ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿರಾಟ್ ನಾಯಕತ್ವದ ಸಾಧನೆಯ ಮೆಲುಕು: ಐಸಿಸಿ ಟ್ರೋಫಿ ಗೆಲ್ಲದಿದ್ದರೂ ಕೊಹ್ಲಿ ಯಶಸ್ಸು ಅಮೋಘ!

Captaincy Record of Virat Kohli in All Formats: T20I, ODI, and Test captaincy records

ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದಾರೆ. ಟಿ20 ವಿಶ್ವಕಪ್‌ನ ಆರಂಭಕ್ಕೂ ಮುನ್ನವೇ ಈ ಬಗ್ಗೆ ವಿರಾಟ್ ಕೊಹ್ಲಿ ಘೋಷಿಸಿದ್ದರು. ಈ ಬಾರಿಯ ಟಿ20 ವಿಶ್ವಕಪ್‌ನ ಅಂತ್ಯದ ಬಳಿಕ ಚುಟುಕು ಮಾದರಿಯ ಕ್ರಿಕೆಟ್‌ನ ನಾಯಕತ್ವದಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು. ಹೀಗಾಗಿ ನಮೀಬಿಯಾ ವಿರುದ್ಧ ಭಾರತ ಗೆದ್ದು ಈ ಬಾರಿಯ ವಿಶ್ವಕಪ್ ಟೂರ್ನಿಯ ಅಭಿಯಾನವನ್ನು ಅಂತ್ಯಗೊಳಿಸುತ್ತಿದ್ದಂತೆಯೇ ಕೊಹ್ಲಿ ಕೂಡ ನಾಯಕತ್ವದ ಜವಾಬ್ಧಾರಿಯಿಂದ ಹೊರಬಂದಿದ್ದಾರೆ.

2015ರಲ್ಲಿ ಆಸ್ಟ್ರೇಲಿಯಾ ಸರಣಿಯ ಮಧ್ಯ ಭಾಗದಲ್ಲಿ ಮೊದಲ ಬಾರಿಗೆ ಭಾರತ ತಂಡದ ನಾಯಕತ್ವದ ಜವಾಬ್ಧಾರಿ ವಹಿಸಿಕೊಂಡ ವಿರಾಟ್ ಕೊಹ್ಲಿ ಈವರೆಗೆ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗದಿದ್ದರೂ ಸಾಕಷ್ಟು ಗಣನೀಯ ಸಾಧನೆ ಮಾಡಿದ್ದಾರೆ. ಅದರಲ್ಲೂ ದ್ವಿಪಕ್ಷೀಯ ಸರಣಿಗಳಲ್ಲಿ ನಾಯಕ ವಿರಾಟ್ ಕೊಹ್ಲಿಯ ಸಾಧನೆ ಶ್ರೇಷ್ಠ ಮಟ್ಟದ್ದಾಗಿದೆ. ನಾಯಕತ್ವದ ಜೊತೆಗೆ ಬ್ಯಾಟರ್ ಆಗಿಯೂ ವಿರಾಟ್ ಅದ್ಭುತವಾಗಿ ಜವಾಬ್ಧಾರಿ ನಿರ್ವಹಿಸಿದ್ದಾರೆ.

ಟಿ20 ನಾಯಕತ್ವದಿಂದ ಕೆಳಗಿಳಿದ ಕೊಹ್ಲಿ: ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶಟಿ20 ನಾಯಕತ್ವದಿಂದ ಕೆಳಗಿಳಿದ ಕೊಹ್ಲಿ: ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

ವಿರಾಟ್ ಕೊಹ್ಲಿ ನಾಯಕನಾಗಿ ಎಲ್ಲಾ ಮಾದರಿಯ ವಿಶೇಷ ಸಾಧನೆಗಳು ಇಲ್ಲಿದೆ. ಮುಂದೆ ಓದಿ..

ಟಿ20 ನಾಯಕನಾಗಿ ವಿರಾಟ್ ಕೊಹ್ಲಿ ಸಾಧನೆ

ಟಿ20 ನಾಯಕನಾಗಿ ವಿರಾಟ್ ಕೊಹ್ಲಿ ಸಾಧನೆ

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಮಾದರಿಯ ನಾಯಕನಾಗಿ ಭರ್ತಿ 50 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 30 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದು 16 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ. ಚುಟುಕು ಮಾದರಿಯಲ್ಲಿ ಭಾರತದ ಎರಡನೇ ಯಶಸ್ವಿ ನಾಯಕ ಎನಿಸಿದ್ದಾರೆ ಕೊಹ್ಲಿ. ಮೊದಲ ಸ್ಥಾನದಲ್ಲಿರುವ ಮಾಜಿ ನಾಯಕ ಎಂಎಸ್ ಧೋನಿ 42 ಗೆಲುವು ಸಾಧಿಸಿದ್ದಾರೆ. ನಾಯಕನಾಗಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಸಾಧಿಸಿದ ಮತ್ತೊಂದು ದೊಡ್ಡ ದಾಖಲೆಯೆಂದರೆ ಅದು ಸೆನಾ(SENA) ದೇಶಗಳಲ್ಲಿ ದ್ವಿಪಕ್ಷೀಯ ಸರಣಿ ಗೆದ್ದ ಏಕೈಕ ಭಾರತೀಯ ಆಟಗಾರ ಎನಿಸಿದ್ದಾರೆ.
ಇಂಗ್ಲೆಂಡ್ (2018), ದಕ್ಷಿಣ ಆಫ್ರಿಕಾ (2018), ನ್ಯೂಜಿಲೆಂಡ್ (2020) ಮತ್ತು ಆಸ್ಟ್ರೇಲಿಯಾ (2020) ನೆಲದಲ್ಲಿ ಟಿ20 ಸರಣಿ ಗೆದ್ದ ಸಾಧನೆ ಮಾಡಿದ್ದಾರೆ ನಾಯಕ ಕೊಹ್ಲಿ.

ಇನ್ನು ವೈಯಕ್ತಿಕವಾಗಿ ವಿರಾಟ್ ಕೊಹ್ಲಿ ಟಿ20ಯಲ್ಲಿ ವೇಗವಾಗಿ 1000 ರನ್‌ಗಳ ಗಡಿಯನ್ನು ತಲುಪಿದ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ. 30 ಇನ್ನಿಂಗ್ಸ್‌ಗಳಲ್ಲಿ ಈ ಸಾಧಿನೆ ಮಾಡಿದ್ದಾರೆ ಟೀಮ್ ಇಂಡಿಯಾದ ಶ್ರೇಷ್ಠ ಬ್ಯಾಟರ್. ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್‌ ಕೊಹ್ಲಿಯ ನಂತರದ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 52.05 ಸರಾಸರಿಯಲ್ಲಿ 3227 ರನ್‌ಗಳನ್ನು ಗಳಿಸಿದ್ದಾರೆ. 94 ರನ್ ಅಂತಾರಾಷ್ಟ್ರೀಯ ಟಿ20ಯಲ್ಲಿ ವಿರಾಟ್ ದಾಖಲಿಸಿದ ಹೈಯೆಸ್ಟ್ ರನ್ ಆಗಿದೆ.

ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಸಾಧನೆ

ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಸಾಧನೆ

ವಿರಾಟ್ ಕೊಹ್ಲಿ 95 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 65 ಪಂದ್ಯಗಳಲ್ಲಿ ಗೆದ್ದಿದ್ದರೆ 27 ಸೋಲಿ ಕಂಡಿದ್ದಾರೆ. ಎರಡು ಪಮದ್ಯಗಳು ರದ್ದುಕೊಂಡಿದ್ದರೆ ಒಂದು ಪಂದ್ಯ ಟೈ ಫಲಿತಾಂಶ ಕಂಡಿದೆ. ಏಕದಿನ ಕ್ರಿಕೆಟ್ ಮಾದರಿಯಲ್ಲಿ ನಾಯಕ ನಾಗಿ ವಿರಾಟ್ ಕೊಹ್ಲಿ 70.43 ಶೇಕಡಾ ಗೆಲುವಿನ ಅಂಕಿಅಂಶವನ್ನು ಹೊಂದಿದ್ದಾರೆ. ಮಾಜಿ ನಾಯಕ ಎಂಎಸ್ ಧೋನಿ 200 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದು ಇದರಲ್ಲಿ 110 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ 74 ಪಂದ್ಯಗಳಲ್ಲಿ ಸೋತಿದ್ದರು. ಎಂಎಸ್ ಧೋನಿಯ ಗೆಲುವಿನ ಶೇಕಡಾ ಅಂಕಿಅಂಶ 59.5.

