ಕೊಹ್ಲಿ ನಾಯಕತ್ವ ಬಿಟ್ಟುಕೊಡಬೇಕಾದ ಅಗತ್ಯವೇ ಇರಲಿಲ್ಲ, ಯಾಕೆ ಈ ನಿರ್ಧಾರ?; ದಿಗ್ಗಜ ಕ್ರಿಕೆಟಿಗನ ಬೇಸರ

ಪ್ರಸ್ತುತ ಕ್ರಿಕೆಟ್ ಜಗತ್ತಿನಲ್ಲಿ ಸದಾ ಸುದ್ದಿಯಲ್ಲಿರುವ, ದೊಡ್ಡ ಮಟ್ಟದಲ್ಲಿ ಚರ್ಚಿಸಲ್ಪಡುವ ಆಟಗಾರ ಎಂದರೆ ಅದು ವಿರಾಟ್ ಕೊಹ್ಲಿ. ಹೀಗೆ ಸದಾ ಸುದ್ದಿಯಲ್ಲಿರುತ್ತಿದ್ದ ವಿರಾಟ್ ಕೊಹ್ಲಿ ಕಳೆದೊಂದು ವಾರದಿಂದ ನಾಯಕತ್ವಕ್ಕೆ ವಿದಾಯ ಸಲ್ಲಿಸುವ ವಿಷಯದಿಂದ ತುಸು ಹೆಚ್ಚಿನ ಸುದ್ದಿಗಳಿಗೆ ಒಳಗಾಗಿದ್ದಾರೆ. ಹೌದು, ಸೆಪ್ಟೆಂಬರ್ 16ರಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಬಳಿಕ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜಿನಾಮೆ ಸಲ್ಲಿಸಿ ಓರ್ವ ಆಟಗಾರನಾಗಿ ತಂಡದ ಪರ ಆಡಲು ನಿರ್ಧರಿಸಿದ್ದೇನೆ ಎಂದು ವಿರಾಟ್ ಕೊಹ್ಲಿ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದರು.
ಹೌದು, ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಮಾದರಿಗಳತ್ತ ಗಮನ ಹರಿಸುವ ಸಲುವಾಗಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ನಡೆಯಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ಟೀಮ್ ಇಂಡಿಯಾ ಟಿ ಟ್ವೆಂಟಿ ನಾಯಕತ್ವವನ್ನು ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ಹೇಳಿಕೆಯನ್ನು ನೀಡಿದ್ದರು. ಎಲ್ಲಾ ಮಾದರಿಗಳ ನಾಯಕನಾಗಿರುವುದರಿಂದ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಹಿಂದಿನ ಕಾರಣವನ್ನು ಕೂಡ ತಿಳಿಸಿದ್ದರು.
ಹೀಗೆ ಒತ್ತಡದ ಕಾರಣವನ್ನು ನೀಡಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿರಾಟ್ ಕೊಹ್ಲಿ ನಿರ್ಧಾರಕ್ಕೆ ಈಗಾಗಲೇ ಸಾಕಷ್ಟು ಮಾಜಿ ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದು ತಮ್ಮ ತಮ್ಮ ಪಾಲಿನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇದೀಗ ವೆಸ್ಟ್ ಇಂಡೀಸ್ ತಂಡದ ಮಾಜಿ ಕ್ರಿಕೆಟಿಗ ಬ್ರಿಯಾನ್ ಲಾರಾ ಕೂಡ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜಿನಾಮೆ ಸಲ್ಲಿಸಲು ಕೈಗೊಂಡಿರುವ ನಿರ್ಧಾರದ ಕುರಿತು ಈ ಕೆಳಕಂಡಂತೆ ಪ್ರತಿಕ್ರಿಯಿಸಿದ್ದಾರೆ.

