Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Boxing Day Test: ಟಾಸ್‌ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ: ಗಿಲ್‌ಗೆ ಇಲ್ಲ ಸ್ಥಾನ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್‌ ಗವಾಸ್ಕರ್‌ ಟ್ರೋಫಿಯ ನಾಲ್ಕನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ಭಾರತ ತಂಡ ಮಹತ್ವದ ಟೆಸ್ಟ್‌ ಪಂದ್ಯಕ್ಕಾಗಿ ಒಟ್ಟು ಐದು ನುರಿತ ಬೌಲರ್‌ಗಳಿಗೆ ಮಣೆ ಹಾಕಿದೆ. ಇದರಲ್ಲಿ ಇಬ್ಬರು ಸ್ಪಿನ್ ಬೌಲರ್ಸ್‌ ಹಾಗೂ ಮೂವರು ವೇಗಿಗಳು ಸೇರಿದ್ದಾರೆ. ಟಾಪ್ ಆರ್ಡರ್‌ ಬ್ಯಾಟರ್‌ ಶುಭಮನ್‌ ಗಿಲ್‌ಗೆ ವಿಶ್ರಾಂತಿ ನೀಡಲಾಗಿದೆ.

ಪ್ರಸಕ್ತ ಸರಣಿಯಲ್ಲಿ ರನ್‌ ಕಲೆ ಹಾಕುವಲ್ಲಿ ಹಿಂದೆ ಬಿದ್ದಿರುವ ಟಾಪ್ ಆರ್ಡರ್‌ ಬ್ಯಾಟರ್‌ ಶುಭಮನ್‌ ಗಿಲ್ ಅವರಿಗೆ ಬೆಂಚ್‌ ಮೇಲೆ ಕೂರಿಸಲಾಗಿದೆ. ಇವರು ಬಾರ್ಡರ್‌ ಗವಾಸ್ಕರ್‌ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಇವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ. ಇವರ ಸ್ಥಾನದಲ್ಲಿ ಸ್ಪಿನ್ ಬೌಲರ್‌ ವಾಶಿಂಗ್ಟನ್‌ ಸುಂದರ್ ಅವರಿಗೆ ಅವಕಾಶ ನೀಡಲಾಗಿದೆ.

Boxing Day Test Australia Bowl First India Benches Shubman Gill and Fields Three All-Rounders

ಮೂರು ಆಲ್‌ರೌಂರ್ಸ್‌ಗೆ ಅವಕಾಶ

ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಮೂವರು ಆಲ್‌ರೌಂಡರ್‌ಗಳಿಗೆ ಸ್ಥಾನ ನೀಡಿದೆ. ಮೂರನೇ ಟೆಸ್ಟ್‌ನಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರವೀಂದ್ರ ಜಡೇಜಾ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಗಿಲ್‌ ಬದಲಿಗೆ ಇನ್ನೋರ್ವ ಸ್ಪಿನ್ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ನಿತೀಶ್ ಕುಮಾರ್ ರೆಡ್ಡಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಪ್ಲಾಫ್‌ ಗಿಲ್‌

ಟೀಂ ಇಂಡಿಯಾದ ಭರವಸೆಯ ಆಟಗಾರ ಶುಭಮನ್‌ ಗಿಲ್‌ ಬಹಳ ಸಮಯದಿಂದ ರನ್‌ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದಾರೆ. ಏಷ್ಯಾದಿಂದ ಆಚೆ ಇವರ ಬ್ಯಾಟ್ ಮೌನಕ್ಕೆ ಶರಣಾಗಿದೆ. ಬಾರ್ಡರ್‌ ಗವಾಸ್ಕರ್‌ ಸರಣಿಯಲ್ಲೂ ಗಿಲ್‌ ವಿಶೇಷ ಸಾಧನೆ ಮಾಡಿಲ್ಲ. ಇದೇ ಒಂದು ಕಾರಣಕ್ಕೆ ಟೀಮ್ ಮ್ಯಾನೇಜ್ಮೆಂಟ್‌ ಇವರನ್ನು ಕೈ ಬಿಡುವ ನಿರ್ಧಾರವನ್ನು ಮಾಡಿದೆ. ನಾಲ್ಕನೇ ಪಂದ್ಯದಲ್ಲಿ ರೋಹಿತ್‌ ಓಪನಿಂಗ್‌ನಲ್ಲಿ ಬ್ಯಾಟಿಂಗ್ ಮಾಡುವುದನ್ನು ನೋಡಬಹುದಾಗಿದೆ. ಶುಭಮನ್‌ ಗಿಲ್‌ ಸ್ಥಾನದಲ್ಲಿ ಸರಣಿಯಲ್ಲಿ ರನ್‌ ಕಲೆ ಹಾಕಿ ಭರವಸೆ ಮೂಡಿಸಿರುವ ಕರ್ನಾಟಕದ ಕೆಎಲ್ ರಾಹುಲ್‌ಗೆ ಸ್ಥಾನ ನೀಡಲಾಗಿದೆ. ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್‌ ಪಂದ್ಯಕ್ಕೆ ವಿಭಿನ್ನ ಕಾಂಬಿನೇಷನ್‌ನಲ್ಲಿ ಅಂಗಳ ಪ್ರವೇಶಿಸಿದೆ.

ಪದಾರ್ಪಣೆಯಲ್ಲಿ ಅಬ್ಬರ

ಟೀಮ್ ಇಂಡಿಯಾದ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಇನಿಂಗ್ಸ್‌ ಆರಂಭಿಸುವ ಹೊಣೆಯನ್ನು ಹೊತ್ತುಕೊಂಡ ಸ್ಯಾಮ್‌ ಕೋನ್‌ಸ್ಟಾಸ್‌ ಭರ್ಜರಿ ಆರಂಭ ನೀಡಿದ್ದಾರೆ. ಇವರು ಏಕದಿನ ಶೈಲಿಯಲ್ಲಿ ಬ್ಯಾಟಿಂಗ್ ನಡೆಸಿ ಅಬ್ಬರಿಸಿದ್ದಾರೆ. ತಮ್ಮ ನೈಜ ಆಟವನ್ನು ಆಡಿದ ಸ್ಯಾಮ್‌ ಟೀಮ್ ಇಂಡಿಯಾದ ಬೌಲರ್‌ಗಳಿಗೆ ಕಾಟ ನೀಡಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

Story first published: Thursday, December 26, 2024, 6:23 [IST]
Other articles published on Dec 26, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+