ವಿರಾಟ್ ಕೊಹ್ಲಿ ಬ್ಯಾಟರ್ ಆಗಿಯೂ ಏಕದಿನ ಕ್ರಿಕೆಟ್‌ನಲ್ಲಿ ಅದ್ಭುತ ದಾಖಲೆಗಳನ್ನು ಹೊಂದಿದ್ದಾರೆ. 8000, 9000, 11000 ಮತ್ತು 12000 ರನ್‌ಗಳನ್ನು ವೇಗವಾಗಿ ತಲುಪಿದ ಬ್ಯಾಟರ್ ಎಂಬ ಹೆಗ್ಗಳಿಜೆ ವಿರಾಟ್ ಕೊಹ್ಲಿಗೆ ಇದೆ. ಟೀಮ್ ಇಂಡಿಯಾ ಕೊಹ್ಲಿ ಸತತ ಮೂರು ವರ್ಷಗಳ ಕಾಲ ಐಸಿಸಿ ರ್ಯಾಂಕಿಂಗ್‌ನಲ್ಲಿ ನಂ 1 ಏಕದಿನ ಬ್ಯಾಟ್ಸ್‌ಮನ್ ಆಗಿ ಮಿಂಚಿದ್ದಾರೆ. ಈ ಸಾಧನೆಯನ್ನು ಉಳಿದ ಯಾವ ಆಟಗಾರನಿಂದಲೂ ಮಾಡಲು ಸಾಧ್ಯವಾಗಿಲ್ಲ ಎಂಬುದು ಗಮನಾರ್ಹ ಸಂಗತಿ.

ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕನಾಗಿ ಕೊಹ್ಲಿ ಸಾಧನೆ

ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕನಾಗಿ ಕೊಹ್ಲಿ ಸಾಧನೆ

ವಿರಾಟ್ ಕೊಹ್ಲಿ 65 ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 38 ಪಂದ್ಯಗಳನ್ನು ಗೆದ್ದಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ 16 ರಲ್ಲಿ ಸೋತಿದೆ. 11 ಪಂದ್ಯಗಳು ಡ್ರಾ ಫಲಿತಾಂಶವನ್ನು ಪಡೆದುಕೊಂಡಿದೆ. ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ವಿರಾಟ್ ಕೊಹ್ಲಿ ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ ಎನ್ನಲಾಗುತ್ತಿದೆ. ಆಸ್ಟ್ರೇಲಿಯಾ ತಂಡಕ್ಕೆ ಅದರದ್ದೇ ನೆಲದಲ್ಲಿ ಸರಣಿ ಸೋಲಿನ ರುಚಿ ತೋರಿಸಿದ ಏಕೈಕ ಏಷ್ಯಾ ತಂಡದ ನಾಯಕ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ. ವಿಶೇಷವೆಂದರೆ ವಿರಾಟ್ ಕೊಹ್ಲಿ ಅವಧಿಯಲ್ಲಿ ಭಾರತ ಎರಡು ಬಾರಿ ಆಸ್ಟ್ರೇಲಿಯಾ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸಿತ್ತು.

ಇನ್ನು ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿಯೂ ವಿರಾಟ್ ಕೊಹ್ಲಿ ಭಾರೀ ಮೇಲುಗೈ ಸಾಧಿಸಿದ್ದಾರೆ. 254 ರನ್ ವಿರಾಟ್ ಕೊಹ್ಲಿ ಟೆಸ್‌ ಮಾದರಿಯಲ್ಲಿ ಗಳಿಸಿದ ಅತಿ ಹೆಚ್ಚಿನ ಸ್ಕೋರ್ ಆಗಿದೆ. ಎಲ್ಲಾ ಮಾದರಿಯಲ್ಲಿಯೂ 51ಕ್ಕಿಂತ ಹೆಚ್ಚು ಸರಾಸರಿಯನ್ನು ಹೊಂದಿರುವ ಏಕೈಕ ಆಟಗಾರ ಎನಿಸಿದ್ದಾರೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ಒಟ್ಟಾರೆ ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ಒಟ್ಟಾರೆ ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಸದ್ಯ 7ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ದಿಗ್ಗಹ ಆಟಗಾರ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಕ್ಯಾಲೆಂಡರ್ ವರ್ಷವೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 2017ರಲ್ಲಿ ವಿರಾಟ್ ಕೊಹ್ಲಿ 2818ರಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಕುಮಾರ್ ಸಂಗಕ್ಕರ 2868 ರನ್‌ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈವರೆಗೆ ಒಟ್ಟು 70 ಶತಕ ಗಳಿಸಿದ ಸಾಧನೆ ಮಾಡಿದ್ದು ಇದು ಸಚಿನ್ ತೆಂಡೂಲ್ಕರ್(100 ಶತಕ) ಹಾಗೂ ರಿಕಿ ಪಾಂಟಿಂಗ್ ನಂತರದ ಸಾಧನೆಯಾಗಿದೆ. ಒಂದು ಕ್ಯಾಲೆಂಡರ್ ವರ್ಷದಲ್ಲಿ 11 ಶತಕ ಬಾರಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ ಎಂಬ ಹೆಚ್ಚಗಳಿಕೆ ಕೂಡ ಪಡೆದುಕೊಂಡಿದ್ದಾರೆ. ಮೊದಲ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ ಇದ್ದಾರೆ.

Story first published: Wednesday, November 10, 2021, 9:50 [IST]
Other articles published on Nov 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X