IND vs AUS: ಮಳೆಯಿಂದಾಗಿ ಗಬ್ಬಾ ಟೆಸ್ಟ್ ಪಂದ್ಯ ಡ್ರಾ
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬ್ರಿಸ್ಬೇನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗಿದೆ. ಕೊನೆಯ ದಿನದಂದು ಪಂದ್ಯ ರೋಚಕ ತಿರುವನ್ನು ತಲುಪಿತು. ಆದರೆ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಐದು ಪಂದ್ಯಗಳ ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಮುಂದಿನ ಎರಡು ಪಂದ್ಯಗಳು ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ.
ಗಬ್ಬಾ ಟೆಸ್ಟ್ ಪಂದ್ಯದ ಕೊನೆಯ ದಿನದಾಟದಲ್ಲಿ ಭಾರತ ತಂಡದ ಬೌಲರ್‌ಗಳ ಅದ್ಭುತ ಪ್ರದರ್ಶನದಿಂದಾಗಿ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಮಂಕಾಯಿತು. ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ಅನ್ನು 7 ವಿಕೆಟ್ ಕಳೆದಕೊಂಡರು 89 ರನ್‌ಗಳಿಗೆ ತತ್ತರಿಸಿ ಡಿಕ್ಲೇರ್ ಮಾಡಿಕೊಂಡಿತು. ಭಾರತಕ್ಕೆ ಗೆಲ್ಲಲು 275 ರನ್‌ಗಳ ಗುರಿಯನ್ನು ನೀಡಿತು. ಆದರೆ, ಭಾರತ 8 ರನ್ ಕಲೆ ಹಾಕುವಷ್ಟರಲ್ಲೇ ಮಳೆರಾಯನ ದರ್ಶನವಾಯಿತು. ಹೀಗಾಗಿ ಪಂದ್ಯವನ್ನು ಮತ್ತೆ ನಿಲ್ಲಿಸಬೇಕಾಯಿತು.

ಆಸ್ಟ್ರೇಲಿಯಾ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಗರಿಷ್ಠ ಮೂರು ವಿಕೆಟ್ ಪಡೆದರೆ, ಆಕಾಶದೀಪ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು. ನಾಯಕ ಪ್ಯಾಟ್ ಕಮಿನ್ಸ್ 22 ರನ್ ಗಳಿಸಿದ ತಂಡದ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಅಲೆಕ್ಸ್ ಕ್ಯಾರಿ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಗಬ್ಬಾ ಟೆಸ್ಟ್ ಪಂದ್ಯದ ಐದನೇ ಮತ್ತು ಕೊನೆಯ ದಿನದಲ್ಲಿ ಆಟ ಮುಂದುವರೆದಿತ್ತು. ಆಸ್ಟ್ರೇಲಿಯಾದ 445 ರನ್‌ಗಳಿಗೆ ಉತ್ತರವಾಗಿ ಭಾರತದ ಮೊದಲ ಇನ್ನಿಂಗ್ಸ್ 260 ರನ್‌ಗಳಿಗೆ ಆಲೌಟ್ ಆಗಿತ್ತು.
ಡಬ್ಲ್ಯೂಟಿಸಿ ಬದಲಾವಣೆ
ಗಬ್ಬಾ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶ ಕಾಣದಿರುವುದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಅಂಕಪಟ್ಟಿಯ ಮೇಲೂ ಪರಿಣಾಮ ಬೀರಿದೆ. ಸೋಲಿನ ದವಡೆಯಿಂದ ಭಾರತ ಪರಾಗಿದೆ. ಆದರೆ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತ ತನ್ನ ಆಗ್ರಸ್ಥಾನ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಗಬ್ಬಾ ಟೆಸ್ಟ್ ಪಂದ್ಯ ಡ್ರಾ ಆಗಿರುವುದರಿಂದ ಭಾರತಕ್ಕೆ ನಾಲ್ಕು ಅಂಕಗಳು ಸಿಕ್ಕಿದೆ. ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತದ ಪಿಸಿಟಿ (ಅಂಕಗಳ ಶೇಕಡಾವಾರು) ಕುಸಿದಿದೆ. ಉತ್ತಮ ಪಿಸಿಟಿ ಮೂಲಕ ಮಾತ್ರ ಫೈನಲ್‌ಗೆ ಭಾರತ ಪ್ರವೇಶ ಸಾಧ್ಯ ಎಂಬುದು ಗೊತ್ತಿರುವ ವಿಚಾರ. ಇಂತಹ ಸಂದರ್ಭದಲ್ಲಿ ಭಾರತದ ಪಿಸಿಟಿ 57.29 ರಿಂದ 55.88 ಕ್ಕೆ ಇಳಿದಿದೆ. ಮತ್ತೊಂದೆಡೆ ಆಸ್ಟ್ರೇಲಿಯಾದ ಪಿಸಿಟಿ ಕೂಡ 60.71 ರಿಂದ 58.88 ಕ್ಕೆ ಕುಸಿದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications