Jasprit Bumrah: ಬುಮ್ರಾ ಐದನೇ ಟೆಸ್ಟ್ ಪಂದ್ಯ ಆಡ್ತಾರಾ? ಬ್ಯಾಟಿಂಗ್ ಕೋಚ್ ಹೇಳಿದ್ದೇನು?
ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಓವಲ್‌ನಲ್ಲಿ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ವಶಕ್ಕೆ ಪಡೆಯುವ ಆಸೆ ಇಂಗ್ಲೆಂಡ್ ತಂಡದ್ದಾಗಿದೆ. ಇನ್ನು ಭಾರತ ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಕನಸು ಕಾಣುತ್ತಿದೆ. ಈ ವೇಳೆ ಟೀಮ್ ಇಂಡಿಯಾ ಅಭಿಮಾನಿಗಳಲ್ಲಿ ಇರುವ ಪ್ರಶ್ನೆ ಒಂದೇ. ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಐದನೇ ಟೆಸ್ಟ್ ಪಂದ್ಯದಲ್ಲಿ ಆಡ್ತಾರಾ ಎಂಬುದಾಗಿದೆ.
ಭಾರತ ಇಂಗ್ಲೆಂಡ್‌ಗೆ ಪ್ರವಾಸವನ್ನು ಬೆಳೆಸುವ ಮುನ್ನವೇ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ, ತಾವು ಮೂರು ಟೆಸ್ಟ್ ಮಾತ್ರ ಆಡುವುದಾಗಿ ತಿಳಿಸಿದ್ದರು. ಅದರಂತೆ ಇಂಗ್ಲೆಂಡ್ ಪ್ರವಾಸದಲ್ಲಿ ಬುಮ್ರಾ ಈಗಾಗಲೇ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈಗ ಅಭಿಮಾನಿಗಳಲ್ಲಿ ಇರುವ ಪ್ರಶ್ನೆ ಮಹತ್ವದ ಐದನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಆಡ್ತಾರಾ ಎಂಬುದಾಗಿದೆ. ಈ ಪ್ರಶ್ನೆಗೆ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ಸೀತಾಂಶು ಕೋಟಕ್ ಉತ್ತರ ನೀಡಿದ್ದಾರೆ.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೀತಾಂಶು ಕೋಟಕ್ ಅವರು ಜಸ್ಪ್ರೀತ್ ಬುಮ್ರಾ ಆಡುವ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ್ದಾರೆ. ವೇಗದ ಬೌಲರ್ ಐದನೇ ಟೆಸ್ಟ್ ಆಡುವ ಬಗ್ಗೆ ತಂಡದಲ್ಲಿ ಈಗ ಯಾವುದೇ ಚರ್ಚೆಗಳು ನಡೆದಿಲ್ಲ. ಅವರು ಸಂಪೂರ್ಣ ಫಿಟ್ ಆಗಿದ್ದಾರೆ. ಆದರೆ ಅವರ ವರ್ಕ್ ಲೋಡ್ ಬಗ್ಗೆ ನಾವು ತೀರ್ಮಾನಿಸಬೇಕಿದೆ. ಮುಂದಿನ ಪಂದ್ಯದಲ್ಲಿ ಅವರು ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಕೋಚ್ ಹಾಗೂ ನಾಯಕರು ನಿರ್ಧಾರ ಮಾಡಲಿದ್ದಾರೆ ಎಂದಿದ್ದಾರೆ.
ಸರಣಿಯಲ್ಲಿ ಅಬ್ಬರಿಸಿರುವ ಬುಮ್ರಾ?
ಟೀಮ್ ಇಂಡಿಯಾ ವೇಗದ ಬೌಲರ್ ಬುಮ್ರಾ ಈಗಾಗಲೇ ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯವನ್ನು ಬುಮ್ರಾ ಆಡಿರಲಿಲ್ಲ. ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಬುಮ್ರಾಗೆ ಎರಡನೇ ಸ್ಥಾನ. ಇವರು ಆಡಿದ 3 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ. ಇನ್ನು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಈ ಸರಣಿಯಲ್ಲಿ 17 ವಿಕೆಟ್ ಕಬಳಿಸಿದ್ದಾರೆ. ಬುಮ್ರಾ ಐದನೇ ಟೆಸ್ಟ್ ಪಂದ್ಯವನ್ನು ಆಡಿದ್ದೇ ಆದಲ್ಲಿ ಎರಡು ದೊಡ್ಡ ದಾಖಲೆಗಳನ್ನು ಬರೆಯಲಿದ್ದಾರೆ.

ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಯನ್ನು ಬುಮ್ರಾ ಮಾಡಬಹುದು. ಈ ಸಾಧನೆಗೆ ಅವರಿಗೆ ಇನ್ನು ಒಂದು ವಿಕೆಟ್ ಅವಶ್ಯಕತೆ ಇದೆ. ಸದ್ಯ ಬುಮ್ರಾ ಹಾಗೂ ಇಶಾಂತ್ ಶರ್ಮಾ 51 ವಿಕೆಟ್ ಹೊಂದಿದ್ದಾರೆ. ಇನ್ನು ಐದನೇ ಟೆಸ್ಟ್‌ನಲ್ಲಿ 3 ವಿಕೆಟ್ ಪಡೆದಿದ್ದೇ ಆದಲ್ಲಿ, ಪಾಕ್ ದಿಗ್ಗಜ ಬೌಲರ್ ವಾಸಿಮ್ ಅಕ್ರಮ್ (53 ವಿಕೆಟ್) ಅವರ ಸಾಧನೆಯನ್ನು ಮೀರಿ ನಿಲ್ಲಲಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಏಷ್ಯಾದ ಬೌಲರ್ ಆಗುತ್ತಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications