Brisbane Test: ಭಾರತ ತಂಡದಲ್ಲಿ ಎರಡು ಬದಲಾವಣೆ; ಜಡೇಜಾ, ಆಕಾಶ್‌ದೀಪ್ ಕಮ್‌ಬ್ಯಾಕ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ಆರಂಭವಾಗಿದೆ. ಬಾರ್ಡರ್ ಗವಾಸ್ಕರ್ ಟ್ರೋಪಿ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿವೆ. ಆಡಿದ ಎರಡೂ ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದು, ಸರಣಿಯನ್ನು ಸಮಗೊಳಿಸಿವೆ. ಇದೀಗ ಬ್ರಸ್ಬೇನ್ ಟೆಸ್ಟ್ ಪಂದ್ಯದ ಗೆಲುವಿಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕಾದಟ ಶುರುವಾಗಿದೆ.
ಬ್ರಿಸ್ಬೇನ್ ಟೆಸ್ಟ್ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಭಾರತ ತಂಡದ ರೋಹಿತ್ ಶರ್ಮಾ ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ಮುನ್ನಡೆಸುತ್ತಿರುವ ಆಸ್ಟ್ರೇಲಿಯಾ ತಂಡ ಮೊದಲು ಇನ್ನಿಂಗ್ಸ್ ಶುರು ಮಾಡಲಿದೆ. ಭಾರತ ತಂಡ ಎರಡು ಬದಲಾವಣೆಗಳೊಂದಿಗೆ ಕಣಕ್ಕೀಳಿಯಲಿದಿದೆ. ಅಡಿಲೇಡ್ ಟೆಸ್ಟ್ ಪಂದ್ಯದ ಗೆಲುವಿಗೆ ಶ್ರಮಿಸಿದ ತಂಡದೊಂದಿಗೆ ಆಸ್ಟ್ರೇಲಿಯಾ ತಂಡ ಭಾರತವನ್ನು ಎದುರಿಸುತ್ತಿದೆ.

ಬ್ರಿಸ್ಬೇನ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಡುವ ಹನ್ನೊಂದರ ಬಳಗದಿಂದ ರವಿಚಂದ್ರನ್ ಅಶ್ವಿನ್ ಮತ್ತು ಹರ್ಷಿತ್ ರಾಣಾ ಅವರನ್ನು ಕೈ ಬಿಟ್ಟಿದೆ. ಈ ಇಬ್ಬರ ಸ್ಥಾನಕ್ಕೆ ರವೀಂದ್ರ ಜಡೇಜಾ ಮತ್ತು ಆಕಾಶ್‌ದೀಪ್ ಅವರಿಗೆ ಅವಕಾಶ ನೀಡಲಾಗಿದೆ. ಈ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಪಿ ಟೆಸ್ಟ್ ಸರಣಿಯಲ್ಲಿ ಜಡೇಜಾ ಮತ್ತು ಆಕಾಶ್‌ದೀಪ್ ಇಬ್ಬರು ಮೊದಲ ಪಂದ್ಯವನ್ನು ಆಡುತ್ತಿದ್ದಾರೆ. ಹೀಗಾಗಿ ಈ ಇಬ್ಬರ ಪ್ರದರ್ಶನದ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ.
ಅಡಿಲೇಡ್ ಟೆಸ್ಟ್‌ನಲ್ಲಿ ವಾಷಿಂಗ್ಟನ್ ಸುಂದರ್ ಬದಲಿಗೆ ಅಶ್ವಿನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಮೊದಲ ಇನಿಂಗ್ಸ್‌ನಲ್ಲಿ 22 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 7 ರನ್ ಗಳಿಸಲಷ್ಟೇ ಶಕ್ತರಾದರು. ಮೊದಲ ಇನ್ನಿಂಗ್ಸ್ ನಲ್ಲಿ ಮಾತ್ರ ಬೌಲಿಂಗ್ ಮಾಡುವ ಅವಕಾಶ ಪಡೆದ ಅಶ್ವಿನ್ ಒಂದು ವಿಕೆಟ್ ಪಡೆದಿದ್ದರು. ಇದೀಗ ಅಶ್ವಿನ್ ಹೊರಗುಳಿದಿದ್ದು, ರವೀಂದ್ರ ಜಡೇಜಾ ಅವರಿಗೆ ಮೊದಲ ಬಾರಿಗೆ ಆಡುವ ಅವಕಾಶ ಸಿಕ್ಕಿದೆ.
ಬಾರ್ಡರ್ ಗವಾಸ್ಕರ್ ಟ್ರೋಪಿ ಟೆಸ್ಟ್ ಸರಣಿಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಹರ್ಷಿತ್ ರಾಣಾ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದ್ದರು. ಆಸ್ಟ್ರೇಲಿಯಾ ತಂಡಕ್ಕೆ ಹರ್ಷಿತ್ ರಾಣಾ ತನ್ನ ಮಾರಕ ಬೌಲಿಂಗ್ ಮೂಲಕ ಕಾಡಿದ್ದರು. ಆದರೆ, ಅಡಿಲೇಡ್ ಟೆಸ್ಟ್‌ನಲ್ಲಿ ತಮ್ಮ ಫಾರ್ಮ್ ಮುಂದುವರೆಸಲು ಸಾಧ್ಯವಾಗಲಿಲ್ಲ. ಆಕಾಶ್ ದೀಪ್ ಅವರಿಗೆ ರೋಹಿತ್ ಶರ್ಮಾ ಮಣೆ ಹಾಕಿದ್ದಾರೆ.
ಪ್ಲೇಯಿಂಗ್-11
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್‌ಕೀಪರ್), ರೋಹಿತ್ ಶರ್ಮಾ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್‌ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.
ಸಮಬಲ
ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಆತಿಥೇಯ ಆಸ್ಟ್ರೇಲಿಯಾ ತಂಡವನ್ನು 295 ರನ್‌ಗಳಿಂದ ಸೋಲಿಸಿತ್ತು. ನ್ಯೂಜಿಲೆಂಡ್ ವಿರುದ್ಧ ತವರು ನೆಲದಲ್ಲಿ 0-3 ಅಂತರದಿಂದ ಸೋತ ನಂತರ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ತಲುಪಿತು. ಆಸ್ಟ್ರೇಲಿಯಾ ನೆಲದಲ್ಲಿ ಭಾರತ ತಂಡದಿಂದ ಈ ರೀತಿಯ ಪ್ರದರ್ಶನವನ್ನು ಯಾರೂ ನಿರೀಕ್ಷಿಸಿರಲಿಲ್ಲ. ಇದಾದ ನಂತರ, ಅಡಿಲೇಡ್‌ನಲ್ಲಿ ಪಿಂಕ್ ಬಾಲ್ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಾಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪುನರಾಗಮನ ಮಾಡಿ 10 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಈ ಮೂಲಕ ಸರಣಿ 1-1ರಲ್ಲಿ ಸಮಬಲಗೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications