ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Border-Gavaskar Trophy: ಚೊಚ್ಚಲ ಟೆಸ್ಟ್ ಪಂದ್ಯಕ್ಕೆ ಬಿಗ್ ಹಿಟ್ಟರ್ ರೆಡಿ?; ದೊಡ್ಡ ಸುಳಿವು ನೀಡಿದ 'SKY'

Border-Gavaskar Trophy: Suryakumar Yadav Will Make His Test Debut In The Series Against Australia?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಪ್ರಾರಂಭವಾಗಲಿದೆ.

ಭಾರತದಲ್ಲಿ ಅಭ್ಯಾಸ ಪಂದ್ಯಗಳನ್ನು ಆಡುವ ಯೋಜನೆಯನ್ನು ತಿರಸ್ಕರಿಸಿದ ಪ್ರವಾಸಿ ಆಸ್ಟ್ರೇಲಿಯಾ ತಂಡ, ವಿಶಿಷ್ಟ ರೀತಿಯಲ್ಲಿ ಟೆಸ್ಟ್ ಸರಣಿ ಗೆಲುವಿಗಾಗಿ ಬೆಂಗಳೂರಿನ ಆಲೂರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದೆ.

ಕೇರಳದ ತಮ್ಮ ಅಕಾಡೆಮಿಯಲ್ಲಿ ಕಿರುಕುಳ, ಗೂಂಡಾಗಿರಿ; ಸಹಾಯಕ್ಕಾಗಿ ಸಿಎಂ ಮೊರೆ ಹೋದ ಪಿಟಿ ಉಷಾಕೇರಳದ ತಮ್ಮ ಅಕಾಡೆಮಿಯಲ್ಲಿ ಕಿರುಕುಳ, ಗೂಂಡಾಗಿರಿ; ಸಹಾಯಕ್ಕಾಗಿ ಸಿಎಂ ಮೊರೆ ಹೋದ ಪಿಟಿ ಉಷಾ

ಭಾರತ ತಂಡ ಸತತ ಮೂರು ಬಾರಿ ಟ್ರೋಫಿ ಗೆದ್ದಿದ್ದು, ಅದರಲ್ಲಿ ಎರಡು ಬಾರಿ ಆಸ್ಟ್ರೇಲಿಯಾ ನೆಲದಲ್ಲಿ ಎನ್ನುವುದು ಮತ್ತೊಂದು ವಿಶೇಷವಾಗಿದೆ. ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ ಉಳಿಸಿಕೊಳ್ಳುವುದಷ್ಟೆ ಅಲ್ಲದೇ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸ್ಥಾನಕ್ಕಾಗಿ ಸೆಣಸಾಡಲಿದೆ.

ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕರೆ ಪಡೆದಿರುವ ಸೂರ್ಯಕುಮಾರ್

ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕರೆ ಪಡೆದಿರುವ ಸೂರ್ಯಕುಮಾರ್

ಭಾರತ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕರೆ ಪಡೆದಿರುವ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ, 2022ರ ವರ್ಷದ ಟಿ20 ಕ್ರಿಕೆಟಿಗ ಇನ್ನೂ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿಲ್ಲ.

ಭವಿಷ್ಯದಲ್ಲಿ ಕ್ರಿಕೆಟ್‌ನ ಎಲ್ಲ ಸ್ವರೂಪದ ಆಟಗಾರನಾಗಲಿದ್ದಾರೆ ಎಂದು ಅನೇಕ ತಜ್ಞರು ಶ್ಲಾಘಿಸಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗಾಗಿ ಟೆಸ್ಟ್ ತಂಡದಲ್ಲಿ ಸೇರ್ಪಡೆಗೊಂಡಿರುವುದು ಸೂರ್ಯಕುಮಾರ್ ಯಾದವ್ ಕನಸಿನ ರೆಡ್ ಬಾಲ್ ಆಟ ಹತ್ತಿರವಾದಂತಿದೆ.

ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಸುಳಿವು ನೀಡಿದ ಭಾರತದ ಮಿ.360

ಫೆಬ್ರವರಿ 9ರಂದು ನಾಲ್ಕು ಪಂದ್ಯಗಳ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಸೂರ್ಯಕುಮಾರ್ ಯಾದವ್ ತಮ್ಮ ಪದಾರ್ಪಣೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಸುಳಿವು ನೀಡಿದ್ದಾರೆ. ಭಾರತದ 'ಮಿ.360' ಬ್ಯಾಟ್ಸ್‌ಮನ್ "ಹಲೋ ಫ್ರೆಂಡ್' ಎಂಬ ಶೀರ್ಷಿಕೆಯೊಂದಿಗೆ ಹೊಸ ಕೆಂಪು ಚೆಂಡಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡಿರುವ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ಆಸ್ಟ್ರೇಲಿಯಾದ ಮಾರಕ ಬೌಲರ್‌ಗಳ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಗುರುತರ ಜವಾಬ್ದಾರಿ ಸೂರ್ಯಕುಮಾರ್ ಯಾದವ್ ಮೇಲಿದೆ.

ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಆಡಲಿದ್ದಾರೆ

ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಆಡಲಿದ್ದಾರೆ

ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಲಿದ್ದಾರೆ. ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ 3ನೇ ಸ್ಥಾನದಲ್ಲಿದ್ದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಕೆಎಲ್ ರಾಹುಲ್ 5ನೇ ಸ್ಥಾನ ಪಡೆಯುವ ನಿರೀಕ್ಷೆಯಿದ್ದು, ಸೂರ್ಯಕುಮಾರ್ ಯಾದವ್ ಆಡುವ ಬಳಗದಲ್ಲಿದ್ದರೆ, 6ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ನಂತರದ ಸ್ಥಾನದಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಬರಲಿದ್ದಾರೆ.

ಸೂರ್ಯಕುಮಾರ್ ಯಾದವ್ ಮುಂಬೈ ಪರ ರಣಜಿ ಟ್ರೋಫಿ 2022-23ರಲ್ಲಿ ಎರಡು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಹೈದರಾಬಾದ್ ವಿರುದ್ಧ 80 ಎಸೆತಗಳಲ್ಲಿ 90 ರನ್ ಗಳಿಸಿ ಯಶಸ್ವಿಯಾದರು. ನಂತರ ಸೌರಾಷ್ಟ್ರ ವಿರುದ್ಧ 107 ಎಸೆತಗಳಲ್ಲಿ 95 ರನ್ ಗಳಿಸಿದರು. ಆ ಇನ್ನಿಂಗ್ಸ್‌ನಲ್ಲಿ 14 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡಿದ್ದವು.

ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ

ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ

ಮೊದಲ ಟೆಸ್ಟ್ ಪಂದ್ಯ: ಫೆಬ್ರವರಿ 9ರಿಂದ ಫೆಬ್ರವರಿ 13ರವೆರೆಗೆ - ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ನಾಗ್ಪುರ.

ಎರಡನೇ ಟೆಸ್ಟ್ ಪಂದ್ಯ: ಫೆಬ್ರವರಿ 17ರಿಂದ ಫೆಬ್ರವರಿ 21ರವೆರೆಗೆ - ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ.

ಮೂರನೇ ಟೆಸ್ಟ್ ಪಂದ್ಯ: ಮಾರ್ಚ್ 1ರಿಂದ ಮಾರ್ಚ್ 5ರವೆರೆಗೆ - ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ.

ನಾಲ್ಕನೇ ಟೆಸ್ಟ್ ಪಂದ್ಯ: ಮಾರ್ಚ್ 9ರಿಂದ ಮಾರ್ಚ್ 13ರವರೆಗೆ - ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.

Story first published: Saturday, February 4, 2023, 20:31 [IST]
Other articles published on Feb 4, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X