ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಈ ತಂಡವೇ ಗೆಲ್ಲಲಿದೆ ಎಂದ ಮೈಕಲ್ ವಾನ್

Border Gavaskar trophy: Michael Vaughan predicts India will win upcoming series against Australia

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಈ ಎರಡು ದೇಶಗಳ ಕ್ರಿಕೆಟ್ ಅಭಿಮಾನಿಗಳನ್ನು ಮಾತ್ರವಲ್ಲದೆ ಇತರ ಕ್ರಿಕೆಟ್ ಪ್ರೇಮಿಗಳು ಕೂಡ ಉತ್ಸುಕತರೆಯಿಂದ ಕಾಯುವಂತೆ ಮಾಡಿದೆ. ಕ್ರಿಕೆಟ್ ಪ್ರೇಮಿಗಳ ಜೊತೆಗೆ ಕ್ರಿಕೆಟ್ ಪಂಡಿತರು, ಮಾಜಿ ಕ್ರಿಕೆಟಿಗರು ಕೂಡ ಈ ಸರಣಿಯನ್ನು ಎದುರು ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿದ್ದು ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಆಗಾಗ ಟೀಮ್ ಇಂಡಿಯಾ ವಿರುದ್ಧ ಹೇಳಿ ಭಾರತೀಯ ಅಭಿಮಾನಿಗಳನ್ನು ಕೆಣಕುವ ಮೈಕಲ್ ವಾನ್ ಈ ಬಾರಿಯ ಸರಣಿಗೂ ಮುನ್ನ ನೀಡಿರುವ ಪ್ರತಿಕ್ರಿಯೆ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ನಿಜಕ್ಕೂ ಅಚ್ಚರಿ ಮೂಡಿಸಿದೆ. ಭಾರತದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ಸರಣಿ ಗೆಲುವು ಸಾಧಿಸಲಿದೆ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಮೈಕಲ್ ವಾನ್.

Ind Vs Aus Test: ಟೆಸ್ಟ್ ಸರಣಿಗೆ ಈ ರೀತಿ ಪಿಚ್ ಬೇಕು ಎಂದು ಕ್ಯುರೇಟರ್‌ಗಳಿಗೆ ಮನವಿ ಮಾಡಿದ ದ್ರಾವಿಡ್ ಮತ್ತು ರೋಹಿತ್ ಶರ್ಮಾInd Vs Aus Test: ಟೆಸ್ಟ್ ಸರಣಿಗೆ ಈ ರೀತಿ ಪಿಚ್ ಬೇಕು ಎಂದು ಕ್ಯುರೇಟರ್‌ಗಳಿಗೆ ಮನವಿ ಮಾಡಿದ ದ್ರಾವಿಡ್ ಮತ್ತು ರೋಹಿತ್ ಶರ್ಮಾ

ಟ್ವಿಟ್ಟರ್‌ನಲ್ಲಿ ಅಭಿಮಾನಿಯಿಂದ ಪ್ರಶ್ನೆ

ಟ್ವಿಟ್ಟರ್‌ನಲ್ಲಿ ಸದಾ ಚಟುವಟಿಕೆಯಿಂದಿರುವ ಮೈಕಲ್ ವಾನ್ ಅವರಲ್ಲಿ ಅಭಿಮಾನಿಯೊಬ್ಬರು ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಗೆಲುವು ಸಾಧಿಸುವ ತಂಡ ಯಾವುದು ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಮೈಕಲ್ ವಾನ್ ನೇರವಾಗಿ ಉತ್ತರ ನೀಡಿದ್ದು "ಭಾರತ ಗೆಲ್ಲಲಿದೆ" ಎಂದು ಉತ್ತರಿಸಿದ್ದಾರೆ. ಮೈಕಲ್ ವಾನ್ ನೀಡಿರುವ ಈ ಉತ್ತರಕ್ಕೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಭವಿಷ್ಯ ನುಡಿದು ನಗೆಪಾಟಲಿಗೀಡಾಗಿದ್ದ ವಾನ್

ಭವಿಷ್ಯ ನುಡಿದು ನಗೆಪಾಟಲಿಗೀಡಾಗಿದ್ದ ವಾನ್

ಇನ್ನು ಗಮನಾರ್ಹ ಅಂಶವೆಂದರೆ ಭಾರತ ಸದ್ಯ ಬಾರ್ಡರ್-ಗವಾಸ್ಕರ್ ಟ್ರೋಪಿಯ ಹಾಲಿ ಚಾಂಪಿಯನ್ ಎನಿಸಿಕೊಂಡಿದೆ. 2020-21ರ ಅವಧಿಯಲ್ಲಿ ಆಸ್ಟ್ರೇಲಿಯಾಗೆ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು ಅದರಲ್ಲೇ ನೆಲದಲ್ಲಿ ಮಣಿಸಿ ಸರಣಿಯಲ್ಲಿ ವಶಕ್ಕೆ ಪಡೆದುಕೊಂಡಿತ್ತು. ಈ ಸಂದರ್ಭದಲ್ಲಿ ಭಾರತದ ವಿರುದ್ಧ ಮೈಕಲ್ ವಾನ್ ಭವಿಷ್ಯ ನುಡಿದಿದ್ದರು. ಭಾರತ ಒಂದು ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದ ವಾನ್‌ ಮುಖಭಂಗಕ್ಕೆ ಒಳಗಾಗಿದ್ದರು.

ತವರಿನಲ್ಲಿ ಭಾರತದ ಪರಾಕ್ರಮ

ತವರಿನಲ್ಲಿ ಭಾರತದ ಪರಾಕ್ರಮ

ಇನ್ನು ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ತವರಿನಲ್ಲಿ ಈವರೆಗೆ ಒಟ್ಟು 14 ಪಂದ್ಯಗಳನ್ನು ಆಯೋಜಿಸಿದೆ. ಇದರ ಪೈಕಿ 8-4 ಅಂತರದಿಂದ ಭಾರತ ಮೇಲುಗೈ ಸಾಧಿಸಿದೆ. ಎರಡು ಸರಣಿಗಳು ಡ್ರಾಗೊಂಡಿದೆ. ಇನ್ನು ಆಸ್ಟ್ರೇಲಿಯಾ ತಂಡ 2004-05ನೇ ಸಾಲಿನಲ್ಲಿ ಕೊನೆಯ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿದ್ದು ಅದಾದ ಬಳಿಕ ಆಸಿಸ್ ಪಡೆಗೆ ಭಾರತದಲ್ಲಿ ಟೆಸ್ಟ್ ಸರಣಿ ಈವರೆಗೂ ಮರೀಚಿಕೆಯಾಗಿ ಉಳಿದುಕೊಂಡಿದೆ. ಆಸ್ಟ್ರೇಲಿಯಾ ಕೊನೆಯ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಾದ ಆಡಂ ಗಿಲ್‌ಕ್ರಿಸ್ಟ್ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಮುನ್ನಡೆಸಿದ್ದರು.

Story first published: Sunday, February 5, 2023, 15:55 [IST]
Other articles published on Feb 5, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X