ಟಿ20 ವಿಶ್ವಕಪ್‌ನಲ್ಲಿ ಕೆಎಲ್ ರಾಹುಲ್ ಭಾರತದ ಪರ ನಿರ್ಣಾಯಕ ಪಾತ್ರವಹಿಸಲಿದ್ದಾರೆ: ಬ್ರೇಟ್ ಲೀ

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳು ಭರ್ಜರಿಯಾಗಿ ನಡೆಯುತ್ತಿದೆ. ಒಂದೆಡೆ ಆಟಗಾರರು ಅಭ್ಯಾಸಗಳಲ್ಲಿ ತಲ್ಲೀನರಾಗಿದ್ದರೆ ಪಂದ್ಯಗಳಲ್ಲಿ ಯಾರಿಗೆ ಮೇಲುಗೈ ದೊರೆಯಬಹುದು? ಚಾಂಪಿಯನ್ ಯಾರಾಗಬಹುದು? ಯಾವ ಆಟಗಾರನಿಂದ ಯಾವ ರೀತಿಯ ಪ್ರದರ್ಶನ ಬರಬಹುದು? ಈ ರೀತಿಯ ವಿಮರ್ಶೆಗಳು ಜೋರಾಗಿ ನಡೆಯುತ್ತಿದೆ. ಮಾಜಿ ಕ್ರಿಕೆಟಿಗರು ಕ್ರಿಕೆಟ್ ವಿಶ್ಲೇಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೇಟ್ ಲೀ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಟೀಮ್ ಇಂಡಿಯಾದ ಕೆಎಲ್ ರಾಹುಲ್ ಬಗ್ಗೆ ವಿಶೇಷ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕಾರಣದಿಂದಲೇ ಭಾರತವನ್ನು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಇದುವರೆಗೂ ಸೋಲಿಸಲು ಆಗಿಲ್ಲ: ಕಪಿಲ್ ದೇವ್ಈ ಕಾರಣದಿಂದಲೇ ಭಾರತವನ್ನು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಇದುವರೆಗೂ ಸೋಲಿಸಲು ಆಗಿಲ್ಲ: ಕಪಿಲ್ ದೇವ್

ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಕೆಎಲ್ ರಾಹುಲ್ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಲಿದ್ದಾರೆ ಎಂದು ಬ್ರೇಟ್ ಲೀ ಭವಿಷ್ಯ ನುಡಿದಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರಲಿದ್ದಾರೆ ಎಂದು ಕೂಡ ಆಸ್ಟ್ರೇಲಿಯಾದ ಮಾಜಿ ವೇಗಿ ಹೇಳಿಕೆ ನೀಡಿದ್ದಾರೆ.

"ಟೀಮ್ ಇಂಡಿಯಾದ ಅಗ್ರ ನಾಲ್ಕು ಅಥವಾ ಐವರು ಬ್ಯಾಟರ್‌ಗಳು ಹಾಗೂ ಅದ್ಭುತವಾದ ಬೌಲಿಂಗ್ ದಾಳಿಯಿಂದಾಗಿ ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ಭಾರತ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಕೆಎಲ್ ರಾಹುಲ್ ಈ ಬಾರಿ ಅತ್ಯಂತ ಹೆಚ್ಚಿನ ರನ್‌ಗಳಿಸಿದ ಆಟಗಾರನಾಗುವ ಸಾಧ್ಯತೆಯಿದ್ದು ಮೊಹಮ್ಮದ್ ಶಮಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಲಿದ್ದಾರೆ. ಇತ್ತೀಚಿತ ಪ್ರದರ್ಶನವನ್ನು ನೋಡಿ ಈ ಊಹೆಯನ್ನು ಮಾಡಿದ್ದೇನೆ" ಎಂದು ಬ್ರೇಟ್ ಲೀ ಐಸಿಸಿಗೆ ಬರೆದ ಅಂಕಣದಲ್ಲಿ ಬರೆದುಕೊಂಡಿದ್ದಾರೆ.

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್; ಎಷ್ಟು ರನ್ ನೀಡಿದ್ರು ಗೊತ್ತಾ?ಟಿ20 ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್; ಎಷ್ಟು ರನ್ ನೀಡಿದ್ರು ಗೊತ್ತಾ?

ಇನ್ನು ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾ ಕೂಡ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ಲೀ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಟೂರ್ನಿಯನ್ನು ಆರಂಭಿಸಲಿದ್ದು ಅದ್ಭುತವಾದ ಟೂರ್ನಿಯನ್ನು ಆಸ್ಟ್ರೇಲಿಯಾ ಹೊಂದಲಿದೆ ಎಂದಿದ್ದಾರೆ ಬ್ರೇಟ್ ಲೀ. ಇನ್ನು ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಟ್ರೋಫಿ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಕೂಡ ಬ್ರೇಟ್ ಲೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಸ್ಟಾರ್ಕ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಕೊಡುಗೆ ನೀಡಿದರೆ ಆಸಿಸ್ ಟೂರ್ನಿಯನ್ನು ಗೆಲ್ಲುವ ಅವಕಾಶವಿದೆ ಎಂದಿದ್ದಾರೆ ಬ್ರೇಟ್ ಲೀ.

