Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

223ರ ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್ ಮಾಡಿದ ಶತಕ ಬಾರಿಸಿದ ಡೆವಾಲ್ಡ್ ಬ್ರೆವಿಸ್

ಡಾರ್ವಿನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸ್ಥಿರ ಪ್ರದರ್ಶನ ನೀಡಿ 53 ರನ್‌ ಜಯ ದಾಖಲಿಸಿದೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ. ಈ ಜಯದಲ್ಲಿ ದಕ್ಷಿಣ ಆಫ್ರಿಕಾ ಯುವ ಆಟಗಾರ ಡೆವಾಲ್ಡ್ ಬ್ರೆವಿಸ್ ಮಿಂಚಿದರು. ಇವರು ಮಹತ್ವದ ಪಂದ್ಯದಲ್ಲಿ ಶತಕ ಸಿಡಿಸಿ ಗಮನ ಸೆಳೆದರು.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ ಮೇಲ್ಪಂಕ್ತೀಯ ಆಟಗಾರರು ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫರಾದರು. ಐಡೆನ್ ಮಾರ್ಕ್ರಾಮ್ (18), ರಿಯಾನ್ ರಿಕೆಲ್ಟನ್ (14), ಲುವಾನ್-ಡ್ರೆ ಪ್ರಿಟೋರಿಯಸ್ (10) ಬಿಗ್ ಇನಿಂಗ್ಸ್ ಕಟ್ಟಲಿಲ್ಲ. 4ನೇ ವಿಕೆಟ್‌ಗೆ ಡೇವಾಲ್ಡ್‌ ಬ್ರೆವಿಸ್‌ ಹಾಗೂ ಟ್ರಿಸ್ಟಾನ್ ಸ್ಟಬ್ಸ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿಹಾಕಲು ಆಸೀಸ್ ಮಾಡಿದ ಪ್ಲ್ಯಾನ್‌ಗಳು ಕೈ ಕೊಟ್ಟವು.

Brevis s Ton Helps South Africa Level Series with 53-Run Victory over Australia

ನಾಲ್ಕನೇ ವಿಕೆಟ್‌ಗೆ ಈ ಜೋಡಿ ಕೇವಲ 57 ಎಸೆತಗಳಲ್ಲಿ 126 ರನ್‌ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿತು. ಈ ವೇಳೆ ಟ್ರಿಸ್ಟಾನ್ ಸ್ಟಬ್ಸ್ 22 ಎಸೆತಗಳಲ್ಇ 31 ರನ್‌ ಬಾರಿಸಿ ಔಟ್ ಆದರು. ಒಂದು ಬದಿಯಲ್ಲಿ ವಿಕೆಟ್‌ಗಳು ಬೀಳುತ್ತಾ ಇದ್ದರೂ ಧೃತಿ ಗೆಡದೆ ಬ್ಯಾಟ್ ಮಾಡಿದ ಡೆವಾಲ್ಡ್ ಬ್ರೆವಿಸ್ ಅಬ್ಬರಿಸಿದರು. ಇವರು ಸ್ಪೋಟಕ ಆಟದ ಪರಿಣಾಮ ದಕ್ಷಿಣ ಆಫ್ರಿಕಾ ಸವಾಲಿನ ಮೊತ್ತವನ್ನು ಕಲೆ ಹಾಕುವಲ್ಲಿ ಸಫಲವಾಯಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 218 ರನ್‌ ಸೇರಿಸಿತು.

223ರ ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟಿಂಗ್

ಡೆವಾಲ್ಡ್ ಬ್ರೆವಿಸ್ ಮೈಚಳಿ ಬಿಟ್ಟು ಬ್ಯಾಟ್ ಮಾಡಿದರು. ಇವರು 56 ಎಸೆತಗಳಲ್ಲಿ 12 ಬೌಂಡರಿ, 8 ಸಿಕ್ಸರ್ ಸಹಾಯದಿಂದ 125 ರನ್‌ ಬಾರಿಸಿದರು. ಇವರು ಈ ಇನಿಂಗ್ಸ್‌ನಲ್ಲಿ 223ರ ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್ ಮಾಡಿ ಅಬ್ಬರಿಸಿದರು. ಈ ಮೂಲಕ ದಕ್ಷಿಣ ಆಫ್ರಿಕಾ ಪರ ಚಿಕ್ಕ ವಯಸ್ಸಿನಲ್ಲಿ ಟಿ20 ಶತಕ ಬಾರಿಸಿದ ದಾಖಲೆ ಹಾಗೂ ವೇಗವಾಗಿ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.

Brevis s Ton Helps South Africa Level Series with 53-Run Victory over Australia

ಸವಾಲಿನ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡದ ಅರಂಭ ಕಳಪೆಯಾಗಿತ್ತು. ತಂಡದ ಮೊತ್ತ 29 ಆಗಿದ್ದಾಗ 2 ವಿಕೆಟ್ ಬಿದ್ದವು.ನಾಯಕ ಮಿಚೆಲ್ ಮಾರ್ಷ (22) ಹಾಗೂ ಭರವಸೆಯ ಆಟಗಾರ ಟೀಮ್ ಡೇವಿಡ್ ಜೋಡಿ 22 ಎಸೆತಗಳಲ್ಲಿ 48 ರನ್‌ ಸೇರಿಸಿತು. ಗ್ಲೇನ್‌ ಮ್ಯಾಕ್ಸ್‌ವೆಲ್‌ (16), ಮಿಚೆಲ್‌ ಓವನ್‌ (8) ದೊಡ್ಡ ಇನಿಂಗ್ಸ್‌ ಕಟ್ಟಲಿಲ್ಲ. ಟೀಮ್ ಡೇವಿಡ್‌ 24 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 50 ರನ್ ಬಾರಿಸಿ ಔಟ್ ಆದರು. ಉಳಿದ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ಪರದಾಟ ನಡೆಸಿದರು. ದಕ್ಷಿಣ ಆಫ್ರಿಕಾದ ಪರ ಕ್ವೆನಾ ಮಾಫಕ, ಕಾರ್ಬಿನ್ ಬಾಷ್ ತಲಾ ಮೂರು ವಿಕೆಟ್‌ ಕಬಳಿಸಿದರು.

Story first published: Tuesday, August 12, 2025, 20:30 [IST]
Other articles published on Aug 12, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+