ಕೊಹ್ಲಿ ನಿರ್ಧಾರ ಕಂಡು ಆಶ್ಚರ್ಯಕ್ಕೊಳಗಾದ ಬ್ರಿಯಾನ್ ಲಾರಾ
ಸೆಪ್ಟೆಂಬರ್ 16ರಂದು ವಿರಾಟ್ ಕೊಹ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಬಳಿಕ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ಘೋಷಣೆ ಮಾಡಿದರು. ಹೀಗೆ ಯಾವುದೇ ಸುಳಿವನ್ನೂ ನೀಡದೆ ದಿಢೀರನೆ ವಿರಾಟ್ ಕೊಹ್ಲಿ ಈ ರೀತಿಯ ನಿರ್ಧಾರವನ್ನು ಕೈಗೊಂಡಿದ್ದನ್ನು ಕಂಡ ಕೊಹ್ಲಿ ಅಭಿಮಾನಿಗಳು ಅಕ್ಷರಶಃ ಆಶ್ಚರ್ಯಕ್ಕೆ ಒಳಗಾದರು. ಅದೇ ರೀತಿ ವಿರಾಟ್ ಕೊಹ್ಲಿ ಘೋಷಣೆಯನ್ನು ಕಂಡ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಕೂಡ ಆಶ್ಚರ್ಯಕ್ಕೊಳಗಾಗಿದ್ದನ್ನು ವ್ಯಕ್ತಪಡಿಸಿದ್ದಾರೆ. ಹೌದು ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಪ್ರಕಟಿಸಿದ ಕೂಡಲೇ ಆಶ್ಚರ್ಯಕ್ಕೊಳಗಾದೆ ಎಂದು ಬ್ರಿಯಾನ್ ಲಾರಾ ಹೇಳಿಕೆ ನೀಡಿದ್ದಾರೆ.

ಇಷ್ಟು ಬೇಗ ನಾಯಕ ಸ್ಥಾನ ಬಿಟ್ಟುಕೊಡುವ ಅಗತ್ಯವಿರಲಿಲ್ಲ
ಇನ್ನೂ ಮುಂದುವರೆದು ವಿರಾಟ್ ಕೊಹ್ಲಿ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸಲು ಮುಂದಾಗಿರುವುದರ ಕುರಿತು ಮಾತನಾಡಿರುವ ಬ್ರಿಯಾನ್ ಲಾರಾ ಇಷ್ಟು ಬೇಗ ನಾಯಕತ್ವವನ್ನು ತ್ಯಜಿಸುವ ಅಗತ್ಯತೆ ವಿರಾಟ್ ಕೊಹ್ಲಿಗೆ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಭಾರತ ತಂಡ ಕೊಹ್ಲಿ ನಾಯಕತ್ವದಡಿ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುತ್ತಿದೆ, ವಿರಾಟ್ ಕೊಹ್ಲಿ ಕೇವಲ ಒಂದೇ ಒಂದು ಟಿ ಟ್ವೆಂಟಿ ವಿಶ್ವಕಪ್ ಆಡಿ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯತೆ ಇಲ್ಲ ಎಂದು ಬ್ರಿಯಾನ್ ಲಾರಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಕೊಹ್ಲಿ ಓರ್ವ ಯಶಸ್ವಿ ನಾಯಕ
ಓರ್ವ ನಾಯಕನಾಗಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ, ವಿರಾಟ್ ಕೊಹ್ಲಿ ನಾಯಕತ್ವದಡಿಯಲ್ಲಿ ಟೀಮ್ ಇಂಡಿಯಾ ಬಲಿಷ್ಠ ತಂಡಗಳಾದ ಸೌತ್ಆಫ್ರಿಕಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ವಿರುದ್ಧ ಜಯವನ್ನು ಸಾಧಿಸಿ ಉತ್ತಮ ಪ್ರದರ್ಶನ ನೀಡಿದೆ ಎಂದು ಬ್ರಿಯಾನ್ ಲಾರಾ ಶ್ಲಾಘಿಸಿದ್ದಾರೆ. ಆದರೂ ಕೂಡ ವಿರಾಟ್ ಕೊಹ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿರುವುದು ಆಶ್ಚರ್ಯಕರವಾಗಿದೆ ಎಂದಿದ್ದು ಇತರ ಮಾದರಿ ಕ್ರಿಕೆಟ್‍ನಲ್ಲಿ ತನ್ನನ್ನು ತಾನು ನಾಯಕನಾಗಿ ತೊಡಗಿಸಿಕೊಳ್ಳಲು ಈ ನಿರ್ಧಾರ ಕೈಗೊಂಡಿರುವ ಕೊಹ್ಲಿಗೆ ಬ್ರಿಯಾನ್ ಲಾರಾ ತಮ್ಮ ಬೆಂಬಲವನ್ನು ಕೂಡ ವ್ಯಕ್ತಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications