For Quick Alerts
ALLOW NOTIFICATIONS  
For Daily Alerts
 

ಮೂರನೇ ಟೆಸ್ಟ್‌ಗೆ ಬುಮ್ರಾ ಔಟ್‌? ಜಸ್ಪ್ರಿತ್‌ ಹೊರಗುಳಿಯಲು ಅಸಲಿ ಕಾರಣ ಏನು?

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಸ್ಪ್ರೀತ್ ಬುಮ್ರಾ ಮೂರನೇ ಟೆಸ್ಟ್‌ನಲ್ಲಿ ಟೀಮ್ ಮ್ಯಾನೇಜ್ಮೆಂಟ್‌ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಜಸ್ಪ್ರಿತ್ ಬುಮ್ರಾ ಅವರಿಗೆ ಮೂರನೇ ಪಂದ್ಯದಲ್ಲಿ ರೆಸ್ಟ್‌ ನೀಡಿ ಉಳಿದ ಎರಡು ಪಂದ್ಯಗಳಲ್ಲಿ ಅವರಿಗೆ ಅವಕಾಶ ನೀಡುವ ಸಾಧ್ಯತೆ ದಟ್ಟವಾಗಿದೆ. ಯಾರ್ಕರ್‌ ಸ್ಪೇಷಲಿಸ್ಟ್‌ ಬುಮ್ರಾ ಮೂರನೇ ಪಂದ್ಯದಿಂದ ದೂರ ಉಳಿಯಲಿದ್ದಾರೆ ಎಂದು ಕ್ರಿಕ್‌ಬಝ್ ವರದಿಯಲ್ಲಿ ಹೇಳಲಾಗಿದೆ. ವಿಶಾಖಪಟ್ಟಣದಲ್ಲಿ ನಡೆದ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಪಂದ್ಯದಲ್ಲಿ ಅವರು ಕೇವಲ 91 ರನ್ ನೀಡಿ 9 ವಿಕೆಟ್ ಪಡೆದರು.

Bumrah out for the third test? What is the real reason for Jasprits withdrawal?

ಹೈದರಾಬಾದ್‌ ಟೆಸ್ಟ್‌ ಹಾಗೂ ವಿಶಾಖಪಟ್ಟಣಂನಲ್ಲಿ ಭಾರತದ ಪರ ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜಸ್ಪ್ರಿತ್‌ ಬುಮ್ರಾ ಅವರಿಗೆ ಸ್ಥಾನವಿದೆ. ಜಸ್ಪ್ರೀತ್ ಬುಮ್ರಾ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ 58 ಓವರ್‌ಗಳನ್ನು ಬೌಲ್ ಮಾಡಿದ್ದಾರೆ. ಸತತ ನಾಲ್ಕು ದಿನ ಶ್ರಮವಹಿಸಿ ಅದ್ಭುತವಾಗಿ ಬೌಲಿಂಗ್ ಮಾಡಿ ಸುಸ್ತಾಗಿರಬೇಕು. ಆದ್ದರಿಂದ, ಆಯ್ಕೆದಾರರು ಅವರಿಗೆ ವಿಶ್ರಾಂತಿ ನೀಡಲು ಬಯಸುತ್ತಾರೆ ಇದರಿಂದ ಅವರು ರಿಫ್ರೆಶ್ ಆಗಿ ಮುಂದಿನ ಪಂದ್ಯಗಳಲ್ಲಿ ಅವರು ಮರಳಬಹುದು.

ಹೈದರಾಬಾದ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಭಾರತ ಸೋಲನ್ನು ಕಂಡಿತು, ಆ ಪಂದ್ಯದಲ್ಲೂ ಬುಮ್ರಾ ಸುಮಾರು 25 ಓವರ್‌ಗಳನ್ನು ಬೌಲ್ ಮಾಡಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಆಯ್ಕೆದಾರರು ಟೀಮ್ ಇಂಡಿಯಾದ ಭರವಸೆಯ ವೇಗಿಗೆ ವಿಶ್ರಾಂತಿ ನೀಡಲು ಬಯಸಿದ್ದಾರೆ.

ಕೆಎಲ್ ರಾಹುಲ್ ಮರಳುವ ನಿರೀಕ್ಷೆ

ಮೊಹಮ್ಮದ್ ಸಿರಾಜ್ ಎರಡನೇ ಟೆಸ್ಟ್‌ನಲ್ಲಿ ವಿಶ್ರಾಂತಿ ಪಡೆದಿದ್ದು, ಮೂರನೇ ಟೆಸ್ಟ್‌ನಲ್ಲಿ ಮರಳಬಹುದು ಎಂದು ಅಂದಾಜಿಸಲಾಗಿದೆ. ಅವರು ಮೂರನೇ ಟೆಸ್ಟ್‌ನಲ್ಲಿ ತಂಡದ ವೇಗದ ಬೌಲಿಂಗ್ ಅನ್ನು ಮುನ್ನಡೆಸಲಿದ್ದಾರೆ. ಇದಾದ ಬಳಿಕ ಕೊನೆಯ ಎರಡು ಪಂದ್ಯಗಳಲ್ಲಿ ಬುಮ್ರಾ ಜೊತೆ ಅವರು ಕಣಕ್ಕೆ ಇಳಿಯಲಿದ್ದಾರೆ. ಉಳಿದ ಮೂರು ಟೆಸ್ಟ್‌ ಪಂದ್ಯಗಳಿಗೆ ಮಂಗಳವಾರ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.

Bumrah out for the third test? What is the real reason for Jasprits withdrawal?

ಮೂರನೇ ಟೆಸ್ಟ್‌ನಿಂದ ಕೆಎಲ್ ರಾಹುಲ್ ಕೂಡ ತಂಡಕ್ಕೆ ಮರಳಬಹುದು. ಮೂರನೇ ಟೆಸ್ಟ್ ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ. ರವೀಂದ್ರ ಜಡೇಜಾ ಸಂಪೂರ್ಣ ಫಿಟ್ ಆಗಿಲ್ಲ. ವೇಗದ ಬೌಲರ್‌ ಮೊಹಮ್ಮದ್ ಶಮಿ ಕೂಡ ಗಾಯದಿಂದ ಇನ್ನು ಚೇತರಿಕೆ ಕಾಣದ ಕಾಣ ಇವರುಗಳು ಟೆಸ್ಟ್‌ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ವಿರಾಟ್ ಬಗ್ಗೆ ಅಪ್‌ಡೇಟ್ ಇಲ್ಲ

ವಿರಾಟ್ ಕೊಹ್ಲಿ ಮರಳುವ ಬಗ್ಗೆ ಇನ್ನೂ ಅನಿಶ್ಚಿತವಾಗಿದೆ. ಕೌಟುಂಬಿಕ ಕಾರಣಗಳಿಂದ ಅವರು ದೇಶದಿಂದ ಹೊರಗಿದ್ದಾರೆ ಎಂದು ನಂಬಲಾಗಿದೆ. ಅವರ ಲಭ್ಯತೆಯ ಬಗ್ಗೆ ಕೇಳಿದಾಗ, ಕೋಚ್ ರಾಹುಲ್ ದ್ರಾವಿಡ್, ಸರಣಿಯ ಉಳಿದ ಭಾಗಗಳಿಗೆ ಕೊಹ್ಲಿ ಲಭ್ಯತೆಯ ಬಗ್ಗೆ ತಿಳಿಯಲು ತಂಡದ ಮ್ಯಾನೇಜ್‌ಮೆಂಟ್ ಅವರನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು.

ಕೊಹ್ಲಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಎಬಿ ಡಿವಿಲಿಯರ್ಸ್ ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ, ಇದು ಅವರ ಅನುಪಸ್ಥಿತಿಗೆ ಕಾರಣವಾಗಿರಬಹುದು.

ಇಂಗ್ಲೆಂಡ್ ವಿರುದ್ಧದ ಮೂರು ಟೆಸ್ಟ್‌ ಪಂದ್ಯಗಳಿಗೆ ಇನ್ನೇನು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದ್ದು, ಸ್ಟಾರ್ ಆಟಗಾರರು ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಇನ್ನು ರಣಜಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಚೇತೇಶ್ವರ್ ಪೂಜಾರ ಆಯ್ಕೆದಾರರ ಕದ ತಟ್ಟುತ್ತಾ ಇದ್ದಾರೆ. ಯಾರಿಗೆ ಆಯ್ಕೆದಾರರ ಮಣೆ ಹಾಕುತ್ತಾರೆ ಎಂಬುದೇ ಕುತೂಹಲ ಹೆಚ್ಚಿಸಿದೆ.

Story first published: Tuesday, February 6, 2024, 14:08 [IST]
Other articles published on Feb 6, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+