ಚುಟುಕು ಕ್ರಿಕೆಟ್ ಮಾದರಿಯಲ್ಲಿ ನಾವು ಹೆಚ್ಚಿನ ಯಶಸ್ಸನ್ನು ಸಾಧಿಸಿಲ್ಲ. ಆದರೆ ಈ ಬಾರಿ ಅದನ್ನು ಬದಲಾಯಿಸಲು ಉತ್ತಮ ಅವಕಾಶವಿದೆ. ಈ ಬಾರಿಯ ತಂಡ ಅದನ್ನು ಸಾಧಿಸಲಿದೆ. ಖಂಡಿತಾ ಇದು ಸುಲಭವಿಲ್ಲ. ವಿಶೇಷವಾಗಿ ಇಂಗ್ಲೆಂಡ್, ಭಾರತ ಹಾಗೂ ನ್ಯೂಜಿಲೆಂಡ್‌ನಂತಾ ಬಲಿಷ್ಠ ತಂಡಗಳು ಸಾಕಷ್ಟು ಕಠಿಣ ಪ್ರತಿಸ್ಪರ್ಧೆಯನ್ನು ಒಡ್ಡಲಿದೆ ಎಂದಿದ್ದಾರೆ ಬ್ರೇಟ್ ಲೀ.

ಟಿ20 ವಿಶ್ವಕಪ್: ಸೂಪರ್ 12 ಸುತ್ತಿಗೆ ಲಗ್ಗೆಯಿಟ್ಟ ಮೊದಲನೇ ತಂಡ ಶ್ರೀಲಂಕಾ; ಅತ್ತ ಸೋತ ಪಾಕಿಸ್ತಾನ!ಟಿ20 ವಿಶ್ವಕಪ್: ಸೂಪರ್ 12 ಸುತ್ತಿಗೆ ಲಗ್ಗೆಯಿಟ್ಟ ಮೊದಲನೇ ತಂಡ ಶ್ರೀಲಂಕಾ; ಅತ್ತ ಸೋತ ಪಾಕಿಸ್ತಾನ!

"ಆದರೆ ಆಸ್ಟ್ರೇಲಿಯಾ ತಂಡ ಸಾಕಷ್ಟು ಯುವ ಪ್ರತಿಭಾವಂತ ಆಟಗಾರರನ್ನು ಒಳಗೊಂಡಿದೆ. ತಂಡದ ಪ್ರಮುಖ ಆಟಗಾರನಾಗಿ ಡೇವಿಡ್ ವಾರ್ನರ್ ಇದ್ದಾರೆ. ನನ್ನ ಪ್ರಕಾರ ಐಪಿಎಲ್‌ನಲ್ಲಿ ಅವರ ಫಾರ್ಮ್‌ನ ನಂತರ ವಿಶ್ವಕಪ್‌ನಲ್ಲಿ ಸಾಕಷ್ಟು ರನ್‌ಗಳಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ. ಆತ ದೊಡ್ಡ ವೇದಿಕೆಯಲ್ಲಿ ಅತ್ಯಂತ ಆಕ್ರಮಣಕಾರಿಯಾಗಿ ಆಡುವ ಸಾಮರ್ಥ್ಯವನ್ನು ಹೊಂದಿರುವ ಬಲಿಷ್ಠ ಆಟಗಾರ" ಎಂದಿದ್ದಾರೆ ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಅತ್ಯಂತ ಪ್ರತಿಭಾವಂತ ಬೌಲರ್‌ಗಳಲ್ಲಿ ಒಬ್ಬರಾಗಿರುವ ಬ್ರೇಟ್ ಲೀ.

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಪಂದ್ಯವನ್ನು ಮುಂದಿನ ಶನಿವಾರ ಅಬುಧಾಬಿಯ ಶೇಕ್ ಝಾಯೇದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಾಡುವ ಮೂಲಕ ಅಭಿಯಾನ ಆರಂಭಿಸಲಿದೆ. ಮತ್ತೊಂದೆಡೆ ಭಾರತ ತನ್ನ ಮೊದಲ ಕದನವನ್ನು ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ಮುಂದಿನ ಭಾನುವಾರ ನಡೆಸಲಿದೆ. ಭಾರತ ಪಾಕಿಸ್ತಾನದ ವಿರುದ್ಧ ವಿಶ್ವಕಪ್‌ನಲ್ಲಿ ಅಜೇಯವಾಗಿ ಉಳಿದುಕೊಂಡಿದೆ. 13 ಬಾರಿ ಪಾಕಿಸ್ತಾನವನ್ನು ಭಾರತ ಸೋಲಿಸಿದೆ. ಈ ಪ್ರತಿಷ್ಠಿತ ದಾಖಲೆಯನ್ನು ಮುಂದುವರಿಸಲು ವಿರಾಟ್ ಕೊಹ್ಲಿ ಪಡೆ ಸಜ್ಜಾಗಿದ್ದು ಪಾಕಿಸ್ತಾನ ಈ ದಾಖಲೆಗೆ ಬ್ರೇಕ್ ಹಾಕಲು ರಣತಂತ್ರ ರೂಪಿಸುತ್ತಿದೆ.

ಭಾರತ ಸಂಪೂರ್ಣ ಸ್ಕ್ವಾಡ್ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಾಹರ್, ವರುಣ್ ಚಕ್ರವರ್ತಿ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್

Rohit Sharma ನಾಯಕನಾಗಿ Kohliಯನ್ನು ಬಳಸಿಕೊಂಡಿದ್ದು ಹೀಗೆ | Oneindia Kannada

For Quick Alerts
ALLOW NOTIFICATIONS
For Daily Alerts
Story first published: Thursday, October 21, 2021, 18:49 [IST]
Other articles published on Oct 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X