Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS: ಬುಮ್ರಾ-ಕಮ್ಮಿನ್ಸ್‌; ಪರ್ತ್‌ನಲ್ಲಿ ಯಾರದು ಮೇಲುಗೈ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭಕ್ಕೂ ಭಾರೀ ಕುತೂಹಲ ಮೂಡಿಸಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ಪರ್ತ್‌ನಲ್ಲಿ ನಡೆಯಲಿದೆ. ಭಾರತದ ನಾಯಕ ರೋಹಿತ್ ಶರ್ಮಾ ಪರ್ತ್ ಟೆಸ್ಟ್ ಆಡುವ ಸಾಧ್ಯತೆ ಕಡಿಮೆ ಇದೆ. ರೋಹಿತ್ ಪರ್ತ್ ಟೆಸ್ಟ್ ಆಡದೇ ಇದ್ದರೆ, ಉಪನಾಯಕ ಜಸ್ಪ್ರೀತ್ ಬುಮ್ರಾ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಹೆಡ್‌ ಕೋಚ್ ಗೌತಮ್ ಗಂಭೀರ್ ಈಗಾಗಲೇ ಸ್ಪಷ್ಟಪಡಿಸಿದ್ದರು. ಬುಮ್ರಾ ನಾಯಕನಾದರೆ ಈ ಪಂದ್ಯದಲ್ಲಿ ಉಭಯ ತಂಡಗಳ ಕಮಾಂಡ್ ವೇಗದ ಬೌಲರ್‌ಗಳ ಕೈಯಲ್ಲಿರಲಿದೆ.

ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾವನ್ನು ಮುನ್ನಡೆಸಿದರೆ, ಆಸ್ಟ್ರೇಲಿಯಾ ತಂಡದ ನಾಯಕತ್ವವನ್ನು ಪ್ಯಾಟ್ ಕಮ್ಮಿನ್ಸ್ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ವಿಶ್ವ ಕ್ರಿಕೆಟ್‌ ಪ್ಯಾಟ್ ಕಮ್ಮಿನ್ಸ್‌ ತಮ್ಮ ನಾಯಕತ್ವವನ್ನು ಸಾಬೀತುಪಡಿಸಿದ್ದಾರೆ. ಪ್ಯಾಟ್ ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಏಕದಿನ ವಿಶ್ವಕಪ್ ಗೆದ್ದಿದೆ. ಆದರೆ, ಭಾರತದ ವಿರುದ್ಧ ಕಾಂಗೂರು ಪಡೆ ಪ್ಯಾಟ್ ಕಮ್ಮಿನ್ಸ್ ಮುಂದಾಳತ್ವದಲ್ಲಿ ಇಲ್ಲಿಯವರೆಗೂ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಈ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವ ಪರೀಕ್ಷೆ ನಡೆಯಲಿದೆ.

Border-Gavaskar Trophy Jasprit Bumrah-Pat Cummins rivalry at Perth ground

ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಅವರಿಗೆ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮಹತ್ವದಾಗಿದೆ. ಏಕೆಂದರೆ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ಬುಮ್ರಾ ವಹಿಸಲಿದ್ದಾರೆ. ಅಲ್ಲದೆ, ಅವರು ಮುಂದಿನ ಭಾರತ ತಂಡದ ನಾಯಕನಾಗುವ ರೇಸ್‌ನಲ್ಲಿಯೂ ಇದ್ದಾರೆ. ಒಂದು ವೇಳೆ ಜಸ್ಪ್ರೀತ್ ಬುಮ್ರಾ ಅವರು ಎಲ್ಲಾ ಐದು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿ ಸರಣಿ ಗೆದ್ದರೆ, ರೋಹಿತ್ ಶರ್ಮಾ ಅವರ ನಾಯಕತ್ವ ಸ್ಥಾನಕ್ಕೆ ಕುತ್ತು ಬರಲಿದೆ. ಇದರಿಂದ ಜಸ್ಪ್ರೀತ್ ಬುಮ್ರಾ ಮತ್ತು ಪ್ಯಾಟ್ ಕಮ್ಮಿನ್ಸ್ ಅವರಿಬ್ಬ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ.

ಪರ್ತ್‌ನಲ್ಲಿ ಬುಮ್ರಾ ದಾಖಲೆ

ಜಸ್ಪ್ರೀತ್ ಬುಮ್ರಾ ಪರ್ತ್‌ನಲ್ಲಿ ಇದುವರೆಗೆ ಕೇವಲ ಒಂದು ಟೆಸ್ಟ್ ಪಂದ್ಯವನ್ನಾಡಿದ್ದಾರೆ. ಅವರು 2018 ರಲ್ಲಿ ಈ ಪಂದ್ಯವನ್ನು ಆಡಿದ್ದು, 51.2 ಓವರ್‌ಗಳನ್ನು ಬೌಲಿಂಗ್ ಮಾಡಿದ್ದಾರೆ. 18.40 ರ ಸರಾಸರಿಯಲ್ಲಿ 92 ರನ್‌ಗೆ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಪರ್ತ್ ಟೆಸ್ಟ್ ಪಂದ್ಯಗಳಲ್ಲಿ ಬುಮ್ರಾ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ. ಇಶಾಂತ್ ಶರ್ಮಾ ಕೂಡ ಬುಮ್ರಾಗೆ ಸರಿಸಮಾನವಾಗಿ 5 ವಿಕೆಟ್‌ಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ.

ಪ್ಯಾಟ್ ರೆಕಾರ್ಡ್

ಪರ್ತ್ ಮೈದಾನದಲ್ಲಿ ಪ್ಯಾಟ್ ಕಮ್ಮಿನ್ಸ್ ಟೆಸ್ಟ್ ದಾಖಲೆ ನೋಡುವುದಾದರೆ, ಇಲ್ಲಿವರೆಗೆ ಅವರು ಆಡಿದ 4 ಟೆಸ್ಟ್ ಪಂದ್ಯಗಳಲ್ಲಿ 12 ಬ್ಯಾಟರ್‌ಗಳನ್ನು ಔಟ್ ಮಾಡಿದ್ದಾರೆ. ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಉರುಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಪರ್ತ್‌ನಲ್ಲಿ ಕಮ್ಮಿನ್ಸ್‌ ಕೂಡ ಆಸ್ಟ್ರೇಲಿಯಾ ಪರ ಮೂರನೇ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್‌ ಆಗಿದ್ದಾರೆ. ಈ ಬಾರಿ ಟೆಸ್ಟ್ ಸರಣಿಯಲ್ಲಿ ಇಬ್ಬರ ಬೌಲಿಂಗ್ ಪ್ರದರ್ಶನದ ಮೇಲೆ ಎಲ್ಲರ ಕಣ್ಣಿದೆ.

Story first published: Sunday, November 17, 2024, 20:04 [IST]
Other articles published on Nov 17, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+