Jasprit Bumrah: 2 ವಿಕೆಟ್ ಪಡೆದು ವಿಶೇಷ ಸಾಧನೆ ಮಾಡಿದ ಜಸ್ಪ್ರೀತ್ ಬುಮ್ರಾ
ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಕಟಕ್‌ನಲ್ಲಿ ಬಿಗುವಿನ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ, ಪ್ರವಾಸಿ ತಂಡದ ಬೌಲರ್‌ಗಳನ್ನು ಕಾಡಿದರು. ಈ ಮೂಲಕ ಜಸ್ಪ್ರೀತ್ ಬುಮ್ರಾ ಹೊಸದೊಂದು ದಾಖಲೆ ಬರೆದಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅರ್ಷದೀಪ್ ಬಳಿಕ ಈ ಸಾಧನೆ ಮಾಡಿದ ಎರಡನೇ ಬೌಲರ್ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ.
ಮಂಗಳವಾರ ನಡೆದ ಪಂದ್ಯದಲ್ಲಿ ಜಸ್ರೀತ್ ಬುಮ್ರಾ ಶಿಸ್ತು ಬದ್ಧ ದಾಳಿ ಸಂಘಟಿಸಿದರು. ಇವರು ಇನಿಂಗ್ಸ್‌ನ 11ನೇ ಓವರ್‌ನ ಎರಡನೇ ಎಸೆತದಲ್ಲಿ ಡೇವಾಲ್ಡ್ ಬ್ರೇವಿಸ್ ಅವರಿಗೆ ಶಾರ್ಪ್ ಬ್ಯಾಕ್ ಆಫ್ ಲೆಂತ್ ಎಸೆತವನ್ನು ತಪ್ಪಾಗಿ ಗ್ರಹಿಸಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಅವರು ಹಿಡಿದ ಕ್ಯಾಚ್‌ಗೆ ಬಲಿಯಾದರು. ಈ ಮೂಲಕ ಜಸ್ಪ್ರೀತ್ ಬುಮ್ರಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.

32 ವರ್ಷದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 2016ರಲ್ಲಿ ಚುಟುಕು ಫಾರ್ಮೆಟ್‌ಗೆ ಪದಾರ್ಪಣೆ ಮಾಡಿದರು. ಇವರು ಅಲ್ಲಿಂದ ಚುಟುಕು ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಜಸ್ಪ್ರೀತ್ ಬುಮ್ರಾ 80 ಪಂದ್ಯಗಳನ್ನು ಆಡಿ 101 ವಿಕೆಟ್ ಕಬಳಿಸಿದರು. ಈ ವೇಳೆ ಇವರ ಎಕಾನಮಿ 6.36 ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಪಡೆಯುತ್ತಲೇ ಚುಟುಕು ಕ್ರಿಕೆಟ್‌ನಲ್ಲಿ 100ಕ್ಕೂ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದರು.
ಅರ್ಷದೀಪ್‌ಗೆ ಅಗ್ರ ಸ್ಥಾನ
ಟೀಮ್ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು 69 ಪಂದ್ಯಗಳಲ್ಲಿ 107 ವಿಕೆಟ್ ಪಡೆದು ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಇದ್ದು, ಇವರು 121 ಪಂದ್ಯಗಳಲ್ಲಿ 99 ವಿಕೆಟ್ ಪಡೆದಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಯುಜುವೇಂದ್ರ ಚಹಾಲ್ 96 ವಿಕೆಟ್ ಪಡೆದಿದ್ದು, ಭುವನೇಶ್ವರ್ ಕುಮಾರ್ 90 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ.
ಪಂದ್ಯದ ಫಲಿತಾಂಶ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 175 ರನ್ ಸೇರಿಸಿತು. ಈ ವೇಳೆ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ 59 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 12.3 ಓವರ್‌ಗಳಲ್ಲಿ 74 ರನ್‌ಗಳಿಗೆ ಆಲೌಟ್ ಆಯಿತು. ಭಾರತ 101 ರನ್‌ಗಳಿಂದ ಜಯ ಸಾಧಿಸಿ 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications