ಏಕದಿನ ತಂಡದ ನಾಯಕ ರಾಹುಲ್‌ಗೆ ಟಿ20 ತಂಡದಲ್ಲಿ ಇಲ್ಲ ಸ್ಥಾನ: ಗಿಲ್ ವಾಪಸ್
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಗಳು ನಡೆಯುತ್ತಿವೆ. ಈ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಗೆ ಟೀಮ್ ಇಂಡಿಯಾವನ್ನು ಬುಧವಾರ ಪ್ರಕಟಿಸಲಾಗಿದೆ. ಪ್ರಕಟಿತ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕೋಲ್ಕತ್ತಾ ಟೆಸ್ಟ್ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಶುಭಮನ್ ಗಿಲ್ ತಂಡಕ್ಕೆ ಕಂ ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಶುಭಮನ್ ಗಿಲ್ ಅವರಿಗೆ ತಂಡದ ಉಪನಾಯಕತ್ವವನ್ನು ನೀಡಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರಿಗೆ ತಂಡದಿಂದ ಕೈ ಬಿಡಲಾಗಿದೆ. ಇವರು ಟಿ20 ಕ್ರಿಕೆಟ್‌ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಉಳಿದಂತೆ ಟಿ20 ತಂಡದಲ್ಲಿ ಅಂತಹ ದೊಡ್ಡ ಬದಲಾವಣೆಗಳು ಇಲ್ಲ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಬ್ಬರು ವಿಕೆಟ್ ಕೀಪರ್ಸ್
ಪ್ರಕಟಿತ ಟಿ20 ತಂಡದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ವಿಕೆಟ್ ಕೀಪರ್ ರೂಪದಲ್ಲಿ ಸ್ಥಾನ ಪಡೆದಿದ್ದಾರೆ. ಇವರಿಬ್ಬರು ತಮ್ಮ ಸ್ಥಾನಕ್ಕಾಗಿ ಹೋರಾಟ ನಡೆಸಲಿದ್ದಾರೆ. ಇವರಿಬ್ಬರಲ್ಲಿ ಯಾರಿಗೆ ಅವಕಾಶ ಸಿಗುತ್ತದೆ ಎಂಬುದೇ ಕುತೂಹಲ ಹೆಚ್ಚಿಸಿದೆ.
ಜಸ್ಪ್ರಿತ್ ಬುಮ್ರಾ ಕಂ ಬ್ಯಾಕ್
ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಏಕದಿನ ಸರಣಿಯ ವೇಳೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಇವರಿಗೆ ಟಿ20 ಕ್ರಿಕೆಟ್‌ನಲ್ಲಿ ಸ್ಥಾನ ನೀಡಲಾಗಿದೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವೇಗದ ಬೌಲಿಂಗ್ ನೊಗವನ್ನು ಮುನ್ನಡೆಸಲಿದ್ದಾರೆ. ಇವರೊಂದಿಗೆ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್‌ದೀಪ್ ಯಾದವ್, ಹರ್ಷಿತ್ ರಾಣಾ, ವಾಶಿಂಗ್ಟನ್ ಸುಂದರ್.
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯ ವೇಳಾಪಟ್ಟಿ
ಮೊದಲ ಪಂದ್ಯ, ಡಿಸೆಂಬರ್ 6, ಕಟಕ್
ಎರಡನೇ ಪಂದ್ಯ, ಡಿಸೆಂಬರ್ 11, ಚಂಡೀಗಢ್
ಮೂರನೇ ಪಂದ್ಯ, ಡಿಸೆಂಬರ್ 14, ಧರ್ಮಶಾಲಾ
ನಾಲ್ಕನೇ ಪಂದ್ಯ, ಡಿಸೆಂಬರ್ 17, ಲಕ್ನೋ
ಐದನೇ ಪಂದ್ಯ, ಡಿಸೆಂಬರ್ 19, ಅಹಮದಾಬಾದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications