Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Aus vs Ind: ಆಸ್ಟ್ರೇಲಿಯಾಗೆ ಕಾಡಲಿದ್ದಾರೆ ಭಾರತದ ಬೌಲರ್‌ಗಳು: ಸಬಾ ಕರೀಮ್ ಎಚ್ಚರಿಕೆ

Border-Gavaskar Trophy: Saba Karim praises Indian bowlers said Australia will be facing a tough bowling attack

ನಾಗ್ಪುರದಲ್ಲಿ ಗುರುವಾರದಿಂದ ಆರಂಭವಾಗಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಎರಡು ತಂಡಗಳು ಕೂಡ ಸಜ್ಜಾಗಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಭಾರತದ ಬೌಲಿಂಗ್ ವಿಭಾಗ ಅತ್ಯಂತ ಕಠಿಣ ಸವಾಲನ್ನು ನೀಡಲಿದೆ ಎಂದಿದ್ದಾರೆ ಸಬಾ ಕರೀಮ್.

ಇಂಡಿಯಾ ನ್ಯೂಸ್ ಸ್ಪೋರ್ಟ್ಸ್‌ಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಸಬಾ ಕರೀಮ್ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಇಬ್ಬರು ಕೂಡ ಅದ್ಭುತವಾಗಿ ಬೌಲಿಂಗ್ ದಾಳಿ ನಡೆಸಲಿದ್ದು ಆಸ್ಟ್ರೇಲಿಯಾದ ಬ್ಯಾಟರ್‌ಗಳು ಸುಲಭವಾಗಿ ರನ್‌ಗಳಿಸಲು ಅವಕಾಶ ನೀಡಲಾರರು ಎಂದಿದ್ದಾರೆ. "ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಒಬ್ಬರಿಗೊಬ್ಬರು ಅದ್ಭುತವಾಗಿ ಬೆಂಬಲ ನೀಡಲಿದ್ದಾರೆ. ಇಬ್ಬರು ಕೂಡ ಎದುರಾಳಿ ಬ್ಯಾಟರ್‌ಗಳಿಗೆ ರನ್‌ಗಳಿಸಲು ಸುಲಭವಾಗಿ ಅವಕಾಶ ನೀಡಲಾರರು. ಜಜೇಜಾ ಎರಡು ದಿಕ್ಕಿಗೂ ಚೆಂಡನ್ನು ತಿರುಗಿಸಬಲ್ಲ ಬೌಲರ್" ಎಂದಿದ್ದಾರೆ ಸಬಾ ಕರೀಮ್.

"ಭಾರತವು ಅತ್ಯಂತ ಸಮತೋಲಿತ ಬೌಲಿಂಗ್ ವಿಭಾಗವನ್ನು ಹೊಂದಿದೆ. ಆದರಲ್ಲೂ ಸ್ಪಿನ್ನರ್‌ಗಳದ್ದು ಇಲ್ಲಿ ಮೇಲುಗೈ. ಆದರೆ ನಮ್ಮ ವೇಗದ ಬೌಲರ್‌ಗಳು ಸ್ಪಿನ್ನರ್‌ಗಳಿಗೆ ಅದ್ಭುತದ ಬೆಂಬಲ ನೀಡಲಿದ್ದಾರೆ. ಭಾರತೀಯ ಪರಿಸ್ಥಿತಿಗಳಲ್ಲಿ ರಿವರ್ಸ್ ಸ್ವಿಂಗ್ ಅನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದು ಅವರಿಗೆ ತಿಳಿದಿದೆ. ಸೂಕ್ತ ವೇಗದ ಬೌಲರ್‌ಗಳೊಂದಿಗೆ ಪಂದ್ಯಕ್ಕೆ ಕಣಕ್ಕಿಳಿಯುವುದು ಬಹಳ ಮುಖ್ಯವಾಗುತ್ತದೆ" ಎಂದಿದ್ದಾರೆ ಸಬಾ ಕರೀಮ್.

ಇತ್ತಂಡಗಳ ಸ್ಕ್ವಾಡ್
ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Tuesday, February 7, 2023, 23:54 [IST]
Other articles published on Feb 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+