For Quick Alerts
ALLOW NOTIFICATIONS  
For Daily Alerts
 

IND vs AUS: ಭಾರತ vs ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

Border-Gavaskar Trophy: India vs Australia 1st Test Toss Report, Playing 11 And Live ScoreIndia vs Australia: The 1st match of the Border-Gavaskar Trophy Test series is underway today (Thursday, February 9) in Nagpur. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು (ಗುರುವಾರ, ಫೆಬ್ರವರಿ 9) ನಾಗ್ಪುರದಲ್ಲಿ ನಡೆಯುತ್ತಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು (ಗುರುವಾರ, ಫೆಬ್ರವರಿ 9) ನಾಗ್ಪುರದಲ್ಲಿ ನಡೆಯುತ್ತಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವುದಾಗಿ ತಿಳಿಸಿದರು. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಬಹು ನಿರೀಕ್ಷಿತ ಟೆಸ್ಟ್ ಸರಣಿಯ ಮೊದಲ ಪಂದ್ಯ ಭಾರೀ ಕುತೂಹಲ ಮೂಡಿಸಿದೆ. ಪಂದ್ಯಕ್ಕೂ ಮುನ್ನವೇ ನಾಗ್ಪುರ ಪಿಚ್ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರು ಮತ್ತು ಮಾಧ್ಯಮಗಳು ವಿವಾದ ಎಬ್ಬಿಸಿವೆ. ಅಲ್ಲದೇ ಆಸ್ಟ್ರೇಲಿಯಾ ತಂಡ ನಾಗ್ಪುರದಲ್ಲಿ ಅಭ್ಯಾಸ ಮಾಡದೇ ಬೆಂಗಳೂರಿನ ಆಲೂರು ಮೈದಾನ ಆಯ್ಕೆ ಮಾಡಿಕೊಂಡಿತ್ತು.

ಭಾರತ ತಂಡದ ಪರ ಸೂರ್ಯಕುಮಾರ್ ಯಾದವ್ ಮತ್ತು ವಿಕೆಟ್ ಕೀಪರ್೦ ಬ್ಯಾಟ್ಸ್‌ಮನ್ ಕೆಎಸ್ ಭರತ್ ಅವರು ಚೊಚ್ಚಲ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಸ್ಪಿನ್ನರ್ ಟಾಡ್ ಮರ್ಫಿ ಆಸ್ಟ್ರೇಲಿಯಾ ತಂಡದ ಪರ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ ಮತ್ತು ಕುಲದೀಪ್ ಯಾದವ್ ಅವರು ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಆರು ತಿಂಗಳ ಬಳಿಕ ತಂಡಕ್ಕೆ ಮರಳಿದ್ದಾರೆ.

ಎದುರಾಳಿ ಆಸ್ಟ್ರೇಲಿಯಾ ತಂಡದಲ್ಲಿ ವೇಗಿಗಳಾದ ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್ ಮತ್ತು ಕ್ಯಾಮೆರಾನ್ ಗ್ರೀನ್ ಹೊರಗುಳಿದಿದ್ದಾರೆ.

ಕೆಎಸ್ ಭರತ್ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಕಾರಣ ವಿಕೆಟ್‌ಕೀಪರ್ ಸ್ಥಾನದ ಸ್ಪರ್ಧೆಯಲ್ಲಿದ್ದ ಇಶಾನ್ ಕಿಶನ್ ಬೆಂಚ್ ಕಾಯಿಸಬೇಕಾಗಿದೆ. ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಭಾರತದ ಇನ್ನಿಂಗ್ಸ್ ಆರಂಭಿಸಲಿದ್ದಾರೆ. 3ನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಮತ್ತು 4ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸ್ಥಾನವನ್ನು ಗಳಿಸಲು ಭಾರತಕ್ಕೆ ನಾಲ್ಕು ಪಂದ್ಯಗಳ ಸರಣಿಯಲ್ಲಿ ದೊಡ್ಡ ಅಂತರದ ಗೆಲುವಿನ ಅಗತ್ಯವಿದೆ. ಇದೇ ವೇಳೆ ನಾಗ್ಪುರದ ಪಿಚ್ ಸ್ಪಿನ್ನರ್‌ಗಳಿಗೆ ನೆರವು ನೀಡುವ ನಿರೀಕ್ಷೆಯಿದೆ, ಆದ್ದರಿಂದ ಭಾರತ ಮೂವರು ಸ್ಪಿನ್ನರ್‌ಗಳೊಂದಿಗೆ ಆಡುತ್ತಿದ್ದರೆ, ಆಸ್ಟ್ರೇಲಿಯಾ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಆಡುತ್ತಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ (ಉಪನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕಾರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್

Story first published: Thursday, February 9, 2023, 9:06 [IST]
Other articles published on Feb 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+