RCB ತಂಡ ಸೇರಿದ ಸ್ಟಾರ್ ವೇಗದ ಬೌಲರ್
ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭವಾಗಲಿದೆ. ಉದ್ಘಾಟನಾ ಪಂದ್ಯ ಮಾರ್ಚ್ 28 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಬಂದಿದೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ತಂಡವನ್ನು ಸೇರಿದ್ದಾರೆ.
ಆಸೀಸ್ ವೇಗದ ಬೌಲರ್ ಹ್ಯಾಜಲ್‌ವುಡ್ ಇತ್ತೀಚೆಗೆ ಗಾಯದಿಂದ ಬಳಲುತ್ತಿದ್ದರು, ಆದರೆ ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಮಾರ್ಚ್ 28 ನಡೆಯಲಿರುವ ಪಂದ್ಯಕ್ಕೂ ಮುನ್ನ ತಂಡ ಸೇರಿದ್ದಾರೆ. ಹ್ಯಾಜಲ್‌ವುಡ್ ಮೊದಲ ಎರಡು ಪಂದ್ಯಗಳಲ್ಲಿ ಆರ್‌ಸಿಬಿಗೆ ಲಭ್ಯವಿರುವುದಿಲ್ಲ. ಮೂರನೇ ಪಂದ್ಯದಲ್ಲಿ ಇವರು ತಂಡವನ್ನು ಸೇರಬಹುದು ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಫ್ರಾಂಚೈಸಿ ಇನ್ನು ಖಚಿತ ಪಡಿಸಿಲ್ಲ.

ಜೋಶ್ ಹ್ಯಾಜಲ್‌ವುಡ್ ಅವರ ಪಂದ್ಯದ ಫಿಟ್‌ನೆಸ್ ಸಂಪೂರ್ಣವಾಗಿ ಕ್ರಿಕೆಟ್ ಆಸ್ಟ್ರೇಲಿಯಾದ ವೈದ್ಯಕೀಯ ಅನುಮತಿಯನ್ನು ಅವಲಂಬಿಸಿದೆ. ಅವರು ಸಂಪೂರ್ಣವಾಗಿ ಫಿಟ್ ಆಗಲು ಸ್ವಲ್ಪ ಸಮಯ ತೆಗೆದುಕೊಂಡರೆ, ಅವರ ಮರಳುವಿಕೆ ವಿಳಂಬವಾಗಬಹುದು. ಆರ್‌ಸಿಬಿ ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಕಠಿಣ ಅಭ್ಯಾಸ ನಡೆಸುತ್ತಿದೆ.
ಜೋಶ್ ಹ್ಯಾಜಲ್‌ವುಡ್ ಸಾಧನೆ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾದ ತಂಡದ ಭಾಗವಾಗಿರಲಿಲ್ಲ. ಇವರು ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದರಿಂದ ಮೆಗಾ ಈವೆಂಟ್‌ನಿಂದ ಹೊರಗುಳಿದಿದ್ದರು. ಆಸ್ಟ್ರೇಲಿಯಾ ಈ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲೇ ಟೂರ್ನಿಯಿಂದ ಗುಡ್ ಬೈ ಹೇಳಿತ್ತು. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಜೋಶ್ ಹ್ಯಾಜಲ್‌ವುಡ್ ತಂಡದ ಭಾಗವಾಗಿದ್ದರು. ಇವರು ಸ್ಥಿರ ಪ್ರದರ್ಶನ ನೀಡಿದ ಪರಿಣಾಮವೇ ಆರ್‌ಸಿಬಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವಲ್ಲಿ ಸಫಲವಾಗಿತ್ತು.
35 ವರ್ಷದ ಜೋಶ್ ಹ್ಯಾಜಲ್‌ವುಡ್ ಐಪಿಎಲ್‌ನಲ್ಲಿ ಆಡಿದ 39 ಪಂದ್ಯಗಳಲ್ಲಿ 57 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. ಇವರು 2025ರ ಐಪಿಎಲ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ 22 ವಿಕೆಟ್ ಪಡೆದು ಅಬ್ಬರಿಸಿದ್ದರು. ಇವರು ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾಗಬಲ್ಲ ಪ್ಲೇಯರ್. ಇವರು ತಂಡವನ್ನು ಸೇರಿದ್ದು, ನಿಶ್ವಿತವಾಗಿ ತಂಡದ ಆತ್ಮವಿಶ್ವಾಸ ಹೆಚ್ಚಾಗಿದೆ.
ಆರ್‌ಸಿಬಿ ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಟಿಮ್ ಡೇವಿಡ್, ಜಾಕೋಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಜೋಶ್ ಹೇಜಲ್‌ವುಡ್, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ರಸಿಖ್ ದಾರ್, ಭುವನೇಶ್ವರ್ ಕುಮಾರ್, ಜೋರ್ಡಾನ್ ಕಾಕ್ಸ್, ಸುಯಾಶ್ ಶರ್ಮಾ, ವೆಂಕಟೇಶ್ ಅಯ್ಯರ್, ಸ್ವಪ್ನಿಲ್ ಸಿಂಗ್, ಜಾಕೋಬ್ ಡಫಿ, ಕನಿಷ್ಕ್ ಚೌಹಾಣ್, ಅಭಿನಂದನ್ ಸಿಂಗ್, ಮಂಗೇಶ್ ಯಾದವ್, ಫಿಲ್ ಸಾಲ್ಟ್, ಸಾತ್ವಿಕ್ ದೇಸ್ವಾಲ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications