ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರುಳುತ್ತಾರಾ ಎಬಿ ಡಿವಿಲಿಯರ್ಸ್?

Can consider asking De Villiers to reverse retirement: Mark Boucher

ಅಂತರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ವಿದಾಯವನ್ನು ಘೋಷಿಸಿದ್ದಾರೆ. ಆದರೆ ಅಭಿಮಾನಿಗಳು ಡಿವಿಲಿಯರ್ಸ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಷ್ಟು ಬೇಗ ನಿವೃತ್ತಿ ಘೋಷಿಸಿರುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನೂ ಅನೇಕ ಬಾರಿ ವ್ಯಕ್ತಪಡಿಸಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ತಂಡದ ಕೋಚ್‌ ಕೂಡ ಇದೇ ಒತ್ತಾಯವನ್ನು ಮಾಡಿದ್ದಾರೆ.

ಇತ್ತೀಚೆಗಷ್ಟೇ ನೇಮಕವಾಗಿರುವ ದಕ್ಷಿಣ ಆಫ್ರಿಕಾ ತಂಡದ ಕೋಚ್ ಮಾರ್ಕ್ ಬೌಷರ್ ವಿದಾಯ ಹೇಳಿರುವ ಡಿವಿಲಿಯರ್ಸ್ ಮರಳಿ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಬೇಕು ಎಂದಿದ್ದಾರೆ. ಈ ನಿಟ್ಟಿನಲ್ಲಿ ಅವರ ಮನವೊಲಿಸುವ ಪ್ರಯತ್ನ ಮಾಡಬೇಕಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ವಿಕೆಟ್ ಕೀಪರ್ ಹೇಳಿಕೆಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೌಷರ್ ಕೇವಲ ಡಿವಿಲಿಯರ್ಸ್ ಮಾತ್ರವಲ್ಲ ಇತ್ತೀಚೆಗೆ ವಿದಾಯ ಹೇಳಿರುವ ಆಟಗಾರರ ಮನವೊಲಿಸಬೇಕು ಎಂದಿದ್ದಾರೆ. ಟಿ20 ವಿಶ್ವಕಪ್‌ನಂತಾ ಟೂರ್ನಿಗಳಲ್ಲಿ ಪಾಲ್ಗೊಳ್ಳಬೇಕಾದರೆ ಬಲಿಷ್ಠ ತಂಡವೇ ಆಡಬೇಕು. ಹೀಗಾಗಿ ಡಿವಿಲಿಯರ್ಸ್ ಅವರಂತಾ ಆಟಗಾರರ ಅಗತ್ಯ ದಕ್ಷಿಣ ಆಫ್ರಿಕಾ ತಂಡಕ್ಕಿದೆ ಎಂದು ಬೌಷರ್ ಹೇಳಿದ್ದಾರೆ.

35 ವರ್ಷದ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕನೂ ಆಗಿರುವ ಡಿವಿಲಿಯರ್ಸ್ ದಕ್ಷಿಣ ಅಫ್ರಿಕಾದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಪ್ರಮುಖರಾಗಿದ್ದಾರೆ. 2018ರ ಮಾರ್ಚ್‌ ತಿಂಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಡಿವಿಲಿಯರ್ಸ್ ವಿದಾಯವನ್ನು ಹೇಳಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಾದ ಬಳಿಕ ಎಬಿಡಿ ಲೀಗ್ ಟೂರ್ನಿಗಳತ್ತ ಗಮನ ಹರಿಸಿದ್ದಾರೆ. ಈ ಮೂಲಕ ವಿಶ್ವದ ಮೂಲೆ ಮೂಲೆಗಳಲ್ಲೂ ತಮ್ಮ ಅಭಿಮಾನಿಗಳನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ತಂಡದಲ್ಲೂ ಎಬಿಡಿ ಕಾಣಲು ಅಭಿಮಾನಿಗಳು ತವಕಿಸುತ್ತಿದ್ದಾರೆ.

Story first published: Sunday, December 15, 2019, 16:41 [IST]
Other articles published on Dec 15, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X