್ ಲೆಹ್ಮನ್. ಪುಣೆಯಲ್ಲಿ ನಡೆದಿದ್ದ ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ ಗೆಲುವು ಪಡೆದು ಮೇಲುಗೈ ಸಾಧಿಸಿತ್ತು. ಆದರೆ ಮುಂದಿನ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ ತಂಡವನ್ನು ಬೆಂಗಳುರು ಹಾಗೂ ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಸೋಲಿಸಿ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು.

ಆಸ್ಟ್ರೇಲಿಯಾ ತಂಡ ಹೀಗಿದೆ

ಆಸ್ಟ್ರೇಲಿಯಾ ತಂಡ ಹೀಗಿದೆ

ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

Story first published: Monday, January 23, 2023, 15:09 [IST]
Other articles published on Jan 23, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X