Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CCL 2023: ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್-ತೆಲುಗು ವಾರಿಯರ್ಸ್ ಮುಖಾಮುಖಿ

CCL 2023: Karnataka Bulldozers And Telugu Warriors Will Play A Semifinal Match Of CCL 2023

ಸೆಲಿಬ್ರಿಟಿ ಕ್ರಿಕೆಟ್ ಲೀಗ್‌ನ 2023ರ ಆವೃತ್ತಿಯ ಸೆಮಿಫೈನಲ್ ಪಂದ್ಯಗಳು ಶುಕ್ರವಾರ (ಇಂದು) ನಡೆಯಲಿವೆ. ವಿಶಾಖಪಟ್ಟಣದಲ್ಲಿ ಈ ಪಂದ್ಯಗಳು ನಡೆಯಲಿದ್ದು, ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಭೋಜ್‌ಪುರಿ ದಬಾಂಗ್ಸ್‌ ಮುಖಾಮುಖಿಯಾಗಲಿವೆ. ಮಧ್ಯಾಹ್ನ 2.30ಕ್ಕೆ ಈ ಪಂದ್ಯ ಆರಂಭವಾಗಲಿದೆ.

ಸೆಮಿಫೈನಲ್‌ನ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ತೆಲುಗು ವಾರಿಯರ್ಸ್ ವಿರುದ್ಧ ಸೆಣೆಸಲಿದೆ. ಸಂಜೆ 7 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ. ಮಾರ್ಚ್ 18ರಂದು ನಡೆಯಬೇಕಿದ್ದ ಸೆಮಿಫೈನಲ್ ಪಂದ್ಯವನ್ನು ಅನಿವಾರ್ಯ ಕಾರಣಗಳಿಂದಾಗಿ ಮಾರ್ಚ್ 24ಕ್ಕೆ ಮುಂದೂಡಲಾಗಿತ್ತು. ಫೈನಲ್ ಪಂದ್ಯ ಮಾರ್ಚ್ 25 ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ ಬುಲ್ಡೋಜರ್ಸ್ ನಾಲ್ಕನೇ ಸ್ಥಾನದಲ್ಲಿರುವ ತೆಲುಗು ವಾರಿಯರ್ಸ್ ವಿರುದ್ಧ ಸೆಣೆಸಲಿದೆ. ಎರಡನೇ ಸ್ಥಾನದಲ್ಲಿರುವ ಭೋಜ್‌ಪುರಿ ದಬಾಂಗ್ಸ್ ಮೂರನೇ ಸ್ಥಾನದಲ್ಲಿರುವ ಮುಂಬೈ ಹೀರೋಸ್ ತಂಡವನ್ನು ಎದುರಿಸಲಿದೆ. ಕರ್ನಾಟಕ ಬುಲ್ಡೋಜರ್ಸ್ ಮತ್ತು ಭೋಜ್‌ಪುರಿ ದಬಾಂಗ್ಸ್‌ ಲೀಗ್ ಹಂತದಲ್ಲಿ ಯಾವುದೇ ಪಂದ್ಯವನ್ನು ಸೋಲದೆ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿವೆ.

CCL 2023: Karnataka Bulldozers And Telugu Warriors Will Play A Semifinal Match Of CCL 2023

ಸೆಮಿಫೈನಲ್‌ನಲ್ಲಿ ರೋಚಕ ಹಣಾಹಣಿ

ಲೀಗ್ ಹಂತದಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ತಂಡವನ್ನು ಮಣಿಸಿ ಫೈನಲ್‌ಗೆ ಪ್ರವೇಶಿಸುವ ವಿಶ್ವಾಸದಲ್ಲಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿರುವ ತೆಲುಗು ವಾರಿಯರ್ಸ್ ತವರಿನ ಅಂಗಳದ ಲಾಭ ಪಡೆಯುವ ಉತ್ಸಾಹದಲ್ಲಿದೆ.

ನಾಯಕ ಪ್ರದೀಪ್ ಬೊಗಾದಿ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಬಲಿಷ್ಠವಾಗಿದೆ. ರಾಜೀವ್ ಹನು, ಡಾರ್ಲಿಂಗ್ ಕೃಷ್ಣ, ಅರುಣ್ ಬಚ್ಚನ್, ಜಯರಾಮ್ ಕಾರ್ತಿಕ್ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಕಿಚ್ಚ ಸುದೀಪ್ ಕೂಡ ತಂಡದ ಜೊತೆ ಇರಲಿದ್ದು ಆಟಗಾರರಿಗೆ ಹೆಚ್ಚಿನ ಸ್ಪೂರ್ತಿ ತುಂಬುತ್ತಾರೆ.

ಮೂರು ಬಾರಿ ಸಿಸಿಎಲ್ ಕಪ್ ಗೆದ್ದಿರುವ ತೆಲುಗು ವಾರಿಯರ್ಸ್ ತಂಡ ಕೂಡ ಬಲಿಷ್ಠವಾಗಿದೆ. ಅಕಿಲ್ ಅಕ್ಕಿನೇನಿ ಮತ್ತು ಪ್ರಿನ್ಸ್ ತಂಡದ ಸ್ಫೋಟಕ ಬ್ಯಾಟರ್ ಗಳಾಗಿದ್ದಾರೆ. ಇವರಿಬ್ಬರನ್ನು ಕರ್ನಾಟಕ ಬುಲ್ಡೋಜರ್ಸ್ ಕಡಿಮೆ ಮೊತ್ತಕ್ಕೆ ಔಟ್ ಮಾಡಿದರೆ ಮಾತ್ರ ಗೆಲುವು ಸುಲಭವಾಗಲಿದೆ.

CCL 2023: Karnataka Bulldozers And Telugu Warriors Will Play A Semifinal Match Of CCL 2023

ಜೀ ಪಿಚ್ಚರ್, ಯೂಟ್ಯೂಟ್‌ನಲ್ಲಿ ನೇರಪ್ರಸಾರ

ಸಿಸಿಎಲ್ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದಾಗಿದೆ. ಕನ್ನಡದಲ್ಲಿ ಪಂದ್ಯದ ನೇರಪ್ರಸಾರವನ್ನು ಜೀ ಪಿಚ್ಚರ್ ವಾಹಿನಿಯಲ್ಲಿ ನೋಡಬಹುದು. ಜೀ5 ಆಪ್‌ ಚಂದಾದಾರರು ಸಹ ಮೊಬೈಲ್ ಆಪ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ಕರ್ನಾಟಕ ಬುಲ್ಡೋಜರ್ಸ್ : ಕೃಷ್ಣ, ಪ್ರದೀಪ್ ಬೋಗಾದಿ (ನಾಯಕ), ರಾಜೀವ್ ಹನು, ಕಿಚ್ಚ ಸುದೀಪ್ (ವಿಕೆಟ್ ಕೀಪರ್), ಗಣೇಶ್, ಸುನೀಲ್ ರಾವ್, ಜಯರಾಮ್ ಕಾರ್ತಿಕ್, ಕರಣ್ ಅರ್ಯಾನ್, ಚಂದನ್ ಕುಮಾರ್, ನಿರೂಪ್ ಭಂಡಾರಿ, ಅರುಣ್ ಬಚ್ಚನ್.

ತೆಲುಗು ವಾರಿಯರ್ಸ್: ಅಕಿಲ್ ಅಕ್ಕಿನೇನಿ (ನಾಯಕ), ಪ್ರಿನ್ಸ್, ಸುಧೀರ್ ಬಾಬು, ಅಶ್ವಿನ್ ಬಾಬು, ರೋಷನ್, ಥಮನ್, ನಿಖಿಲ್, ಆರ್ ರಘು, ಸಮರ್ಥ್, ಸಚಿನ್ ಜೋಷಿ, ಅಯ್ಯಪ್ಪ ಶರ್ಮ (ವಿಕೆಟ್ ಕೀಪರ್).

Story first published: Friday, March 24, 2023, 2:30 [IST]
Other articles published on Mar 24, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+