Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Boxing Day Test: ಜಸ್ಪ್ರೀತ್ ಬುಮ್ರಾ 3 ವಿಕೆಟ್ ಪಡೆದು ದಾಖಲೆ; ಹಿಂದೆ ಉಳಿದ ಅನಿಲ್ ಕುಂಬ್ಳೆ

ಐತಿಹಾಸಿಕ ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ನಡೆಯುತ್ತಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ಎರಡು ಸೆಷನ್‌ಗಳಲ್ಲಿ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿತು. ಆದರೆ, ಕೊನೆಯ ಸೆಷನ್‌ನಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಾಂಗೂರು ಪಡೆಯ ಲೆಕ್ಕಚಾರ ಉಲ್ಟಾ ಮಾಡಿದರು. ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಬುಮ್ರಾ ಅವರು ಭಾರತ ತಂಡವನ್ನು ಮುನ್ನಡೆಸಿದರು. ಇದರೊಂದಿಗೆ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದ ಮೊದಲ ದಿನವೇ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಪಡೆಯುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ 3 ವಿಕೆಟ್ ಪಡೆಯುವ ಮೂಲಕ ಮೆಲ್ಬೋರ್ನ್ ಸ್ಟೇಡಿಯಂ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದ ಮೊದಲ ದಿನದಾಟದಲ್ಲಿ ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡಿದ ತಕ್ಷಣ, ಬುಮ್ರಾ ಅವರು ಮಾಜಿ ಭಾರತದ ಸ್ಪಿನ್ನರ್ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದರು.

Boxing Day Test Jasprit Bumrah breaks Anil Kumble s record by taking 3 wickets

ಮೆಲ್ಬೋರ್ನ್‌ನಲ್ಲಿ ಜಸ್ಪ್ರೀತ್ ಬುಮ್ರಾ 18 ವಿಕೆಟ್‌ಗನ್ನು ಉರುಳಿಸುವುದರೊಂದಿಗೆ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಬುಮ್ರಾ ಮೆಲ್ಬೋರ್ನ್‌ನಲ್ಲಿ 15 ವಿಕೆಟ್‌ಗಳನ್ನು ಪಡೆದಿದ್ದರು. ಇದಾದ ನಂತರ, ಅವರು ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಕುಂಬ್ಳೆ ದಾಖಲೆಯನ್ನು ಹಿಂದಿಕ್ಕಿದರು. ಮೆಲ್ಬೋರ್ನ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್‌ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ 15 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಬುಮ್ರಾಸ್ತ್ರ

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಇದುವರೆಗೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಆಡಿರುವ ಮೊದಲ 3 ಟೆಸ್ಟ್‌ ಪಂದ್ಯಗಳಲ್ಲಿ 21 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಸಾಧನೆ ಮಾಡಿದ್ದಾರೆ.

ಮೆಲ್ಬೋರ್ನ್‌ನಲ್ಲಿ ಭಾರತ ತಂಡದ ದಾಖಲೆ ಇತ್ತೀಚಿನ ವರ್ಷಗಳಲ್ಲಿ ಉತ್ತಮವಾಗಿದೆ. ಭಾರತ 2014 ರಿಂದ ತನ್ನ ಕೊನೆಯ 3 ಟೆಸ್ಟ್‌ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ಗೆ ತಲುಪುವ ಅವಕಾಶವನ್ನು ಜೀವಂತವಾಗಿರಿಸಿಕೊಳ್ಳಲು ಭಾರತಕ್ಕೆ ಈ ಟೆಸ್ಟ್‌ನಲ್ಲಿ ಜಯಗಳಿಸುವುದು ಬಹಳ ಮುಖ್ಯ. ಬಾರ್ಡರ್-ಗವಾಸ್ಕರ್ ಸರಣಿ ಸದ್ಯ 1-1ರಲ್ಲಿ ಸಮಬಲದಲ್ಲಿದೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ, ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಸೋಲು ಕಂಡಿದೆ. ಗಬ್ಬಾ ಟೆಸ್ಟ್ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿದೆ.

Story first published: Thursday, December 26, 2024, 16:58 [IST]
Other articles published on Dec 26, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+