Border-Gavaslar Trophy: ಆಸ್ಟ್ರೇಲಿಯಾ ಒಂದು ಪಂದ್ಯವನ್ನೂ ಗೆಲ್ಲಲ್ಲ ಎಂದು ಭವಿಷ್ಯ ನುಡಿದ ಕಿವೀಸ್ ಮಾಜಿ ಕ್ರಿಕೆಟಿಗ

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ಇದೀಗ ಎರಡನೇ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿರುವ ಇತ್ತಂಡಗಳು ದೆಹಲಿಯಲ್ಲಿ ಅಭ್ಯಾಸ ನಡೆಸುತ್ತಿವೆ. ಈ ಸಂದರ್ಭದಲ್ಲಿ ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಸೈಮನ್ ಡಲ್ ಭವಿಷ್ಯ ನುಡಿದಿದ್ದು ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಒಂದು ಗೆಲುವನ್ನು ಕೂಡ ಸಾಧಿಸುವುದಿಲ್ಲ ಎಂದಿದ್ದಾರೆ.
ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗು 132 ರನ್‌ಗಳ ಅಂತರದಿಂದ ಗೆದ್ದುಕೊಂಡಿದ್ದು ಸರಣಿಯಲ್ಲಿ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಟೀಮ್ ಇಂಡಿಯಾ ಪರವಾಗಿ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ.
ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಕನಿಷ್ಠ ಒಂದು ಗೆಲುವು ಸಾಧಿಸಿದರೂ ತನಗೆ ಅಚ್ಚರಿಯಾಗುತ್ತದೆ ಎಂದಿದ್ದಾರೆ ನ್ಯೂಜಿಲೆಂಡ್ ತಂಡದ ಮಾಜಿ ಕ್ರಿಕೆಟಿಗ ಸೈಮನ್ ಡೌಲ್. ಇದೇ ಸಂದರ್ಭದಲ್ಲಿ ಅವರು ಈ ಸರಣಿಯನ್ನು ಭಾರತ 4-0 ಅಂತರದಿಂದ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
"ಈ ಸರಣಿಯಲ್ಲಿ ಆಸ್ಟ್ರೇಲಿಯಾ ಒಂದು ಗೆಲುವು ಸಾಧಿಸಿದರೂ ನನಗೆ ಬಹಳ ದೊಡ್ಡ ಅಚ್ಚರಿಯಾಗಲಿದೆ. ಮಳೆ ಅಡ್ಡಿಯಾಗದೇ ಇದ್ದರೆ ಭಾರತ ಈ ಸರಣಿಯನ್ನು 4-0 ಅಂತರದಿಂದ ವಶಕ್ಕೆ ಪಡೆಯಲಿದೆ. ಒಂದು ವೇಳೆ ಆಸ್ಟ್ರೇಲಿಯಾ ಬೌಲಿಂಗ್‌ನಲ್ಲಿ ಯಾವುದಾದರೂ ದಿನ ಅದ್ಭುತವಾಗಿ ಪ್ರದರ್ಶನ ನೀಡಿದರೆ ಅಥವಾ ಸ್ಮಿತ್ ಮತ್ತು ಲ್ಯಾಬುಶೈನ್ ಅತ್ಯುತ್ತಮವಾಗಿ ಪ್ರದರ್ಶನ ನಿಡಿದರೆ ಒಂದು ಗೆಲುವು ಸಾಧಿಸಬಹುದು. ಆದರೆ 3-1 ಅಥವಾ 4-0 ಅಂತರದಿಂದ ಭಾರತ ಗೆಲ್ಲುವುದನ್ನು ಬಿಟ್ಟು ಭಿನ್ನ ಫಲಿತಾಂಶ ಬರಲು ಸಾಧ್ಯವಿಲ್ಲ" ಎಂದಿದ್ದಾರೆ ಸೈಮನ್ ಡೌಲ್.
ಶುಕ್ರವಾರದಿಂದ ಆರಂಭವಾಗಲಿದೆ 2ನೇ ಟೆಸ್ಟ್: ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯ ಫೆಬ್ರವರಿ 7ರಿಂದ ಆರಂಬವಾಗಲಿದೆ. ದೆಹಲಿಯ ಅರುಣ್ ಜೇಟ್ಲೀ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಕುತೂಹಲ ಮೂಡಿಸಿದೆ. ದೆಹಲಿ ಕ್ರೀಡಾಂಗಣದ ಪಿಚ್ ಕೂಡ ಸ್ಪಿನ್ ಸ್ನೇಹಿಯಾಗಿದ್ದು ಇಲ್ಲಿ ಆಸಿಸ್ ತಂಡ ಭಾರತೀಯ ದಾಳಿಯನ್ನು ಹೇಗೆ ಎದುರಿಸಲಿದೆ ಎಂಬುದು ಪ್ರಶ್ನೆಯಾಗಿದೆ. ಮೊದಲ ಸೋಲಿನಿಂದ ಕಂಗೆಟ್ಟಿರುವ ಆಸ್ಟ್ರೇಲಿಯಾ ಕಮ್‌ಬ್ಯಾಕ್ ಮಾಡಲು ಹವಣಿಸುತ್ತಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾ, ಶುಭಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್, ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕ್ಯಾಮೆರಾನ್ ಗ್ರೀನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications