ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Border-Gavaskar Trophy: ಭಾರತ vs ಆಸ್ಟ್ರೇಲಿಯಾ ಪೂರ್ಣ ತಂಡಗಳು, ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

Border-Gavaskar Trophy: India vs Australia Full Teams, Series Schedule, TV And Live Streaming Details

ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ಇದೇ ಫೆಬ್ರವರಿ 9ರಿಂದ ಆರಂಭವಾಗಲಿದೆ.

ಭಾರತ ತಂಡ ಸತತ ಮೂರು ಬಾರಿ ಟ್ರೋಫಿ ಗೆದ್ದಿದ್ದು, ಅದರಲ್ಲಿ ಎರಡು ಬಾರಿ ಆಸ್ಟ್ರೇಲಿಯಾ ನೆಲದಲ್ಲಿ ಎನ್ನುವುದು ಮತ್ತೊಂದು ವಿಶೇಷವಾಗಿದೆ. ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ ಉಳಿಸಿಕೊಳ್ಳಲು ಸೆಣಸಾಡಲಿದೆ.

ಈ ಇಬ್ಬರಲ್ಲಿ ಈತ ಮಾತ್ರ ಮುಂದಿನ ಟಿ20 ವಿಶ್ವಕಪ್ ಆಡುತ್ತಾನೆ; ವಾಸಿಂ ಜಾಫರ್ ಭವಿಷ್ಯಈ ಇಬ್ಬರಲ್ಲಿ ಈತ ಮಾತ್ರ ಮುಂದಿನ ಟಿ20 ವಿಶ್ವಕಪ್ ಆಡುತ್ತಾನೆ; ವಾಸಿಂ ಜಾಫರ್ ಭವಿಷ್ಯ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವು 2019-20ರ ಋತುವಿನಲ್ಲಿ ಮೊದಲ ಬಾರಿಗೆ ಆಸೀಸ್ ತಂಡವನ್ನು ಅವರದೇ ನೆಲದಲ್ಲಿ ಸೋಲಿಸಿ ದಾಖಲೆ ಬರೆಯಿತು. ಒಂದು ವರ್ಷದ ನಂತರ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು ಮತ್ತೊಮ್ಮೆ ರೋಚಕವಾಗಿ ಸರಣಿ ಗೆದ್ದು ಬೀಗಿತು.

6 ವರ್ಷಗಳ ಹಿಂದೆ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಕೈಗೊಂಡಿತ್ತು

6 ವರ್ಷಗಳ ಹಿಂದೆ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಕೈಗೊಂಡಿತ್ತು

2017ರ ನಂತರ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ತವರಿನಲ್ಲಿ ಟೆಸ್ಟ್ ಸರಣಿ ಆಡುತ್ತಿದೆ. 6 ವರ್ಷಗಳ ಹಿಂದೆ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಕೈಗೊಂಡಿತ್ತು.

ಇದೀಗ ಆಸೀಸ್ ತಂಡದಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಉತ್ತಮ ಬ್ಯಾಟಿಂಗ್ ಲೈನ್‌ಅಪ್ ಜೊತೆಗೆ ಮಾರಕ ವೇಗದ ಬೌಲಿಂಗ್ ವಿಭಾಗ ಹೊಂದಿದ್ದಾರೆ. ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಜೊತೆಗೆ ಭಾರತಕ್ಕೆ ಮೊದಲ ಬಾರಿಗೆ ಬರುತ್ತಿರುವ ಸ್ಕಾಟ್ ಬೋಲ್ಯಾಂಡ್ ವೇಗದ ದಾಳಿಯ ಮುಂಚೂಣಿಯಲ್ಲಿದ್ದಾರೆ.

ಶ್ರೇಯಸ್ ಅಯ್ಯರ್ ಮೊದಲ ಟೆಸ್ಟ್‌ ಪಂದ್ಯದಿಂದ ಹೊರಗೆ

ಶ್ರೇಯಸ್ ಅಯ್ಯರ್ ಮೊದಲ ಟೆಸ್ಟ್‌ ಪಂದ್ಯದಿಂದ ಹೊರಗೆ

ಇನ್ನು ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಮಿಚೆಲ್ ಸ್ಟಾರ್ಕ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ ಮತ್ತು ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಸಹ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲದ ಕಾರಣ ಮೊದಲ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ ಮಾಡುವುದಿಲ್ಲ ಎಂದು ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಖಚಿತಪಡಿಸಿದ್ದಾರೆ.

ಇತ್ತ ಭಾರತ ತಂಡಕ್ಕೂ ಗಾಯದ ಸಮಸ್ಯೆ ಕಾಡುತ್ತಿದೆ. ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಿಷಭ್ ಪಂತ್ ಇನ್ನೂ ಚೇತರಿಸಿಕೊಳ್ಳುತ್ತಿದ್ದು ಅವರ ಸೇವೆಯನ್ನು ಭಾರತ ಕಳೆದುಕೊಳ್ಳಲಿದೆ. ಇನ್ನು ಶ್ರೇಯಸ್ ಅಯ್ಯರ್ ಕೂಡ ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಮೇಲೆ ಹೆಚ್ಚಿನ ಜವಾಬ್ದಾರಿ ಇರಲಿದೆ.

ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ

ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ

ಮೊದಲ ಟೆಸ್ಟ್ ಪಂದ್ಯ: ಫೆಬ್ರವರಿ 9ರಿಂದ ಫೆಬ್ರವರಿ 13ರವೆರೆಗೆ - ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ನಾಗ್ಪುರ.

ಎರಡನೇ ಟೆಸ್ಟ್ ಪಂದ್ಯ: ಫೆಬ್ರವರಿ 17ರಿಂದ ಫೆಬ್ರವರಿ 21ರವೆರೆಗೆ - ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ.

ಮೂರನೇ ಟೆಸ್ಟ್ ಪಂದ್ಯ: ಮಾರ್ಚ್ 1ರಿಂದ ಮಾರ್ಚ್ 5ರವೆರೆಗೆ - ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ.

ನಾಲ್ಕನೇ ಟೆಸ್ಟ್ ಪಂದ್ಯ: ಮಾರ್ಚ್ 9ರಿಂದ ಮಾರ್ಚ್ 13ರವರೆಗೆ - ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ

ಮೊದಲ ಏಕದಿನ ಪಂದ್ಯ: ಮಾರ್ಚ್ 17 - ವಾಂಖೆಡೆ ಸ್ಟೇಡಿಯಂ, ಮುಂಬೈ

ಎರಡನೇ ಏಕದಿನ ಪಂದ್ಯ: ಮಾರ್ಚ್ 19 - ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ

ಮೂರನೇ ಏಕದಿನ ಪಂದ್ಯ: ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

ಟಿವಿ ವೀಕ್ಷಣೆ: ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.

ಲೈವ್ ಸ್ಟ್ರೀಮಿಂಗ್: ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಭಾರತದಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ಪೂರ್ಣ ತಂಡಗಳು

ಭಾರತ ಮತ್ತು ಆಸ್ಟ್ರೇಲಿಯಾ ಪೂರ್ಣ ತಂಡಗಳು

ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.

ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಶ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್, ಸ್ಟೀವ್ ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

Story first published: Saturday, February 4, 2023, 13:13 [IST]
Other articles published on Feb 4, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X