ಚಾಂಪಿಯನ್ಸ್ ಟ್ರೋಫಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾನುವಾರ ಈ ಟೂರ್ನಿಯ ಫೈನಲ್ ಫೈಟ್ ನಡೆಯಲಿದೆ. ಭಾರತ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದರೆ, ಎರಡನೇ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ 50 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆದಿದೆ. ಮಾರ್ಚ್ 9 ರಂದು ಪ್ರಶಸ್ತಿ ಸುತ್ತಿನ ಕಾದಾಟ ನಡೆಯಲಿದೆ. ಪಾಕಿಸ್ತಾನ ಈ ಟೂರ್ನಿಯನ್ನು ಆಯೋಜಿಸಿದರೂ ಸಹ, ಫೈನಲ್ ಪಂದ್ಯ ದುಬೈನಲ್ಲಿ ನಡೆಯಲಿದೆ. ಇದಕ್ಕೆ ಕಾರಣ ಭಾರತ, ಪಾಕ್ ಬೆಳೆಸದೆ ಇರುವುದರಿಂದ, ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟವನ್ನು ನಡೆಸಲಿವೆ. ಟೀಮ್ ಇಂಡಿಯಾ ಕಪ್ ಗೆಲ್ಲುವ ಹಾಟ್ ಫೆವರಿಟ್ ತಂಡಗಳಲ್ಲಿ ಒಂದಾಗಿದೆ. ಹಾಗೆಂದ ಮಾತ್ರಕ್ಕೆ ನ್ಯೂಜಿಲೆಂಡ್ ತಂಡವನ್ನು ಅಲ್ಲ ಗೆಳೆಯುವಂತಿಲ್ಲ. ಐಸಿಸಿ ನಾಕೌಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾದ ದಾಖಲೆ ಹೇಗಿದೆ? ಈ ಬಗ್ಗೆ ವರದಿ ಇಲ್ಲಿದೆ.

ಐಸಿಸಿ ನಾಕೌಟ್ ಟೂರ್ನಿಗಳಲ್ಲಿ ಭಾರತ ಒಟ್ಟು ಮೂರು ಬಾರಿ ನ್ಯೂಜಿಲೆಂಡ್ ತಂಡವನ್ನು ಎದುರಿಸಿದೆ. ಈ ವೇಳೆ ಟೀಮ್ ಇಂಡಿಆಯ ಮೂರು ಬಾರಿ ಸೋಲು ಕಂಡಿದೆ. 2000 ದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ನಾಕೌಟ್‌ನಲ್ಲಿ ಮುಖಾಮುಖಿ ಆಗಿದ್ದವು. ಈ ಪಂದ್ಯದಲ್ಲಿ ಕಿವೀಸ್ ಅಮೋಘ ಜಯ ಸಾಧಿಸಿತ್ತು. ಇನ್ನು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇಂಗ್ಲೆಂಡ್‌ನಲ್ಲಿ ನಡೆದಿದ್ದ 2019ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಕಾದಾಟ ನಡೆಸಿದವು. ಈ ಪಂದ್ಯದಲ್ಲೂ ಟೀಮ್ ಇಂಡಿಯಾ ನಿರಾಸೆ ಕಂಡಿತ್ತು. ಟೀಮ್ ಇಂಡಿಯಾ 2023 ರಲ್ಲಿ ನಡೆದ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಎದುರಾಗಿದ್ದವು. ಇದೇ ಒಂದು ಪಂದ್ಯದಲ್ಲಿ ಟೀಮ್ ಇಂಡಿಯಾ ಕಿವೀಸ್ ವಿರುದ್ಧ ಜಯ ಸಾಧಿಸಿತ್ತು.
ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಟೀಮ್ ಇಂಡಿಯಾ ಐದನೇ ಬಾರಿಗೆ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. 2000ರಲ್ಲಿ ಕಿವೀಸ್ ವಿರುದ್ಧ ಸೋತರೆ, 2002ರಲ್ಲಿ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧ ಜಂಟಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಇನ್ನು 2013ರಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಮಣಿಸಿ ಟ್ರೋಪಿಗೆ ಮುತ್ತಿಟ್ಟಿತು. 2017ರಲ್ಲಿ ವಿರಾಟ್ ಕೊಹ್ಲಿ ಪಡೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನಿರಾಸೆ ಅನುಭವಿಸಿತ್ತು. ಈ ಪಂದ್ಯದಲ್ಲಿ ಭಾರತ ಪಾಕ್ ವಿರುದ್ಧ ಸೋಲು ಕಂಡಿತ್ತು.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಭಾಗವಹಿಸುತ್ತಿವೆ. ಈ ವೇಳೆ ಉಭಯ ತಂಡಗಳು ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿವೆ. ಈ ವೇಳೆ ಉಭಯ ತಂಡಗಳು ಬಲಾಡ್ಯವಾಗಿದ್ದು, ಕಪ್ ಗೆಲ್ಲುವ ನೆಚ್ಚಿನ ತಂಡಗಳಾಗಿವೆ. ಈ ಬಾರಿಯ ಚಾಂಪಿಯನ್ ಪಟ್ಟವನ್ನು ಯಾರು ಅಲಂಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.