Jasprit Bumrah: ಇಂಗ್ಲೆಂಡ್ ನೆಲದಲ್ಲಿ ಇತಿಹಾಸ ಬರೆದ ಬುಮ್ರಾ
ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳಾದ ಕೆಎಲ್ ರಾಹುಲ್ ಹಾಗೂ ಶುಭಮನ್ ಗಿಲ್ ಎರಡನೇ ಇನಿಂಗ್ಸ್‌ನಲ್ಲಿ ಸೊಗಸಾದ ಬ್ಯಾಟಿಂಗ್ ನಡೆಸಿದ್ದಾರೆ. ಇದಕ್ಕೂ ಮೊದಲು ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 669 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ವೇಳೆ ಟೀಮ್ ಇಂಡಿಯಾದ ಬೌಲರ್ಸ್‌ಗಳು ವಿಕೆಟ್ ಪಡೆಯಲು ಪರದಾಟ ನಡೆಸಿದರು. ಟೀಮ್ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು. ಈ ಮೂಲಕ ಹೊಸ ಇತಿಹಾಸ ನಿರ್ಮಿಸಿದರು.
ಇಂಗ್ಲೆಂಡ್ ನಾಲ್ಕನೇ ದಿನ 7 ವಿಕೆಟ್‌ಗೆ 544 ರನ್‌ಗಳಿಂದ ಆಟ ಮುಂದುವರೆಸಿ, 669 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 311 ರನ್ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಶತಕ ಬಾರಿಸಿ ಮಿಂಚಿದರು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಕಬಳಿಸಿದರು. ಈ ಮೂಲಕ ಮತ್ತೊಂದು ಇತಿಹಾಸ ನಿರ್ಮಿಸಿದರು.

ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾ ವೇಗಿ 50ಕ್ಕೂ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎಂಬ ಹಿರಿಮೆಗೆ ಪಾತ್ರರಾದರು. ಇವರಿಗೂ ಮೊದಲು ಈ ಸಾಧನೆಯನ್ನು ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಮಾಡಿದ್ದರು. ಇವರು ಇಂಗ್ಲೆಂಡ್ ನೆಲದಲ್ಲಿ 51 ವಿಕೆಟ್ ಕಬಳಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ಈಗ ಇಶಾಂಗ್ ಶರ್ಮಾ ಅವರ ಸಮಕ್ಕೆ ನಿಂತಿದ್ದಾರೆ.
ಮೊದಲ ಇನಿಂಗ್ಸ್‌ನಲ್ಲಿ ಬುಮ್ರಾ ಜೇಮಿ ಸ್ಮಿತ್ ಹಾಗೂ ಲಿಯಾಮ್ ಡಾಸನ್ ವಿಕೆಟ್ ಪಡೆಯುತ್ತಿದ್ದಂತೆ ಇಂಗ್ಲೆಂಡ್ ನೆಲದಲ್ಲಿ 51 ವಿಕೆಟ್ ಪಡೆದ ಹಿರಿಮೆ ತಮ್ಮದಾಗಿಸಿಕೊಂಡರು. ಅಲ್ಲದೆ ಇಶಾಂತ್ ಶರ್ಮಾ ದಾಖಲೆಯನ್ನು ಸರಿ ಗಟ್ಟಿದರು. ಇಂಗ್ಲೆಂಡ್ ನೆಲದಲ್ಲಿ ಇನ್ನು ಜಸ್ಪ್ರೀತ್ ಬುಮ್ರಾ ಇನ್ನು ಮೂರು ಇನಿಂಗ್ಸ್ ಆಡುವ ಸಾಧ್ಯತೆ ಇದ್ದು, ಈ ದಾಖಲೆ ಅಳಿಸಬಹುದಾಗಿದೆ.

ಇಂಗ್ಲೆಂಡ್ ನೆಲದಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್ಸ್
ಜಸ್ಪ್ರೀತ್ ಬುಮ್ರಾ - 51 ವಿಕೆಟ್
ಇಶಾಂತ್ ಶರ್ಮಾ - 51 ವಿಕೆಟ್
ಕಪಿಲ್ ದೇವ್ - 43 ವಿಕೆಟ್
ಮೊಹಮ್ಮದ್ ಶಮಿ - 42 ವಿಕೆಟ್
ಮೊಹಮ್ಮದ್ ಸಿರಾಜ್ - 37 ವಿಕೆಟ್
ಭರ್ಜರಿ ಜೊತೆಯಾಟ
311 ರನ್ ಹಿನ್ನಡೆಯೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭ ಕಳಪೆಯಾಗಿತ್ತು. ಆರಂಣಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಸಾಯಿ ಸುದರ್ಶನ್ ರನ್ ಕಲೆ ಹಾಕುವಲ್ಲಿ ವಿಫಲರಾಗಿ ಸೊನ್ನೆ ಸುತ್ತಿದರು. ಪರಿಣಾಮ ರನ್ ಖಾತೆ ತೆರೆಯದೆ 2 ವಿಕೆಟ್ ಕಳೆದುಕೊಂಡಿತು. ಮೂರನೇ ವಿಕೆಟ್‌ಗೆ ನಾಯಕ ಶುಭಮನ್ ಗಿಲ್ ಹಾಗೂ ಆರಂಭಿಕ ರಾಹುಲ್ ಸೊಗಸಾದ ಬ್ಯಾಟಿಂಗ್ ನಡೆಸಿತು. ಈ ಜೋಡಿ 377 ಎಸೆತಗಳಲ್ಲಿ ಅಜೇಯ 174 ರನ್ ಜೊತೆಯಾಟ ನೀಡಿತು. ಅಲ್ಲದೆ ಭಾರತ 137 ಹಿನ್ನಡೆ ಅನುಭವಿಸಿತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications