ಬಾರ್ಡರ್ ಗವಾಸ್ಕರ್ ಟ್ರೋಫಿ: ಆಸೀಸ್‌ಗೆ ಆರಂಭದಲ್ಲೇ ಪೆಟ್ಟು: ಸ್ಟಾರ್ ಆಲ್‌ರೌಂಡರ್ ಅನುಪಸ್ಥಿತಿ ಸಾಧ್ಯತೆ
ಈ ವರ್ಷದ ಬಹು ನಿರೀಕ್ಷಿತ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾಗಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಟೂರ್ನಿಯಲ್ಲಿ ಗೆಲುವು ಸಾಧಿಸಿದ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಹತ್ತಿರವಾಗುತ್ತದೆ. ಈ ನಿಟ್ಟಿನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಗೆಲುವಿಗಾಗಿ ರಣತಂತ್ರವನ್ನು ಹೆಣೆದುಕೊಂಡಿವೆ. ಟೀಮ್ ಇಂಡಿಯಾ ಈ ಸರಣಿಗಾಗಿ ತನ್ನ ಬಲಿಷ್ಠ ತಂಡವನ್ನು ಕಳುಹಿಸಲು ಪ್ಲ್ಯಾನ್ ಮಾಡಿಕೊಂಡಿದೆ.
ಈ ಬಾರಿ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಐದು ಟೆಸ್ಟ್ ಪಂದ್ಯಗಳನ್ನು ಆಡಲಾಗುತ್ತದೆ. ಈ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಪ್ರಾರಂಭವಾಗುತ್ತಿದೆ, ಆದರೆ ಅದಕ್ಕೂ ಮೊದಲು, ಆಸ್ಟ್ರೇಲಿಯಾಕ್ಕೆ ಹಿನ್ನಡೆ ಆದಂತೆ ಕಾಣುತ್ತಿದೆ. ಆಸೀಸ್ ತಂಡದ ಸ್ಟಾರ್ ಆಲ್‌ರೌಂಡರ್ ಒಬ್ಬರು ಮತ್ತೆ ಗಾಯಕ್ಕೆ ತುತ್ತಾಗಿದ್ದು, ನಿರೀಕ್ಷಿತ ಬಾರ್ಡರ್ ಗವಾಸ್ಕರ್ ಟ್ರೋಫಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ಆಸೀಸ್ ಆಲ್‌ರೌಂಡರ್‌ಗೆ ಗಾಯ
ಗಾಯಕ್ಕೆ ತುತ್ತಾಗಿ ಆಸ್ಟ್ರೇಲಿಯದ ಚಿಂತೆಯನ್ನು ಹೆಚ್ಚಿಸಿದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್. ಇವರು ಬಾರ್ಡರ್-ಗವಾಸ್ಕರ್ ಟ್ರೋಫಿಯಿಂದ ಹೊರಗುಳಿಯಬಹುದು. ಇವರು ಭಾರತ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಿಂದ ಹೊರ ನಡೆದರೆ, ಆತಿಥೇಯ ತಂಡಕ್ಕೆ ಪೆಟ್ಟು ಬಿದ್ದಂತೆ ಆಗುತ್ತದೆ. ಆದರೆ ಈ ಬಗ್ಗೆ ಇನ್ನು ಯಾವುದೇ ಅಧಿಕೃತ ಹೇಳಿಕೆ ಹೊರ ಬಂದಿಲ್ಲ.
ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಗಾಯಕ್ಕೆ ತುತ್ತಾಗಿದ್ದಾರೆ. ಇವರು ಬೆನ್ನು ನೋವಿನಿಂದ ಬಳಲುತ್ತಿದ್ದು, ಬಾರ್ಡರ್ ಗವಾಸ್ಕರ್ ಸರಣಿಯ ವೇಳೆ ಇವರು ಫಿಟ್ ಆಗುವ ಸಾಧ್ಯತೆ ಕಡಿಮೆ ಇದೆ. ಹೀಗೆ ಆದಲ್ಲಿ ಇವರು ಬಾರ್ಡರ್ ಗವಾಸ್ಕರ್ ಟ್ರೋಫಿಯಿಂದ ಹೊರಗುಳಿಯಬಹುದು. ಗ್ರೀನ್ ಆಸೀಸ್ ಪರ 28 ಟೆಸ್ಟ್ ಆಡಿದ್ದು 36.24 ಸರಾಸರಿಯಲ್ಲಿ 1377 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕ ಹಾಗೂ 6 ಅರ್ಗಧಶತಕಗಳು ಸೇರಿವೆ.

ಟೀಮ್ ಇಂಡಿಯಾ ಹಾಗೂ ಆಸೀಸ್ ನಡುವಣ ಎರಡನೇ ಪಂದ್ಯಕ್ಕೆ ಆಡಿಲೇಡ್ ಅಂಗಳ ಆತಿಥ್ಯ ವಹಿಸಲಿದೆ. ಈ ಪಂದ್ಯ ಡಿಸೆಂಬರ್ 6 ರಿಂದ ಪ್ರಾರಂಭವಾಗಲಿದೆ. ಮೂರನೇ ಟೆಸ್ಟ್ ಡಿಸೆಂಬರ್ 14 ರಿಂದ ಬ್ರಿಸ್ಬೇನ್‌ನಲ್ಲಿ, ನಾಲ್ಕನೇ ಟೆಸ್ಟ್ ಡಿಸೆಂಬರ್ 26 ರಿಂದ ಮತ್ತು ಐದನೇ ಟೆಸ್ಟ್ ಜನವರಿ 3 ರಿಂದ ಆಯೋಜಿಸಲಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಈ ಸರಣಿ ಮಹತ್ವದಾಗಿದೆ. ಈ ಸರಣಿಯಲ್ಲಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಲು ಟೀಮ್ ಇಂಡಿಯಾ ಪ್ಲ್ಯಾನ್ ಮಾಡಿಕೊಂಡಿದೆ. ಈ ಹಿಂದಿನ ಎರಡು ಪ್ರವಾಸದಲ್ಲಿ ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗೆದ್ದು ಬೀಗಿತ್ತು. ಈ ಬಾರಿ ಮತ್ತೊಮ್ಮೆ ಈ ಸಾಧನೆ ಮಾಡಲು ರೋಹಿತ್ ಪಡೆ ಪ್ಲ್ಯಾನ್ ಮಾಡಿಕೊಂಡಿದೆ. ಇನ್ನು ಈ ಸರಣಿಯನ್ನು ವಶಕ್ಕೆ ಪಡೆದಲ್ಲಿ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವುದು ಖಚಿತವಾಗುತ್ತದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸತತ ಮೂರನೇ ಬಾರಿಗೆ ಅರ್ಹತೆ ಪಡೆದ ತಂಡ ಎಂಬ ಹೆಗ್ಗಳಿಕೆ ಟೀಮ್ ಇಂಡಿಯಾದ್ದಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications