For Quick Alerts
ALLOW NOTIFICATIONS  
For Daily Alerts
 

Jasprit Bumrah: 5 ವಿಕೆಟ್‌ ಪಡೆದು ಹಲವು ದಾಖಲೆ ಬರೆದ ಯಾರ್ಕರ್‌ ಸರದಾರ

ಟೀಮ್ ಇಂಡಿಯಾದ ಯಾರ್ಕರ್‌ ಸ್ಪೇಷಲಿಸ್ಟ್‌ ಜಸ್ಪ್ರೀತ್ ಬುಮ್ರಾ ಅವರು ಕೋಲ್ಕತ್ತಾದ ಈಡನ್‌ ಗಾರ್ಡನ್ ಮೈದಾನದಲ್ಲಿ ಅಬ್ಬರಿಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಕಾಟ ನೀಡಿದ್ದಾರೆ. ತಮ್ಮ ಬಿಗುವಿನ ದಾಳಿಯ ಮೂಲಕ ತೆಂಬು ಬವುಮಾ ಪಡೆಗೆ ತಲೆನೋವಾಗಿದ್ದ ಬುಮ್ರಾ ಶಿಸ್ತು ಬದ್ಧ ದಾಳಿಯನ್ನು ಸಂಘಟಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಟೀಮ್ ಇಂಡಿಯಾದ ಯಾರ್ಕರ್‌ ಸ್ಪೇಷಲಿಸ್ಟ್‌ ಬುಮ್ರಾ, ಈಡನ್‌ ಗಾರ್ಡನ್‌ನಲ್ಲಿ ಅಮೋಘ ಬೌಲಿಂಗ್ ನಡೆಸಿದರು. ಇವರು ಬೆಂಕಿಯಂತಹ ಎಸೆತಗಳನ್ನು ಎದುರಿಸುವಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳು ವಿಫಲರಾದರು. ಇವರು ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 14 ಓವರ್‌ ಬೌಲಿಂಗ್ ನಡೆಸಿ 27 ರನ್‌ ನೀಡಿ 5 ವಿಕೆಟ್‌ ಕಬಳಿಸಿದರು. ಈ ವೇಳೆ ಇವರ ಎಕಾನಮಿ 1.92ಯಲ್ಲಿ ರನ್‌ ನೀಡಿದ್ದಾರೆ. ಈ ಮೂಲಕ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಮುರಿದರು.

Bumrah s Historic 5-Wicket Haul Against South Africa at Eden Gardens Shatters Records

ಜಸ್ಪ್ರೀತ್ ಬುಮ್ರಾ ಟೆಸ್ಟ್‌ ಕ್ರಿಕೆಟ್‌ನಲ್ಲಿ 152ನೇ ಬಾರಿ ಕ್ಲೀನ್‌ ಬೋಲ್ಡ್‌ ಸಾಧನೆ ಮಾಡಿದರು. ಈ ಮೂಲಕ ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಬೌಲರ್‌ ಆರ್.ಅಶ್ವಿನ್ ಅವರ ದಾಖಲೆಯನ್ನು ಮೀರಿ ನಿಲ್ಲಿಸಿದ್ದಾರೆ. ಅಶ್ವಿನ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 151 ಬಾರಿ ಕ್ಲೀನ್‌ ಬೋಲ್ಡ್ ಮಾಡಿದ್ದರು. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ದಿಗ್ಗಜ ಬೌಲರ್‌ ಅನಿಲ್‌ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. ಇವರು 186 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಕಪಿಲ್‌ ದೇವ್‌ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಟೆಸ್ಟ್‌ನಲ್ಲಿ 167 ಬಾರಿ ಕ್ಲೀನ್ ಬೋಲ್ಡ್ ಮಾಡಿದ ಸಾಧನೆ ಮಾಡಿದ್ದಾರೆ.

ಭಾರತದ ಪರ ಟೆಸ್ಟ್‌ ಕ್ರಿಕೆಟ್‌ನ ಮೊದಲ ದಿನವೇ ಐದು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್‌ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಇಶಾಂತ್‌ ಶರ್ಮಾ 2019ರಲ್ಲಿ ಬಾಂಗ್ಲಾದೇಶ ವಿರುದ್ಧ ಈ ಸಾಧನೆ ಮಾಡಿದ್ದರು.

ಭಾರತದ ಪರ ಟೆಸ್ಟ್‌ನಲ್ಲಿ ಹೆಚ್ಚು ಬಾರಿ 5 ವಿಕೆಟ್‌ ಪಡೆದ ಬೌಲರ್ಸ್‌

ಆಟಗಾರ ಪಂದ್ಯ ವಿಕೆಟ್ 5 ವಿಕೆಟ್
ಆರ್‌.ಅಶ್ವಿನ್ 106 537 37
ಅನಿಲ್ ಕುಂಬ್ಳೆ 132 619 35
ಹರ್ಭಜನ್ ಸಿಂಗ್ 103 417 25
ಕಪಿಲ್ ದೇವ್ 131 434 23
ಜಸ್ಪ್ರೀತ್ ಬುಮ್ರಾ 51 231 16

ಜಸ್ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಐದುಕ್ಕೂ ಹೆಚ್ಚು ವಿಕೆಟ್‌ ಪಡೆದ ಸಾಧಕರ ಪಟ್ಟಿಯಲ್ಲಿ ಕನ್ನಡಿಗ ಬಿಎಸ್‌ ಚಂದ್ರಶೇಖರ್‌ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ. ಇವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 16 ಬಾರಿ ಐದಕ್ಕೂ ಹೆಚ್ಚು ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ.

ಶಮಿ ದಾಖಲೆ ಉಡೀಸ್‌

ಜಸ್ಪ್ರೀತ್ ಬುಮ್ರಾ ಈ ಐದು ವಿಕೆಟ್‌ಗಳ ಸಾಧನೆ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. ಒಟ್ಟಾರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬುಮ್ರಾ 231 ವಿಕೆಟ್‌ ಕಬಳಿಸಿದರು. ಈ ಮೂಲಕ ಇವರು ಮೊಹಮ್ಮದ್‌ ಶಮಿ ದಾಖಲೆಯನ್ನು ಅಳಿಸಿ ಹಾಕಿದರು. ಮೊಹಮ್ಮದ್ ಶಮಿ 64 ಟೆಸ್ಟ್‌ ಪಂದ್ಯಗಳಲ್ಲಿ 229 ವಿಕೆಟ್‌ ಕಬಳಿಸಿದ್ದರು.

Bumrah s Historic 5-Wicket Haul Against South Africa at Eden Gardens Shatters Records

ಪಂದ್ಯದ ಫಲಿತಾಂಶ

ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿ 159 ರನ್‌ಗಳಿಗೆ ಆಲೌಟ್ ಆಯಿತು. ಈ ವೇಳೆ ಜಸ್ಪ್ರೀತ್ ಬುಮ್ರಾ 5 ವಿಕೆಟ್‌ ಕಬಳಿಸಿದರು. ಭಾರತದ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್‌ ನಷ್ಟಕ್ಕೆ 37 ರನ್‌ ಸಿಡಿಸಿತು. ಎರಡನೇ ದಿನಕ್ಕೆ ಕೆಎಲ್ ರಾಹುಲ್, ವಾಷಿಂಗ್ಟನ್‌ ಸುಂದರ್‌ ಬ್ಯಾಟಿಂಗ್ ಕಾಯ್ದುಕೊಂಡಿದೆ.

Story first published: Friday, November 14, 2025, 16:53 [IST]
Other articles published on Nov 14, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+