ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Border-Gavaskar Trophy: ಭಾರತ ವಿರುದ್ಧ ಮೊದಲ ಪಂದ್ಯದಲ್ಲಿ ಈ ವೇಗಿ ಬೌಲಿಂಗ್ ಮಾಡಲ್ಲ; ಪ್ಯಾಟ್ ಕಮ್ಮಿನ್ಸ್

Border-Gavaskar Trophy: Next 1 Week Is Crucial For Cameron Greenes Recovery Says Pat Cummins

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಭಾರತ ತಂಡ ಶುಕ್ರವಾರ, ಫೆಬ್ರವರಿ 3ರಂದು ನಾಗ್ಪುರದಲ್ಲಿ ಅಭ್ಯಾಸ ಆರಂಭಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೆಬ್ರವರಿ 9ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುವ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

Border-Gavaskar Trophy: ನಾಗ್ಪುರದಲ್ಲಿ ಭಾರತ, ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಅಭ್ಯಾಸ ಆರಂಭBorder-Gavaskar Trophy: ನಾಗ್ಪುರದಲ್ಲಿ ಭಾರತ, ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಅಭ್ಯಾಸ ಆರಂಭ

ಇನ್ನು ಭಾರತ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಖಚಿತಪಡಿಸಿದ್ದಾರೆ.

ಫಾಕ್ಸ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡಿದ ಪ್ಯಾಟ್ ಕಮ್ಮಿನ್ಸ್, ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್‌ ಚೇತರಿಕೆಗೆ ಮುಂದಿನ ವಾರ ಬಹಳ ಮುಖ್ಯವಾಗಿದೆ. ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದಲ್ಲಿ ಗ್ರೀನ್ ಆಸ್ಟ್ರೇಲಿಯಾ ತಂಡಕ್ಕಾಗಿ ಬೌಲಿಂಗ್ ಮಾಡುವುದಿಲ್ಲ ಎಂದು ಪ್ಯಾಟ್ ಕಮ್ಮಿನ್ಸ್ ಖಚಿತಪಡಿಸಿದರು.

Border-Gavaskar Trophy: Next 1 Week Is Crucial For Cameron Greenes Recovery Says Pat Cummins


ವಿಶ್ವದ ನಂಬರ್ 1 ಟೆಸ್ಟ್ ಬೌಲರ್ ಕೂಡ ಆಗಿರುವ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಕ್ಯಾಮರೂನ್ ಗ್ರೀನ್ ತಮ್ಮ ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಶೀಘ್ರವಾಗಿ ಫಿಟ್‌ನೆಸ್‌ಗೆ ಮರಳಲಿದ್ದಾರೆ ಎಂದು ಕಮ್ಮಿನ್ಸ್ ಭರವಸೆ ವ್ಯಕ್ತಪಡಿಸಿದರು.

IND vs AUS: ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಕಠಿಣ ತಯಾರಿ ಆರಂಭಿಸಿದ ಚೇತೇಶ್ವರ ಪೂಜಾರIND vs AUS: ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಕಠಿಣ ತಯಾರಿ ಆರಂಭಿಸಿದ ಚೇತೇಶ್ವರ ಪೂಜಾರ

ಇದೇ ವೇಳೆ ಆಸ್ಟ್ರೇಲಿಯಾದ ವೇಗದ ಬೌಲಿಂಗ್ ವಿಭಾಗವನ್ನು ಶ್ಲಾಘಿಸಿದ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್ ಮತ್ತು ಸ್ಕಾಟ್ ಬೋಲ್ಯಾಂಡ್ ಅವರು ಭಾರತದ ಸ್ಪಿನ್ನ ಸ್ನೇಹಿ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.

Border-Gavaskar Trophy: Next 1 Week Is Crucial For Cameron Greenes Recovery Says Pat Cummins

ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದ ನಂಬರ್ 1 ತಂಡವಾಗಿರುವ ಆಸ್ಟ್ರೇಲಿಯಾ ತಂಡವು ಭಾರತದ ಪ್ರಾಬಲ್ಯಕ್ಕೆ ಅವರದೇ ನೆಲದಲ್ಲಿ ಸವಾಲು ಹಾಕಲು ಸಿದ್ಧವಾಗಿದೆ. 2004-05ರಿಂದ ಭಾರತದಲ್ಲಿ ಸರಣಿ ಜಯ ಗಳಿಸದ ಆಸೀಸ್ ಪಡೆ, ತವರಿನಲ್ಲಿ ತಮ್ಮ ಕೊನೆಯ ಎರಡು ಬಾರ್ಡರ್-ಗವಾಸ್ಕರ್ ಸರಣಿಗಳನ್ನು ಸೋತ ನಂತರ ಭಾರತದ ವಿರುದ್ಧ ಒತ್ತಡದಲ್ಲಿದೆ.

ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.

Story first published: Friday, February 3, 2023, 18:25 [IST]
Other articles published on Feb 3, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X