IND vs AUS 3rd Test: ಭಾರತ vs ಆಸ್ಟ್ರೇಲಿಯಾ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಪ್ರವಾಸಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಬುಧವಾರ, ಮಾರ್ಚ್ 1ರಂದು ಇಂದೋರ್‌ನಲ್ಲಿ ಆರಂಭವಾಗಿದೆ.
ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಟೀವನ್ ಸ್ಮಿತ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಸರಣಿ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಎರಡು ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ನಿರೀಕ್ಷೆಯಂತೆ ಕಳಪೆ ಫಾರ್ಮ್‌ನಲ್ಲಿದ್ದ ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್ ಬದಲಿಗೆ ಯುವ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಆಡುವ 11ರ ನಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ವೇಗಿ ಮೊಹಮ್ಮದ್ ಶಮಿ ಬದಲಿಗೆ ಉಮೇಶ್ ಯಾದವ್ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಮಿಚೆಲ್ ಸ್ಟಾರ್ಕ್ ಅವಕಾಶ ಪಡೆದಿದ್ದರೆ, ಗಾಯಾಳು ಡೇವಿಡ್ ವಾರ್ನರ್ ಬದಲಿಗೆ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ತಂಡಕ್ಕೆ ಮರಳಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಆಡುವ 11ರ ಬಳಗ
ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್‌ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications