IND vs AUS: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ 11ರ ಬಳಗ ಆಯ್ಕೆ ಮಾಡಿದ ವಾಸಿಂ ಜಾಫರ್

ವಿಶ್ವದ ಬಲಿಷ್ಠ ಎರಡು ತಂಡಗಳಾದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮೊದಲ ಪಂದ್ಯ ಗುರುವಾರ, ಫೆಬ್ರವರಿ 9ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ (ವಿಸಿಎ) ಸ್ಟೇಡಿಯಂನಲ್ಲಿ ನಡೆಯಲಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ಪ್ರಸ್ತುತ ವಿಶ್ವದ ಅತಿದೊಡ್ಡ ಟೆಸ್ಟ್ ಕದನವಾಗಿದೆ. ತವರಿನಲ್ಲಿ ಭಾರತ ತಂಡವೇ ಫೇವರಿಟ್ ಆಗಿದ್ದರೂ, ಐಸಿಸಿ ಅಗ್ರ ಶ್ರೇಯಾಂಕದ ಆಸ್ಟ್ರೇಲಿಯಾ ತಂಡ ಆತಿಥೇಯರಿಗೆ ಸವಾಲು ಹಾಕಲು ಕೆಲವು ವಿಶಿಷ್ಟ ಕ್ರಮಗಳನ್ನು ಅಳವಡಿಸಿಕೊಂಡಿದೆ.
ಇತ್ತ ಭಾರತ ತಂಡಕ್ಕೆ ಸ್ಟಾರ್ ಆಟಗಾರರ ಗಾಯಾದ ಸಮಸ್ಯೆ ಒಂದು ಕಡೆಯಾದರೆ, ಮತ್ತೊಂದು ಕಡೆ ಅವರ ಅನುಪಸ್ಥಿತಿಯಲ್ಲಿ ಆಡುವ 11ರ ಬಳಗವನ್ನು ಆಯ್ಕೆ ಮಾಡುವುದು. ಇದೀಗ ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಅವರು ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕಾಗಿ ಆಡುವ 11ರ ಬಳಗವನ್ನು ಆಯ್ಕೆ ಮಾಡುವ ಮೂಲಕ ಟೀಂ ಮ್ಯಾನೇಜ್‌ಮೆಂಟ್‌ಗೆ ಸಹಾಯ ಮಾಡಲು ಪ್ರಯತ್ನಿಸಿದ್ದಾರೆ.

ರೋಹಿತ್ ಶರ್ಮಾ- ಕೆಎಲ್ ರಾಹುಲ್ ಆರಂಭಿಕ ಬ್ಯಾಟಿಂಗ್
ಸದ್ಯ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಅವರ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ಜೊತೆ ಉಪನಾಯಕ ಕೆಎಲ್ ರಾಹುಲ್ ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಬೇಕೆಂದು ವಾಸಿಂ ಜಾಫರ್ ತಿಳಿಸಿದ್ದಾರೆ.
ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಲ್ಕನೇ ಕ್ರಮಾಂಕದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಬೇಕು ಮತ್ತು ಮಧ್ಯಮ ಕ್ರಮಾಂಕದ 5ನೇ ಸ್ಥಾನದಲ್ಲಿ ಶುಭ್ಮನ್ ಗಿಲ್ ಆಡಬೇಕೆಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.

ಆಲ್‌ರೌಂಡರ್ ರೂಪದಲ್ಲಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಆಯ್ಕೆಯ ವಿಚಾರದಲ್ಲಿ ಇಶಾನ್ ಕಿಶನ್‌ಗಿಂತ ಕೆಎಸ್ ಭರತ್‌ಗೆ ವಾಸಿಂ ಜಾಫರ್ ಮಣೆ ಹಾಕಿದ್ದಾರೆ. ನಂತರದ ಸ್ಥಾನವನ್ನು ಸ್ಪಿನ್ ಬೌಲಿಂಗ್- ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್‌ಗೆ ನೀಡಿದ್ದಾರೆ.
ಮತ್ತೊಬ್ಬ ಎಡಗೈ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ ವಾಸಿಂ ಜಾಫರ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ ಮತ್ತು ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್‌ಗೆ ಭಾರತದ ಆಡುವ 11ರ ಬಳಗದಲ್ಲಿ ಸ್ಥಾನ ನೀಡಲಾಗಿದೆ.

ಭಾರತ vs ಆಸ್ಟ್ರೇಲಿಯಾ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ವೇಳಾಪಟ್ಟಿ
ಮೊದಲ ಟೆಸ್ಟ್ ಪಂದ್ಯ: ಫೆಬ್ರವರಿ 9ರಿಂದ ಫೆಬ್ರವರಿ 13ರವೆರೆಗೆ - ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ನಾಗ್ಪುರ.
ಎರಡನೇ ಟೆಸ್ಟ್ ಪಂದ್ಯ: ಫೆಬ್ರವರಿ 17ರಿಂದ ಫೆಬ್ರವರಿ 21ರವೆರೆಗೆ - ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ.
ಮೂರನೇ ಟೆಸ್ಟ್ ಪಂದ್ಯ: ಮಾರ್ಚ್ 1ರಿಂದ ಮಾರ್ಚ್ 5ರವೆರೆಗೆ - ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ.
ನಾಲ್ಕನೇ ಟೆಸ್ಟ್ ಪಂದ್ಯ: ಮಾರ್ಚ್ 9ರಿಂದ ಮಾರ್ಚ್ 13ರವರೆಗೆ - ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.

ಮೊದಲ ಟೆಸ್ಟ್‌ಗೆ ವಾಸಿಂ ಜಾಫರ್ ಅವರ ಭಾರತದ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಆಸೀಸ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತದ ಪೂರ್ಣ ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications