
ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದ್ದು ಆಸ್ಟ್ರೇಲಿಯಾ ಈ ಸರಣಿಯಲ್ಲಿ ಮೊದಲ ಗೆಲುವು ಕಂಡಿದೆ. ಈ ಪಂದ್ಯದ ಬಳಿಕ ಇಂದೋರ್ ಪಿಚ್ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಅನೇಕ ಮಾಜಿ ಕ್ರಿಕೆಟಿಗರು ಇಂದೋರ್ ಪಿಚ್‌ನ ಗುಣಮಟ್ಟವನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದೀಗ ಈ ಸಾಲಿಗೆ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಕೂಡ ಸೇರಿಕೊಂಡಿದ್ದಾರೆ.
ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸಬಾ ಕರೀಮ್ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ಗೂ ಚಾಟಿ ಬೀಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶ ಪಡೆಯಲೇ ಬೇಕು ಎಂಬ ಹತಾಶೆಯಿಂದ ಭಾರತ ಟೆಸ್ಟ್ ಕ್ರಿಕೆಟ್‌ಗೆ ಉತ್ಸಾಹ ಕೆಡಿವಂತೆ ಮಾಡಿದೆ ಎಂದಿದ್ದಾರೆ.
"ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶ ಪಡೆಯಲೇಬೇಕು ಎಂಬ ಹತಾಶೆಯಿಂದಾಗಿ ನಾವು ಕ್ರಿಕೆಟ್‌ನ ಸ್ಪೂರ್ತಿಯನ್ನು ಎತ್ತಿ ಹಿಡಿಯ;ಉ ವಿಫಲವಾಗಿದ್ದೇವೆ. ಇಲ್ಲಿ ಟೆಸ್ಟ್‌ನ ನಂಬರ್ 1 ಹಾಗೂ ನಂಬರ್ 2 ತಂಡಗಳು ಇಲ್ಲಿ ಸ್ಪರ್ಧಿಸುತ್ತಿದ್ದೇವೆ. ಎಲ್ಲಾ ದೃಷ್ಟಿಯಿಂದ ನೀಡಿದರೂ ಇದು ಟೆಸ್ಟ್ ಕ್ರಿಕೆಟ್‌ನ ಮಜವಾದ ಸ್ಪರ್ಧೆಯಾಗಬೇಕಿತ್ತು" ಎಂದಿದ್ದಾರೆ ಸಬಾ ಕರೀಮ್.
ಇನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಈ ಪಿಚ್ ಬಗ್ಗೆ ಟೀಕಿಸಿದ್ದಾರೆ. "ಈ ಬಗ್ಗೆ ಬೇರೆ ಬೇರೆ ರೀತಿಯ ಅಭಿಪ್ರಾಯಗಳು ಇರುತ್ತವೆ. ಈ ರೀತಿಯ ಪಿಚ್ ಹಿಂದೆಯೂ ಭಾರತಕ್ಕೆ ತಿರುಗೇಟು ನೀಡಿದ್ದು 2012-13ರಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ ಗ್ರೇಮ್ ಸ್ವಾನ್ ಹಾಗು ಮಾಂಟಿ ಪನೆಸರ್ ಇಂಗ್ಲೆಂಡ್‌ಗೆ ಗೆಲುವು ತಂದುಕೊಟ್ಟಿದ್ದರು. ನನ್ನ ಪ್ರಕಾರ ಈ ಗುಣಮಟ್ಟದ ಪಿಚ್ ಹೊಂದುವುದು ಉತ್ತಮ ನಿರ್ಧಾರ ಎಂದು ಅನಿಸುತ್ತಿಲ್ಲ" ಎಂದಿದ್ದಾರೆ ಸುನಿಲ್ ಗವಾಸ್ಕರ್.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಕುಲದೀಪ್ ಯಾದವ್, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕನ್ನೇಮನ್
ಬೆಂಚ್: ಮಿಚೆಲ್ ಸ್ವೆಪ್ಸನ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್, ಲ್ಯಾನ್ಸ್ ಮೋರಿಸ್