For Quick Alerts
ALLOW NOTIFICATIONS  
For Daily Alerts
 

Boxing Day Test: ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್-11 ಹೀಗಿರಲಿದೆ..

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ರೋಚಕ ತಿರುವನ್ನು ಪಡೆದಿದೆ. ಮೂರು ಪಂದ್ಯಗಳ ನಂತರ ಸರಣಿ 1-1 ರಲ್ಲಿ ಸಮಬಲಗೊಂಡಿದ್ದು, ನಾಲ್ಕನೇ ಪಂದ್ಯವು ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಉಭಯ ತಂಡಗಳಿಗೂ ಸರಣಿ ಗೆಲ್ಲಲು ಈ ಬಾಕ್ಸಿಂಗ್ ಡೇ ಟೆಸ್ಟ್ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಗುರಿಯನ್ನು ಟೀಮ್ ಇಂಡಿಯಾ ಹೊಂದಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಭಾರತ ಯಾವ ಪ್ಲೇಯಿಂಗ್-11 ನೊಂದಿಗೆ ಕಣಕ್ಕೀಳಿಯಬಹುದು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಬ್ರಿಸ್ಪೇನ್‌ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ ಕೊನೆಯ ವಿಕೆಟ್‌ಗೆ ವೇಗದ ಬೌಲರ್‌ಗಳ ಜಸ್ಪ್ರೀತ್ ಬುಮ್ರಾ ಮತ್ತು ಆಕಾಶ್ ದೀಪ್ ಅವರ ಜೊತೆಯಾಟವು ಭಾರತವನ್ನು ಫಾಲೋ ಆನ್‌ನಿಂದ ತಪ್ಪಿಸಿತ್ತು. ನಂತರ ಪಂದ್ಯವು ಮಳೆಯಿಂದಾಗಿ ಡ್ರಾದಲ್ಲಿ ಕೊನೆಗೊಂಡಿತು. ಇದೀಗ ನಾಲ್ಕನೇ ಟೆಸ್ಟ್‌ ಪಂದ್ಯಕ್ಕೆ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆಯಿದೆ.

Boxing Day Test Team India s Possible Playing-11

ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಕಳಪೆ ಬ್ಯಾಟಿಂಗ್ ಬೇಸರ ತರಿಸಿದೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಅವರ 161 ರನ್ ಮತ್ತು ವಿರಾಟ್ ಕೊಹ್ಲಿ 100 ರನ್ ಮತ್ತು ಮೂರನೇ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಅವರ 84 ರನ್ ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್‌ಗಳು ರನ್ ಹೊಳೆ ಹರಿಸುವಲ್ಲಿ ವಿಫಲರಾಗಿದ್ದಾರೆ. ಭಾರತ ಸರಣಿಯಲ್ಲಿ ಪುನರಾಗಮನ ಮಾಡಬೇಕಾದರೆ ಬ್ಯಾಟರ್ ರನ್ ಗಳಿಸಬೇಕಾಗುತ್ತದೆ. ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ಅವರಂತಹ ಟಾಪ್ ಆರ್ಡರ್ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಂದಿಲ್ಲ. ಇಂತಹ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಯಾರಿಗೆ ಬೆಂಚ್ ಕಾಯಲು ಹೇಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ಕಳೆಪೆ ಫಾರ್ಮ್‌ನಲ್ಲಿದ್ದಾರೆ. ಹೀಗಾಗಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಪ್ಲೇಯಿಂಗ್-11 ರಿಂದ ಅವರನ್ನು ಕೈಬಿಡುವ ಸಾಧ್ಯತೆಯಿದೆ. ಗಿಲ್ ಹೊರಗುಳಿದರೆ ಅವರ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬ ಪ್ರಶ್ನೆಯೂ ಇದೆ. ಅವರ ಬದಲಿಗೆ ಸರ್ಫರಾಜ್ ಖಾನ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಈ ವೇಳೆ ರೋಹಿತ್ ಶರ್ಮಾ ಆರಂಭಿಕರಾಗಿ ತಮ್ಮ ಸ್ಥಾನಕ್ಕೆ ಮರಳಬಹುದು. ಆಗ ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು.

ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಕಡಿಮೆಯಿದೆ. ಏಕೆಂದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಕನಿಷ್ಠ ಒಂದು ವಾರ ಬಾಕಿ ಉಳಿದಿದೆ. ಆಸ್ಟ್ರೇಲಿಯಾ ವಿರುದ್ಧ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡುತ್ತಿದ್ದು, ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಹೀಗಿರುವಾಗ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅನಿವಾರ್ಯವಾಗಿದ್ದಾರೆ. ಮೊಹಮ್ಮದ್ ಸಿರಾಜ್ ಕೂಡ ಮಂಕಾಗಿದ್ದು, ಅವರ ಜಾಗದಲ್ಲಿ ಹರ್ಷಿತ್ ರಾಣಾಗೆ ಅವಕಾಶ ನೀಡಬಹುದು. ಮೂರನೇ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಆದರೆ, ಬೌಲಿಂಗ್‌ನಲ್ಲಿ ಅವರ ಪ್ರದರ್ಶನವು ಉತ್ತಮವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ವಾಷಿಂಗ್ಟನ್ ಸುಂದರ್ ಅವರ ಜಾಗದಲ್ಲಿ ಮತ್ತೊಮ್ಮೆ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗವನ್ನು ಸೇರಿಕೊಳ್ಳಬಹುದು.

ಬಾಕ್ಸಿಂಗ್ ಡೇ ಟೆಸ್ಟ್‌ಗೆ ಭಾರತ ತಂಡ

ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸರ್ಫರಾಜ್ ಖಾನ್/ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ನಿತೀಶ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಆಕಾಶ್ ದೀಪ್.

Story first published: Thursday, December 19, 2024, 21:15 [IST]
Other articles published on Dec 19, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+