
4. ಸ್ಟೀವ್ ಸ್ಮಿತ್- 3 ಪಂದ್ಯ ಶ್ರೇಷ್ಠ ಪ್ರಶಸ್ತಿ
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡದ ಪರವಾಗಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಎಂಬ ದಾಖಲೆಯನ್ನು ಸ್ಟೀವ್ ಸ್ಮಿತ್ ಹೊಂದಿದ್ದಾರೆ. ಅಗ್ರ ನಾಲ್ಕು ಜನರು ಪಟ್ಟಿಯಲ್ಲಿರುವ ಏಕೈಕ ಆಸ್ಟ್ರೇಲಿಯಾದ ಆಟಗಾರ ಸ್ಟೀವ್ ಸ್ಮಿತ್. ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಸ್ಟೀವ್ ಸ್ಮಿತ್ 3 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ.

3. ಚೇತೇಶ್ವರ್ ಪೂಜಾರ- 4 ಪಂದ್ಯ ಶ್ರೇಷ್ಠ ಪ್ರಶಸ್ತಿ
ಭಾರತದ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ದಾಖಲೆ ಹೊಂದಿದ್ದಾರೆ. ಭಾರತ ಹಾಗೂ ಆಸ್ಟ್ರೇಲಿಯಾ ಎರಡು ದೇಶಗಳಲ್ಲಿಯೂ ಪೂಜಾರ ದಾಖಲೆ ಉತ್ತವಾಗಿದೆ. ಈ ಪ್ರತಿಷ್ಠಿತ ಸರಣಿಯಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಪೂಜಾರ ಕೂಡ ಇದ್ದಾರೆ. ಇತ್ತೀಚೆಗಷ್ಟೇ ಮೂರನೇ ಟೆಸ್ಟ್ ಪಂದ್ಯವನ್ನು ಆಡಿರುವ ಚೇತೇಶ್ವರ್ ಪೂಜಾರ 4 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ.

2. ರವೀಂದ್ರ ಜಡೇಜಾ- 4 ಪಂದ್ಯ ಶ್ರೇಷ್ಠ ಪ್ರಶಸ್ತಿ
ಟೀಮ್ ಇಂಡಿಯಾದ ಪ್ರಮುಖ ಆಲ್‌ರೌಂಡರ್ ರವೀಂದ್ರ ಜಡೇಜಾ ಸುದೀರ್ಘ ಕಾಲದ ಬಳಿಕ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಪಿಯಲ್ಲಿ ಜಡೇಜಾ ಆಸ್ಟ್ರೇಲಿಯಾಗೆ ದುಃಸ್ವಪ್ನವಾಗಿ ಕಾಡುತ್ತಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿಯೂ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಜಡೇಜಾ ನಾಲ್ಕನೇ ಬಾರಿಗೆ ಈ ಟೂರ್ನಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ವಿಶೇಷವೆಂದರೆ ನಾಗ್ಪುರದಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿಯೂ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು.

1. ಸಚಿನ್ ತೆಂಡೂಲ್ಕರ್ 5 ಪಂದ್ಯ ಶ್ರೇಷ್ಠ ಪ್ರಶಸ್ತಿ
ಭಾರತದ ದಿಗ್ಗಜ ಆಟಗಾರ ಸಚೊನ್ ತೆಂಡೂಲ್ಕರ್ ಕ್ರಿಕೆಟ್‌ನಲ್ಲಿ ಅನೇಕ ಸಾರ್ವಕಾಲಿಕ ದಾಖಲೆಗಳನ್ನು ಹೊಂದಿರುವ ಶ್ರೇಷ್ಠ ಆಟಗಾರ. ಆಸ್ಟ್ರೇಲಿಯಾ ವಿರುದ್ಧ ಯಾವುದೇ ಮಾದರಿಯಲ್ಲಿಯೂ ಸಚಿನ್ ತೆಂಡೂಲ್ಕರ್ ಅದ್ಭುತ ದಾಖಲೆ ಹೊಂದಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ದಾಖಲೆ ಇನ್ನು ಕೂಡ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿಯೇ ಇದೆ. ಈ ಪ್ರತಿಷ್ಠಿತ ಸರಣಿಯಲ್ಲಿ ಸಚಿನ್ ತೆಂಡೂಲ್ಕರ್ ಐದು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಹೆದ್ದುಕೊಂಡ ದಾಖಲೆ ಹೊಂದಿದ್ದಾರೆ. ಇದು ಈ ಸರಣಿಯಲ್ಲಿ ಈವರೆಗೆ ಮುರಿಯಲಾಗದೆ ಉಳಿದುಕೊಂಡಿರುವ ದಾಖಲೆಯಾಗಿದೆ.


Click it and Unblock the Notifications
