Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2018 : ಕೆಕೆಆರ್ ಗೆ ಆಘಾತ, ವೇಗಿ ಸ್ಟಾರ್ಕ್ ಅಲಭ್ಯ

Breaking : Mitchell Starc is ruled out of IPL 2018

ಬೆಂಗಳೂರು, ಮಾರ್ಚ್ 30: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 11ರ ಪ್ರಮುಖ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್)ಗೆ ಟೂರ್ನಮೆಂಟ್ ಆರಂಭಕ್ಕೂ ಮುನ್ನ ಆಘಾತಕಾರಿ ಸುದ್ದಿ ಬಂದಿದೆ. ತಂಡದ ಪ್ರಮುಖ ವೇಗಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅವರು ಐಪಿಎಲ್ 2018ಕ್ಕೆ ಅಲಭ್ಯರಾಗಿದ್ದಾರೆ.

ಈ ಬಗ್ಗೆ ಶುಕ್ರವಾರದಂದು ಕ್ರಿಕೆಟ್ ಆಸ್ಟ್ರೇಲಿಯಾ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಧಿನಿಯಮ 41 ದಂತೆ ಕೆಕೆಆರ್ ಹಾಗೂ ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಸ್ಟಾರ್ಕ್ ಅವರು ಪರಸ್ಪರ ಸಮ್ಮತಿಯಿಂದ ಬೇರ್ಪಡಬೇಕಾಗುತ್ತದೆ.



ಇದಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಮ್ಮತಿ ನೀಡಿ, ತನ್ನ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ. ಈ ಬಾರಿ ಆರ್ ಸಿಬಿ ತಂಡವನ್ನಷ್ಟೇ ಅಲ್ಲ ಐಪಿಎಲ್ ಟೂರ್ನಮೆಂಟ್ ತೊರೆದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಹರಾಜಿನಲ್ಲಿ 9.4 ಕೋಟಿ ರು (ಮೂಲ ಬೆಲೆ 2 ಕೋಟಿ ರು) ನೀಡಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಖರೀದಿಸಿತ್ತು. 2016ರಲ್ಲಿ ಗಾಯಾಳುವಾಗಿ ಟೂರ್ನಮೆಂಟ್ ನಿಂದ ಹೊರನಡೆದಿದ್ದು, 2017ರಲ್ಲೂ ಗಾಯದ ಸಮಸ್ಯೆ ಎದುರಾಗಿತ್ತು. ಈಗ ಬಲಗಾಲ ಸ್ನಾಯುಸೆಳೆತಕ್ಕೆ ಒಳಗಾಗಿದ್ದು, ಐಪಿಎಲ್ ನಲ್ಲಿ ಆಡುತ್ತಿಲ್ಲ.

Story first published: Friday, March 30, 2018, 13:51 [IST]
Other articles published on Mar 30, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+