IPL 2023: ಐಪಿಎಲ್‌ನಲ್ಲಿ ಬೌಲಿಂಗ್ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ ಕೆಮರೂನ್ ಗ್ರೀನ್

ಆಸ್ಟ್ರೇಲಿಯಾ ಸ್ಟಾರ್ ಆಲ್‌ರೌಂಡರ್ ಕೆಮರೂನ್ ಗ್ರೀನ್ ಏಪ್ರಿಲ್ 13ರವರೆಗೆ ಬೌಲಿಂಗ್ ಮಾಡುವಂತಿಲ್ಲ ಎನ್ನುವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಐಪಿಎಲ್‌ನಲ್ಲಿ ಮೊದಲನೇ ಪಂದ್ಯದಿಂದಲೇ ಬೌಲಿಂಗ್ ಮಾಡಲು ಸಿದ್ಧವಿದ್ದೇನೆ ಎಂದು ಹೇಳಿದ್ದಾರೆ. ಕೆಮರೂನ್ ಗ್ರೀನ್‌ರ ಈ ಹೇಳಿಕೆ ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಸಂತಸ ತಂದಿದೆ.
ಫೆಬ್ರವರಿ 9 ರಂದು ಆರಂಭವಾಗಲಿರುವ ಭಾರತದ ವಿರುದ್ಧದ ಸರಣಿಯ ಮೊದಲನೇ ಪಂದ್ಯದಲ್ಲಿ ಆಡುವುದು ಅನಮಾನ ಎಂದು ಗ್ರೀನ್ ಒಪ್ಪಿಕೊಂಡಿದ್ದಾರೆ, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ವೇಳೆ ಗಾಯಗೊಂಡಿದ್ದರು. ಕೈ ಬೆರಳು ಮುರಿದಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಿಂದ ಕೂಡ ಹೊರಗುಳಿದಿದ್ದಾರೆ.
ಕೆಮರೂನ್ ಗ್ರೀನ್ ಗಾಯಗೊಂಡಿದ್ದು, ಮುಂಬೈ ಇಂಡಿಯನ್ಸ್ ತಂಡದ ಆತಂಕಕ್ಕೆ ಕಾರಣವಾಗಿತ್ತು. ಐಪಿಎಲ್ ಮಿನಿ ಹರಾಜಿನಲ್ಲಿ ಅವರನ್ನು 17.50 ಕೋಟಿ ರುಪಾಯಿ ನೀಡಿ ಮುಂಬೈ ಇಂಡಿಯನ್ಸ್ ಖರೀದಿ ಮಾಡಿತ್ತು. 2023ರ ಐಪಿಎಲ್‌ನಲ್ಲಿ ಅವರು ಮುಂಬೈ ಇಂಡಿಯನ್ಸ್ ಪರವಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಏಪ್ರಿಲ್ 13 ರವೆರೆಗೆ ಕೆಮರೂನ್ ಗ್ರೀನ್ ಬೌಲಿಂಗ್ ಮಾಡಬಾರದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸೂಚನೆ ನೀಡಿದ ಎನ್ನುವ ವರದಿ ಮುಂಬೈ ಇಂಡಿಯನ್ಸ್ ತಂಡದ ಆತಂಕಕ್ಕೆ ಕಾರಣವಾಗಿತ್ತು, ಆದರೆ, ಈಗ ಗೊಂದಲಕ್ಕೆ ತೆರೆ ಎಳೆದಿರುವ ಗ್ರೀನ್, ನಾನು ಸಂಪೂರ್ಣವಾಗಿ ಫಿಟ್ ಆಗಿರುತ್ತೇನೆ, ಬೌಲಿಂಗ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡಕ್ಕೆ ಗ್ರೀನ್ ಮುಖ್ಯ
ಕೀರನ್ ಪೊಲಾರ್ಡ್ ಐಪಿಎಲ್‌ನಿಂದ ನಿವೃತ್ತಿಯಾಗಿರುವುದರಿಂದ ಅವರ ಸ್ಥಾನಕ್ಕೆ ಸಮರ್ಥ ಬದಲೀ ಆಟಗಾರನನ್ನಾಗಿ ಕೆಮರೂನ್ ಗ್ರೀನ್‌ರನ್ನು ಆಯ್ಕೆ ಮಾಡಿದೆ. 2022 ರಲ್ಲಿ ಭಾರತದ ವಿರುದ್ಧದ ಟಿ20 ಸರಣಿಯಲ್ಲಿ ಕೆಮರೂನ್ ಗ್ರೀನ್ ಸ್ಫೋಟಕ ಆಟವಾಡುವ ಮೂಲಕ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿದ್ದರು.
ಐಪಿಎಲ್ ಮಿನಿ ಹರಾಜಿನಲ್ಲಿ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲು ಹಲವು ಫ್ರಾಂಚೈಸಿಗಳು ಭಾರಿ ಪೈಪೋಟಿ ನಡೆಸಿದ್ದವು. ಮುಂಬೈ ಇಂಡಿಯನ್ಸ್ ಅಂತಿಮವಾಗಿ ಅವರನ್ನು ಭಾರಿ ಮೊತ್ತಕ್ಕೆ ಖರೀದಿ ಮಾಡುವಲ್ಲಿ ಯಶಸ್ವಿಯಾಯಿತು.
ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಅವರು 5 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು. ಬೆರಳಿಗೆ ಗಾಯವಾಗಿದ್ದರೂ ಕೂಡ ಬ್ಯಾಟಿಂಗ್ ಮಾಡಿದ್ದ ಅವರು, ಅರ್ಧಶತಕ ಗಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications