ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಈ ಆಲ್‌ರೌಂಡರ್ ಫಿಟ್ ಆಗುತ್ತಾರೆ ಎಂದ ಆಸ್ಟ್ರೇಲಿಯಾ ಕೋಚ್

Cameron Green Will Be Fit Before Test Series Against India : Australia Coach Andrew McDonald

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಪಡೆಯುವ ಸನಿಹದಲ್ಲಿದೆ. ಜನವರಿ 4 ರಂದು ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯ ಕೊನೆಯ ಪಂದ್ಯ ಆರಂಭವಾಗಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ನಂತರ ಆಸ್ಟ್ರೇಲಿಯಾ ಭಾರತಕ್ಕೆ ಪ್ರವಾಸ ಮಾಡಲಿದ್ದು, 4 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯ ಫೆಬ್ರವರಿ 9 ರಂದು ನಾಗ್ಪುರದಲ್ಲಿ ಆರಂಭವಾಗಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್ ಮತ್ತು ಕ್ಯಾಮೆರಾನ್ ಗ್ರೀನ್ ಗಾಯಗೊಂಡಿದ್ದರು. ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಬೆರಳು ಮುರಿತವಾಗಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

DEXA Test: ಡೆಕ್ಸಾ ಪರೀಕ್ಷೆ ಕಡ್ಡಾಯಗೊಳಿಸಿದ ಬಿಸಿಸಿಐ : ಡೆಕ್ಸಾ ಪರೀಕ್ಷೆಯ ಬಗ್ಗೆ ಇಲ್ಲಿದೆ ಮಾಹಿತಿDEXA Test: ಡೆಕ್ಸಾ ಪರೀಕ್ಷೆ ಕಡ್ಡಾಯಗೊಳಿಸಿದ ಬಿಸಿಸಿಐ : ಡೆಕ್ಸಾ ಪರೀಕ್ಷೆಯ ಬಗ್ಗೆ ಇಲ್ಲಿದೆ ಮಾಹಿತಿ

ಕ್ಯಾಮೆರಾನ್ ಗ್ರೀನ್ ಬಗ್ಗೆ ಮಾಹಿತಿ ನೀಡಿರುವ ಆಸ್ಟ್ರೇಲಿಯಾ ತಂಡದ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್, ಫೆಬ್ರವರಿಯಲ್ಲಿ ನಡೆಯಲಿರುವ ಭಾರತದ ವಿರುದ್ಧದ ಸರಣಿ ವೇಳೆಗೆ ಆಲ್‌ರೌಂಡರ್ ಗ್ರೀನ್ ಸಂಪೂರ್ಣವಾಗಿ ಫಿಟ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

Cameron Green Will Be Fit Before Test Series Against India : Australia Coach Andrew McDonald

ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಗಾಯ

ದಕ್ಷಿಣ ಆಫ್ರಿಕಾ ವಿರುದ್ದದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸ್ಟಾರ್ಕ್ ಮತ್ತು ಗ್ರೀನ್ ಗಾಯಗೊಂಡರು. ಇಬ್ಬರೂ ಸರಣಿಯ ಕೊನೆಯ ಪಂದ್ಯದಿಂದ ಹೊರಗುಳಿದಿದ್ದಾರೆ. ಮಿಚೆಲ್ ಸ್ಟಾರ್ಕ್ ಭಾರತದ ವಿರುದ್ಧದ ಸರಣಿಯ ಮೊದಲನೇ ಪಂದ್ಯಕ್ಕೆ ಅಲಭ್ಯರಾಗಲಿದ್ದು, ಎರಡನೇ ಪಂದ್ಯಕ್ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

"ಭಾರತದ ವಿರುದ್ಧದ ಸರಣಿ ವೇಳೆಗೆ ಗ್ರೀನ್ ಫಿಟ್ ಆಗುತ್ತಾರೆ ಎಂದು ನನಗೆ ವಿಶ್ವಾಸವಿದೆ. ಆತನ ಫಿಟ್ನೆಸ್ ತಂಡಕ್ಕೆ ಮುಖ್ಯವಾಗಿದೆ. ತರಬೇತಿ ನೀಡುವ ಅವಧಿಯಲ್ಲಿ ಈ ಬಗ್ಗೆ ಎಚ್ಚರಿಕೆ ವಹಿಸುತ್ತೇವೆ" ಎಂದು ಕೋಚ್ ಮೆಕ್‌ಡೊನಾಲ್ಡ್ ಹೇಳಿದ್ದಾರೆ.

ಬಾಕ್ಸಿಂಗ್‌ ಟೆಸ್ಟ್‌ನಲ್ಲಿ ಬೆರಳಿಗೆ ಗಾಯವಾಗಿದ್ದರೂ ಬ್ಯಾಟಿಂಗ್ ಮಾಡಿ ಅರ್ಧಶತಕ ಗಳಿಸಿದ ಕ್ಯಾಮೆರೂನ್ ಗ್ರೀನ್ ಬಗ್ಗೆ ಕೋಚ್ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯಕೀಯ ತಂಡವು ಶ್ಲಾಘನೀಯ ಕೆಲಸ ಮಾಡಿದೆ ಎಂದು ಹೇಳಿದರು.

"ವೈದ್ಯಕೀಯ ತಂಡ ಉತ್ತಮವಾಗಿ ಕೆಲಸ ಮಾಡಿದೆ. ಭಾರತದ ವಿರುದ್ಧದ ಮೊದಲ ಪಂದ್ಯದ ವೇಳೆಗೆ ಆತ ಫಿಟ್ ಆಗುವ ವಿಶ್ವಾಸ ಇದೆ. ಗಾಯ ಹೆಚ್ಚಾಗುವ ಭಯ ಇಲ್ಲದ ಕಾರಣ ಆತ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಬ್ಯಾಟಿಂಗ್ ಮಾಡಿದ. ನಿಗದಿತ ಸಮಯದಲ್ಲಿ ಆತ ಚೇತರಿಸಿಕೊಳ್ಳುತ್ತಾನೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಕ್ಯಾಮೆರಾನ್ ಗ್ರೀನ್ 5 ವಿಕೆಟ್ ಪಡೆದರು. ಮಾತ್ರವಲ್ಲದೆ 177 ಎಸೆತಗಳಲ್ಲಿ 51 ರನ್ ಗಳಿಸಿದ್ದರು.

Story first published: Monday, January 2, 2023, 9:32 [IST]
Other articles published on Jan 2, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X