IND vs NZ 2nd Test: ಪುಣೆ ಅಂಗಳದಲ್ಲಿ ಯಾರ ಪ್ರದರ್ಶನ ಹೇಗಿದೆ? ಭಾರತದ ಆಟಗಾರ ಶತಕ ಸಿಡಿಸುತ್ತಾರಾ?
ಗುರುವಾರದಿಂದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ನ್ಯೂಜಿಲೆಂಡ್, ಮತ್ತೊಂದು ಗೆಲುವಿನ ಕನಸು ಕಾಣುತ್ತಿದೆ. ಆದರೆ ಈ ಆಸೆಗೆ ಬ್ರೇಕ್ ಹಾಕಲು ಆತಿಥೇಯ ತಂಡದ ಪ್ಲ್ಯಾನ್ ಮಾಡಿಕೊಂಡಿದೆ. ಪುಣೆಯಲ್ಲಿ ಟೀಮ್ ಇಂಡಿಯಾದ ಆಟಗಾರರ ಪ್ರದರ್ಶನ ಹೇಗಿದೆ ಎಂಬ ಬಗ್ಗೆ ವರದಿ ಇಲ್ಲಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಂಗಳ ಈಗಾಗಲೇ ಎರಡು ಟೆಸ್ಟ್ ಪಂದ್ಯಗಳಿಗೆ ಆತಿಥ್ಯವನ್ನು ವಹಿಸಿದೆ. ಈ ಎರಡು ಪಂದ್ಯಗಳಲ್ಲಿ ಭಾರತ ಒಂದರಲ್ಲಿ ಗೆಲವು, ಮತ್ತೊಂದರಲ್ಲಿ ಸೋಲು ಕಂಡಿದೆ. ಆದರೆ ಭಾರತದ ಆಟಗಾರರು ಸ್ಥಿರ ಪ್ರದರ್ಶನ ನೀಡಿ ಎಲ್ಲರ ಚಿತ್ತವನ್ನು ಕದ್ದಿದ್ದಾರೆ. ಈ ಅಂಗಳದಲ್ಲಿ ವಿರಾಟ್ ಅಮೋಘ ಪ್ರದರ್ಶನ ನಿಡಿದ್ದಾರೆ.

ವಿರಾಟ್ ದ್ವಿಶತಕ
2019ರಲ್ಲಿ ದಕ್ಷಿಣ ಆಫ್ರಿಕಾ ಭಾರತ ಪ್ರವಾಸ ಬೆಳೆಸಿತ್ತು. ಈ ಸರಣಿಯ ಎರಡನೇ ಪಂದ್ಯಕ್ಕೆ ಪುಣೆ ಅಂಗಳ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಭಾರತ ಇನಿಂಗ್ಸ್ ಹಾಗೂ 137 ರನ್‌ಗಳಿಂದ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಾಸ್ಟರ್ ಕ್ಲಾಸ್ ಆಟವನ್ನು ಆಡಿದ್ದರು. ಮೊದಲ ಇನಿಂಗ್ಸ್‌ನಲ್ಲಿ ವಿರಾಟ್ ಅಮೋಘ ಬ್ಯಾಟಿಂಗ್ ನಡೆಸಿ, ದ್ವಿಶತಕ ಬಾರಿಸಿದ್ದರು. ಈ ಇನಿಂಗ್ಸ್‌ನಲ್ಲಿ 336 ರನ್ ಎದುರಿಸಿದ್ದ ವಿರಾಟ್ 33 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 254 ರನ್ ಸಿಡಿಸಿದ್ದರು. ಇದೇ ಅಂಗಳದಲ್ಲಿ ಟೀಮ್ ಇಂಡಿಯಾದ ಪರ ಮಯಾಂಕ್ ಅಗರ್‌ವಾಲ್ ಸಹ ಶತಕ ಬಾರಿಸಿ ಆರ್ಭಟಿಸಿದ್ದರು. ಆಲ್‌ರೌಂಡರ್ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಜಸ್ಟ್ 9 ರನ್‌ಗಳಿಂದ ಶತಕ ವಂಚಿತರಾಗಿದ್ದರು.
ಅಶ್ವಿನ್ ಕಮಾಲ್
ಈ ಮೈದಾನದಲ್ಲಿ ಅಶ್ವಿನ್ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಎರಡು ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಬೌಲಿಂಗ್ ನಡೆಸಿರುವ ಅಶ್ವಿನ್ 13 ವಿಕೆಟ್ ಪಡೆದಿದ್ದಾರೆ. ಇನ್ನು ವಿಕೆಟ್ ಬೇಟೆಯಲ್ಲಿ ಎರಡನೇ ಸ್ಥಾನದಲ್ಲಿ ವಿದರ್ಭ ಎಕ್ಸ್‌ಪ್ರೆಸ್ ಉಮೇಶ್ ಯಾದವ್ ಇದ್ದಾರೆ. ಇವರು 2 ಟೆಸ್ಟ್‌ನ 4 ಇನಿಂಗ್ಸ್‌ಗಳಲ್ಲಿ 12 ವಿಕೆಟ್ ಕಬಳಿಸಿದ್ದಾರೆ. ಇನ್ನು ಆಲ್‌ರೌಂಡರ್ ರವೀಂದ್ರ ಜಡೇಜಾ ಸಹ 9 ರನ್ ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದಾರೆ.
ಎರಡನೇ ಟೆಸ್ಟ್‌ನಲ್ಲಿ ಬರುತ್ತಾ ಶತಕ?
ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್‌ಗಳು ಅಮೋಘ ಫಾರ್ಮ್‌ನಲ್ಲಿದ್ದಾರೆ. ಯಶಸ್ವಿ ಜೈಸ್ವಾಲ್ ಈ ಸರಣಿಯಲ್ಲಿ ಕೊಂಚ ಮಂಕಾಗಿದ್ದು ಚಿಂತೆಯನ್ನು ಹೆಚ್ಚಿಸಿದೆ. ರೋಹಿತ್ ಶರ್ಮಾ ಅಗ್ರೇಸಿವ್ ಬ್ಯಾಟಿಂಗ್ ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಕ್ಲಾಸ್ ಬ್ಯಾಟಿಂಗ್ ಪ್ರದರ್ಶನ ನೀಡಿ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಬೇಕಿದೆ. ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ವಿರಾಟ್ 70 ರನ್ ಬಾರಿಸಿ ಲಯಕ್ಕೆ ಮರಳಿದ್ದಾರೆ. ಪುಣೆಯಲ್ಲಿ ಇವರು ಮೂರಂಕಿ ಮುಟ್ಟುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಉತ್ತರ ಗುರುವಾರದ ಪಂದ್ಯದ ವೇಳೆ ದೊರೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications