IND vs AUS 1st Test: ಅಶ್ವಿನ್‌ಗೆ 5 ವಿಕೆಟ್; ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ & 132 ರನ್‌ಗಳ ಭರ್ಜರಿ ಜಯ

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು 91 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಆತಿಥೇಯ ಭಾರತ ತಂಡ ಇನ್ನಿಂಗ್ಸ್ ಹಾಗೂ 132 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ನಾಲ್ಕು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡವನ್ನು ಮಣಿಸುವುದರ ಮೂಲಕ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದ್ದು, ಗೆಲುವಿನ ಹುಮ್ಮಸ್ಸಿನಿಂದ ಬಂದಿದ್ದ ಆಸ್ಟ್ರೇಲಿಯಾ ತಂಡಕ್ಕೆ ಭಾರೀ ಮುಖಭಂಗವಾಗಿದೆ.
ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್‌ಗಳಿಗೆ ಆಲೌಟ್ ಆಗಿತ್ತು. 223 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಪ್ರವಾಸಿ ಆಸ್ಟ್ರೇಲಿಯಾ 91 ರನ್‌ಗಳಿಗೆ ಸರ್ವಪತನ ಕಂಡಿತು. ಹೀಗಾಗಿ ಭಾರತ ತಂಡ ಒಂದು ಇನ್ನಿಂಗ್ಸ್ ಬಾಕಿ ಇರುವಂತೆಯೇ 132 ರನ್‌ಗಳ ಅಭೂತಪೂರ್ವ ಜಯ ತನ್ನದಾಗಿಸಿಕೊಂಡಿತು.

ರವಿಚಂದ್ರನ್ ಅಶ್ವಿನ್ ತಮ್ಮ 31ನೇ ಐದು ವಿಕೆಟ್ ಗೊಂಚಲು
ಭಾರತ ತಂಡದ ಬಿಗಿ ಬೌಲಿಂಗ್‌ನ ಎದುರು ಆಸ್ಟ್ರೇಲಿಯಾದ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ಎರಡೂ ಇನ್ನಿಂಗ್ಸ್ ಸೇರಿ ಕನಿಷ್ಠ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ.
ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ರವಿಚಂದ್ರನ್ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ರವಿಚಂದ್ರನ್ ಅಶ್ವಿನ್ ತಮ್ಮ 31ನೇ ಐದು ವಿಕೆಟ್ ಗೊಂಚಲು ಪಡೆದಂತಾಯಿತು.
ಇನ್ನು ಮೊದಲ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದ್ದ ರವೀಂದ್ರ ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ, ಉಳಿದ ಒಂದು ವಿಕೆಟ್ ಅಕ್ಷರ್ ಪಟೇಲ್ ಪಾಲಾಯಿತು.

ರೋಹಿತ್ ಶರ್ಮಾ 120 ರನ್, ಅಕ್ಷರ್ ಪಟೇಲ್ 84 ರನ್
ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಸ್ಟೀವನ್ ಸ್ಮಿತ್ 25 ರನ್ ಗಳಿಸಿದ್ದು ದೊಡ್ಡದಾಗಿದೆ. ಉಳಿದಂತೆ ಲ್ಯಾಬುಶ್ಚಾಗ್ನೆ 17 ರನ್, ಡೇವಿಡ್ ವಾರ್ನರ್ 10 ರನ್, ಅಲೆಕ್ಸ್ ಕ್ಯಾರಿ 10 ರನ್ ಗಳಿಸಿದ್ದು ಬಿಟ್ಟರೆ, ಉಳಿದವರಾರು ಎರಡಂಕಿ ಮೊತ್ತ ದಾಟಲಿಲ್ಲ.
ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ 177 ರನ್‌ಗಳಿಗೆ ಆಲೌಟ್ ಆಗಿತ್ತು. ಮಾರ್ನಸ್ ಲ್ಯಾಬುಶ್ಚಾಗ್ನೆ 49 ರನ್ ತಂಡದ ಪರ ಹೆಚ್ಚಿನ ಸ್ಕೋರ್ ಆಗಿತ್ತು. 177 ರನ್‌ಗಳಿಗೆ ಪ್ರತ್ಯುತ್ತರವಾಗಿ ಭಾರತ ತಂಡ ರೋಹಿತ್ ಶರ್ಮಾ 120 ರನ್, ಅಕ್ಷರ್ ಪಟೇಲ್ 84 ರನ್, ರವೀಂದ್ರ ಜಡೇಜಾ 70 ರನ್ ಮತ್ತು ಮೊಹಮ್ಮದ್ ಶಮಿ ಅವರ 37 ರನ್‌ಗಳ ನೆರವಿನಿಂದ 400 ರನ್ ಪೇರಿಸಿತ್ತು.

7 ವಿಕೆಟ್ ಮತ್ತು 70 ರನ್ ಬಾರಿಸಿದ ರವೀಂದ್ರ ಜಡೇಜಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ
ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಚೊಚ್ಚಲ ಪಂದ್ಯವಾಡಿದ ಟಾಡ್ ಮರ್ಫಿ 47 ಓವರ್‌ಗಳಲ್ಲಿ 124 ರನ್ ನೀಡಿ 7 ವಿಕೆಟ್ ಕಬಳಿಸಿದರು. ನಾಯಕ ಪ್ಯಾಟ್ ಕಮ್ಮಿನ್ಸ್ 2 ವಿಕೆಟ್ ಪಡೆದರೆ, ನಾಥನ್ ಲಿಯಾನ್ ಒಂದು ವಿಕೆಟ್ ಪಡೆದಿದ್ದರು.
ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಎರಡೂ ಇನ್ನಿಂಗ್ಸ್ ಸೇರಿ 7 ವಿಕೆಟ್ ಮತ್ತು ಬ್ಯಾಟಿಂಗ್‌ನಲ್ಲಿ 70 ರನ್ ಬಾರಿಸಿದ್ದರಿಂದ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications