Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬಾರ್ಡರ್-ಗವಾಸ್ಕರ್ ಟ್ರೋಫಿ: ಸರಣಿ ಗೆಲ್ಲಲು ಭಾರತಕ್ಕೆ ಹೊಸ ಗುರಿ ನೀಡಿದ ಮಾಜಿ ಕೋಚ್!

Border Gavaskar trophy: Ravi Shastri set target to India to win test series against Australia

ಫೆಬ್ರವರಿ 9ರಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೇಲೆ ಕ್ರಿಕೆಟ್ ಅಭಿಮಾನಿಗಳ ಕಾತುರ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಭಾರತ ತಂಡಕ್ಕೆ ಸರಣಿ ಗೆಲ್ಲಲು ಗುರಿ ನಿಗದಿಪಡಿಸಿದ್ದಾರೆ. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ತನ್ನ ವಶಕ್ಕೆ ಪಡೆಯಲೇಬೇಕು ಎಂದಿದ್ದಾರೆ ರವಿ ಶಾಸ್ತ್ರಿ.

ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿರುವ ರವಿ ಶಾಸ್ತ್ರಿ ತವರಿನಲ್ಲಿ ನಡೆಯಲಿರುವ ಸರಣಿಗೆ ಭಾರತ ಎಲ್ಲಾ ವಿಭಾಗಗಳಲ್ಲಿಯೂ ಸಿದ್ಧವಾಗಿದೆ ಎಂದಿದ್ದು ಮೊದಲ ಪಂದ್ಯದಿಂದಲೇ ಪ್ರವಾಸಿ ತಂಡದ ಮೇಲೆ ಒತ್ತಡವನ್ನು ಹೇರುವ ಪ್ರಯತ್ನ ಮಾಡಬೇಕು ಎಂದಿದ್ದಾರೆ.

"ಸರಣಿಯ ಫಲಿತಾಂಶದ ವಿಚಾರವಾಗಿ ನನ್ನ ಪ್ರಕಾರ ಭಾರತ ಕನಿಷ್ಠ 2 ಪಂದ್ಯಗಳ ಅಂತರದಿಂದ ವಶಕ್ಕೆ ಪಡೆಯಬೇಕು. ನೀವು ತವರಿನಲ್ಲಿ ಈ ಸರಣಿ ಆಡುತ್ತಿದ್ದೀರಿ. ಅದಕ್ಕೆ ಬೇಕಿರುವ ಬೌಲರ್‌ಗಳನ್ನು ನೀವು ಹೊಂದಿದ್ದೀರಿ. ಅದ್ಭುತವಾದ ಬ್ಯಾಟಿಂಗ್ ಲೈನಪ್ ಕೂಡ ಇದೆ. ಹಾಗಾಗಿ ಮೊದಲ ಪಂದ್ಯದಿಂದಲೇ ಎದುರಾಳಿಗಳ ಮೇಲೆ ಒತ್ತಡವನ್ನು ಹೇರಬೇಕು" ಎಂದಿದ್ದಾರೆ ರವಿ ಶಾಸ್ತ್ರಿ.

ರವಿ ಶಾಸ್ತ್ರಿ ಮಾರ್ಗದರ್ಶನದಲ್ಲಿ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ನಡೆದ ಎರಡು ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. 2018-19ರಲ್ಲಿ ಪ್ರವಾಸ ಕೈಗೊಂಡಿದ್ದಾಗ ಮೊಟ್ಟ ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಅದರದ್ದೇ ನೆಲಕದಲ್ಲಿ ಮಣಿಸಿದ್ದ ಭಾರತ 2020-21ನೇ ಸಾಲಿನಲ್ಲಿಯೂ ಈ ಸಾಧನೆಯನ್ನು ಪುನರಾವರ್ತಿಸಿತ್ತು. ಪ್ರಮುಖ ಆಟಗಾರರ ಅಲಭ್ಯತೆಯ ಮಧ್ಯೆಯೂ ಭಾರತ ತಂಡದ ಸಾಧನೆಗೆ ವಿಶ್ವ ಕ್ರಿಕೆಟ್ ನಿಬ್ಬೆರಗಾಗಿತ್ತು. ಈ ಮೂಲಕ ರವಿ ಶಾಸ್ತ್ರಿ ಕೋಚಿಂಗ್ ಅವಧಿಯಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಬಲಿಷ್ಠ ತಂಡವಾಗಿ ಹೊರಹೊಮ್ಮಿತ್ತು.

ಆದರೆ ಈ ಬಾರಿ ಭಾರತ ತವರಿನಲ್ಲಿಯೇ ಆಡುತ್ತಿದ್ದು ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯಕ್ಕೆ ಟಿಕೆಟ್ ಗಿಟ್ಟಿಸಿಕೊಳ್ಳಬೇಕಾದ ಸವಾಲು ಕೂಡ ಇದೆ. ಈ ಸ್ಪರ್ಧೆಯಲ್ಲಿ ಆಸ್ಟ್ರೇಲಿಯಾ ಮುಂದಿದ್ದು ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಟೆಸ್ಟ್‌ನಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.

ಇನ್ನು ಆಸ್ಟ್ರೇಲಿಯಾ ತಂಡ 2004-05ರ ಬಳಿಕ ಒಂದು ಟೆಸ್ಟ್ ಸರಣಿಯನ್ನು ಕೂಡ ಭಾರತದ ನೆಲದಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಆಸಿಸ್ ತಂಡ ಭಾರತದಲ್ಲಿ ಈ ಬಾರಿ ಸರಣಿ ಗೆಲ್ಲಲೇಬೇಕೆಂದು ಪಣತೊಟ್ಟಿದೆ.

ಇತ್ತಂಡಗಳ ಸ್ಕ್ವಾಡ್: ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್
ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Monday, February 6, 2023, 20:37 [IST]
Other articles published on Feb 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+