ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಲೇ ಬೇಕು ಎಂಬ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಈಗಾಗಲೇ ಸರಣಿಯಲ್ಲಿ 2-1 ರಿಂದ ಇಂಗ್ಲೆಂಡ್ ಮುನ್ನಡೆ ಸಾಧಿಸಿದೆ. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಆಡುವುದು ಡೌಟ್. ಹೀಗಾಗಿ ಇವರ ಬದಲಿಗೆ ಯುವ ವೇಗಿಗೆ ಅವಕಾಶ ಸಿಗುತ್ತದಾ ಎಂಬ ಪ್ರಶ್ನೆಗಳು ಎದ್ದಿವೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ವೇಳೆ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಬಹುವಾಗಿ ಕಾಡಲಿದೆ. ಇನ್ನು ಇಲ್ಲಿನ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯ ಮಾಡಲಿದೆ ಎಂಬ ಮಾತುಗಳು ಸಹ ಕೇಳಿ ಬುರತ್ತಿವೆ. ಹೀಗಾಗಿ ಟೀಮ್ ಇಂಡಿಯಾ ಈ ಪಿಚ್ ಮರ್ಮ ಅರಿತು ಕೊಂಡು, ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ತನ್ನದೇ ಛಾಪು ಮೂಡಿಸಿರುವ ಆಟಗಾರನಿಗೆ ಅವಕಾಶ ನೀಡುತ್ತದಾ ಎಂಬ ಚರ್ಚೆಗಳು ಆರಂಭವಾಗಿವೆ.

ಭಾರತ ತಂಡದ ಪರ ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ಮಿಂಚು ಹರಿಸಿರುವ ಅರ್ಷದೀಪ್ ಸಿಂಗ್, ಟೆಸ್ಟ್ ಪದಾರ್ಪಣೆಯ ಕನಸು ಕಾಣುತ್ತಿದ್ದಾರೆ. ಇವರ ಕನಸು ಮ್ಯಾಂಚೆಸ್ಟರ್‌ನಲ್ಲಿ ಫಲಿಸುತ್ತದಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇವರು ತಂಡಕ್ಕೆ ಸೇರಿಕೊಳ್ಳುವುದರಿಂದ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಬಲಗೊಳ್ಳಬಹುದು. ಅರ್ಷದೀಪ್ ಒಬ್ಬ ಎಡಗೈ ವೇಗಿ ಆಗಿದ್ದರಿಂದ ತಮ್ಮ ಕರಾರುವಕ್ ದಾಳಿಯಿಂದ ಎದುರಾಳಿ ಬ್ಯಾಟರ್‌ಗಳಿಗೆ ಕಾಡಬಲ್ಲರು.
ಭಾರತ ತಂಡದಲ್ಲಿ ಸದ್ಯ ಇರುವ ವೇಗಿಗಳು ಬಲಗೈ ವೇಗಿಗಳಾಗಿದ್ದು, ಒಂದು ವೇಳೆ ಅರ್ಷದೀಪ್‌ಗೆ ಸ್ಥಾನ ಲಭಿಸಿದರೆ ಇವರು ನಿಶ್ಚಿತವಾಗಿ ತಂಡದ ಬೌಲಿಂಗ್ ವಿಭಾಗದಲ್ಲಿ ಭಿನ್ನತೆ ತರಬಹುದಾಗಿದೆ. ಇನ್ನು ಟೀಮ್ ಇಂಡಿಯಾದ ಇನ್ನೊಬ್ಬ ವೇಗದ ಬೌಲರ್ ಆಕಾಶ್ ದೀಪ್ ಗಾಯಕ್ಕೆ ತುತ್ತಾಗಿದ್ದು ಇವರು ನಾಲ್ಕನೇ ಟೆಸ್ಟ್ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಆದರೆ ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ನೀಡಿದರೆ ತಂಡಕ್ಕೆ ಒಳ್ಳೆಯದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅರ್ಷದೀಪ್ ಸಿಂಗ್ ಈಗಾಲೇ ಭಾರತದ ಪರ 63 ಟಿ20 ಪಂದ್ಯಗಳನ್ನು ಆಡಿದ್ದು 99 ವಿಕೆಟ್ ಪಡೆದಿದ್ದಾರೆ. ಇನ್ನು 9 ರನ್‌ಗೆ 4 ವಿಕೆಟ್ ಪಡೆದಿದ್ದು ಗರಿಷ್ಠ ಸಾಧನೆ ಆಗಿದೆ. ಇನ್ನು 9 ಏಕದಿನ ಪಂದ್ಯಗಳನ್ನು ಆಡಿರುವ ಅರ್ಷದೀಪ್ 14 ವಿಕೆಟ್ ಪಡೆದಿದ್ದಾರೆ. ಈಗ ಇವರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಕನಸು ಕಾಣುತ್ತಿದ್ದಾರೆ.
ಟೀಮ್ ಇಂಡಿಯಾದ ಉಪನಾಯಕ ರಿಷಭ್ ಪಂತ್ ಸಹ ಬೆರಳಿನ ಗಾಯಕ್ಕೆ ತುತ್ತಾಗಿದ್ದು ಇವರು ಸಹ ನಾಲ್ಕನೇ ಟೆಸ್ಟ್ ಒಳಗೆ ಚೇತರಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ.