ಶ್ರೀಲಂಕಾ ಕ್ರಿಕೆಟಿಗ ಏಂಜೆಲೊ ಮ್ಯಾಥ್ಯೂಸ್‌ಗೆ ಕೊರೊನಾ ಸೋಂಕು: ಆಸಿಸ್ ವಿರುದ್ಧದ ಟೆಸ್ ಪಂದ್ಯಕ್ಕೆ ಬದಲಿ ಆಟಗಾರ ಆಯ್ಕೆ

ಶ್ರೀಲಂಕಾ ಕ್ರಿಕೆಟಿಗ ಏಂಜೆಲೊ ಮ್ಯಾಥ್ಯೂಸ್ ಕೋವಿಡ್-19 ಪಾಸಿಟಿವ್ ಆಗಿರುವುದರಿಂದ ಪ್ರಸ್ತುತ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಅರ್ಧದಲ್ಲೇ ತಂಡದಿಂದ ಹೊರಗುಳಿದಿದ್ದಾರೆ.
ಮೂರನೇ ದಿನದಾಟದ ಆರಂಭಕ್ಕೂ ಮೊದಲು ನಡೆದಿದ್ದ ಕೋವಿಡ್-19 ಪರೀಕ್ಷೆಯಲ್ಲಿ ಮ್ಯಾಥ್ಯೂಸ್ ಧನಾತ್ಮಕ ವರದಿ ಬಂದ ಹಿನ್ನಲೆಯಲ್ಲಿ ಅವರನ್ನು ಐಸೋಲೇಷನ್‌ಗೆ ಒಳಪಡಿಸಲಾಗಿದ್ದು, ಕೋವಿಡ್ ಸೋಂಕು ತಗುಲಿದ ಬದಲಿ ಆಟಗಾರನಾಗಿ ಓಷಾದ ಫೆರ್ನಾಂಡೋ ರನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ಗೆ ಮ್ಯಾಥ್ಯೂಸ್ ಅಲಭ್ಯರಾಗಿದ್ದಾರೆ.

ಶ್ರೀಲಂಕಾ ತಂಡದ ನಾಟಕೀಯ ಕುಸಿತ
ಶ್ರೀಲಂಕಾ ತಂಡವು ಆಸ್ಟ್ರೇಲಿಯಾ 109ರನ್‌ಗಳ ಲೀಡ್‌ಗೆ ಉತ್ತರವಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ನಾಟಕೀಯ ಕುಸಿತ ಕಂಡಿದೆ. ಮೂರನೇ ದಿನದಾಟದ ಮೊದಲ ಸೆಷನ್‌ನಲ್ಲೇ ಲಂಕಾ ಕೇವಲ 22.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 113ರನ್‌ಗಳಿಗೆ ಆಲೌಟ್ ಆಗುವು ಮೂಲಕ ಸೋಲಿನ ಹಾದಿ ತುಳಿದಿದೆ. ಈ ಮೂಲಕ ಕೇವಲ ನಾಲ್ಕು ರನ್‌ಗಳ ಲೀಡ್ ಪಡೆದಿದ್ದು, ಆಸ್ಟ್ರೇಲಿಯಾ ಎದುರು ಸುಲಭವಾಗಿ ಸೋಲಿಗೆ ಶರಣಾಗಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 321ರನ್ ಕಲೆಹಾಕಿದ ಆಸಿಸ್
ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು 321ರನ್ ಕಲೆಹಾಕುವ ಮೂಲಕ ಉತ್ತಮ ಮುನ್ನಡೆ ಪಡೆದುಕೊಂಡಿತು. ಶ್ರೀಲಂಕಾದ 212ರನ್‌ಗಳಿಗೆ ಉತ್ತರವಾಗಿ ಆಸ್ಟ್ರೇಲಿಯಾ ಪರ ಉಸ್ಮಾನ್ ಖವಾಜ 71, ಗ್ರೀನ್ 77, ಅಲೆಕ್ಸ್ ಕ್ಯಾರಿ 45, ಪ್ಯಾಟ್ ಕಮಿನ್ಸ್ 25ರನ್‌ಗಳ ನೆರವಿನಿಂದ 321ರನ್ ಕಲೆಹಾಕಿ 109ರನ್‌ಗಳ ಮುನ್ನಡೆ ಪಡೆದುಕೊಂಡಿತು.

ಉಭಯ ತಂಡಗಳ ಪ್ಲೇಯಿಂಗ್ 11
ಆಸ್ಟ್ರೇಲಿಯಾ
ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಮಿಚೆಲ್ ಮಾರ್ಷ್, ಜೋಶ್ ಹೇಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್
ಶ್ರೀಲಂಕಾ
ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಜೆಫ್ರಿ ವಾಂಡರ್ಸೆ, ಲಸಿತ್ ಎಂಬುಲ್ಡೆನಿಯ, ಅಸಿತ ಫೆರ್ನಾಂಡೋ
ಬೆಂಚ್ : ವಿಶ್ವ ಫೆರ್ನಾಂಡೋ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತ, ಕಾಮಿಂದು ಮೆಂಡಿಸ್, ಓಷಾದ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ, ದಿಲ್ಶನ್ ಮಧುಶಂಕ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications