Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನಾಯಕ ರಜತ್‌ ಬಿರುಸಿನ ಅರ್ಧಶತಕ: ಮುಂಬೈಗೆ ಸವಾಲಿನ ಮೊತ್ತದ ಗುರಿ ನೀಡಿದ ಆರ್‌ಸಿಬಿ

ಮುಂಬೈ: ನಾಯಕ ರಜತ್ ಪಾಟಿದಾರ್ ಅವರು ಬಾರಿಸಿದ ಸ್ಫೋಟಕ ಅರ್ಧಶತಕ ಹಾಗೂ ಫಿಲ್‌ ಸಾಲ್ಟ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19ನೇ ಆವೃತ್ತಿ ಐಪಿಎಲ್‌ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ 241 ರನ್‌ಗಳ ಸವಾಲಿನ ಮೊತ್ತದ ಗುರಿಯನ್ನು ನೀಡಿದೆ.

ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಆರ್‌ಸಿಬಿ ತಂಡದ ಆರಂಭಿಕರಾದ ಫಿಲ್‌ ಸಾಲ್ಟ್ ಹಾಗೂ ಚೇಸಿಂಗ್ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಮೊದಲ ವಿಕೆಟ್‌ಗೆ 10.5 ಓವರ್‌ಗಳಲ್ಲಿ 120 ರನ್‌ ಸೇರಿಸಿತು. ಈ ಜೋಡಿ ಮುಂಬೈ ತಂಡದ ಬೌಲರ್‌ಗಳನ್ನು ಬಹುವಾಗಿ ಕಾಡಿತು. ಪವರ್ ಪ್ಲೇನಲ್ಲಿ ಈ ಜೋಡಿ 71 ರನ್‌ ಸೇರಿಸಿ ಆರ್ಭಟಿಸಿತು.

Rajat Patidar

ಆರಂಭಿಕ ಆಟಗಾರ ಫಿಲ್ ಸಾಲ್ಟ್‌ ಅಬ್ಬರದ ಬ್ಯಾಟಿಂಗ್ ನಡೆಸಿದರು. 36 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ಸಹಾಯದಿಂದ 78 ರನ್‌ ಸಿಡಿಸಿದರು. ಈ ಮೂಲಕ ಫಿಲ್‌ ಸಾಲ್ಟ್‌ ಈ ಆವೃತ್ತಿಯ ಮೊದಲ ಅರ್ಧಶತಕ ಬಾರಿಸಿ ಮಿಂಚಿದರು.

ರಜತ್‌ ಪಾಟಿದಾರ್ ಸ್ಫೋಟಕ ಆಟ

ಎರಡನೇ ವಿಕೆಟ್‌ಗೆ ವಿರಾಟ್‌ ಕೊಹ್ಲಿಗೆ ಸಾಥ್ ನೀಡಲು ಬಂದ ನಾಯಕ ರಜತ್ ಪಾಟಿದಾರ್ ಅಮೋಘ ಬ್ಯಾಟಿಂಗ್ ನಡೆಸಿದರು. ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ರಜತ್‌ ಪಾಟಿದಾರ್ ತಮ್ಮ ಬ್ಯಾಟಿಂಗ್ ಕಲಾತ್ಮಕತೆಯನ್ನು ಪ್ರದರ್ಶಿಸಿದರು. ಈ ಜೋಡಿ ಎರಡನೇ ವಿಕೆಟ್‌ಗೆ 23 ಎಸೆತಗಳಲ್ಲಿ 65 ರನ್‌ ಸೇರಿಸಿತು. ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ 5 ಬೌಂಡರಿ, 1 ಸಿಕ್ಸರ್‌ ಸಹಾಯದಿಂದ 50 ರನ್‌ ಸಿಡಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್‌ ಒಪ್ಪಿಸಿದರು.

Rajat Patidar

ರಜತ್ ಪಾಟಿದಾರ್ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು ಕೇವಲ 20 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್‌ ಸಹಾಯದಿಂದ 53 ರನ್‌ ಸಿಡಿಸಿದರು. ಈ ವೇಳೆ ಇವರ ಸ್ಟ್ರೈಕ್ ರೇಟ್‌ 265 ಆಗಿತ್ತು. ರಜತ್ ಪಾಟಿದಾರ್ ಅವರು 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಆರ್‌ಸಿಬಿ ಪರ ವೇಗವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಜಂಟಿ ಅಗ್ರ ಸ್ಥಾನ ಪಡೆದಿದ್ದಾರೆ.

ಆರ್‌ಸಿಬಿ ತಂಡ 16.5 ಓವರ್‌ಗಳಲ್ಲಿ 200 ರನ್‌ಗಳ ಗುರಿಯನ್ನು ಸೇರಿಸಿತು. ಕೆಳ ಕ್ರಮಾಂಕದಲ್ಲಿ ಟೀಮ್ ಡೇವಿಡ್‌ 16 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 34 ರನ್‌ ಸಿಡಿಸಿದರು. ಜಿತೇಶ್‌ ಶರ್ಮಾ 10 ರನ್‌ ಬಾರಿಸಿದರು. ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 240 ರನ್‌ ಸೇರಿಸಿತು. ಮುಂಬೈ ತಂಡದ ಪರ ಹಾರ್ದಿಕ್ ಪಾಂಡ್ಯ, ಟ್ರೆಂಟ್ ಬೋಲ್ಟ್‌, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್‌ ಕಬಳಿಸಿದರು.

Story first published: Sunday, April 12, 2026, 21:32 [IST]
Other articles published on Apr 12, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+