Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CCL 2023: ಸೆಮಿಫೈನಲ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್‌ಗೆ ತೆಲುಗು ವಾರಿಯರ್ಸ್ ಎದುರಾಳಿ: ಪಂದ್ಯದ ದಿನಾಂಕ, ಸ್ಥಳ, ಸಮಯದ ವಿವರ

CCL 2023: Karnataka Bulldozers Will Face Telugu Warriors In The Semifinal : Venue, Match Details

ಸೆಲಿಬ್ರಿಟಿ ಕ್ರಿಕೆಟ್‌ ಲೀಗ್‌ನ 2023 ಆವೃತ್ತಿಯಲ್ಲಿ ಒಂದೂ ಪಂದ್ಯವನ್ನು ಸೋಲದೆ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಲೀಗ್ ಹಂತದ ಎಲ್ಲಾ ಪಂದ್ಯಗಳು ಮುಕ್ತಾಯವಾಗಿದ್ದು ನಾಲ್ಕು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿವೆ.

ಕರ್ನಾಟಕ ಬುಲ್ಡೋಜರ್ಸ್ ಅಗ್ರಸ್ಥಾನಿಯಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದರೆ, ಭೋಜ್‌ಪುರಿ ದಬಾಂಗ್ಸ್ 2ನೇ ಸ್ಥಾನದಲ್ಲಿದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಮುಂಬೈ ಹೀರೋಸ್ ಮತ್ತು ತೆಲುಗು ವಾರಿಯರ್ಸ್ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿವೆ.

ಸೆಮಿಫೈನಲ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ವಿರುದ್ಧ ಸೆಣೆಸಲಿದೆ. ಕರ್ನಾಟಕ ಲೀಗ್ ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲಿ ಗೆದಿತ್ತು. ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ತೆಲುಗು ವಾರಿಯರ್ಸ್ ಸ್ಥಿರವಾದ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ಉತ್ತಮ ರನ್‌ರೇಟ್ ಕಾಪಾಡಿಕೊಂಡಿದ್ದು ಚೆನ್ನೈರೈನೋಸ್ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಸಹಕಾರಿಯಾಯಿತು.

ಸಿಸಿಎಲ್‌ ಪಂದ್ಯವಾಳಿಯ ಸೆಮಿಫೈನಲ್ ಪಂದ್ಯಗಳು ಹೈದರಾಬಾದ್‌ನಲ್ಲಿ ನಡೆಯಲಿವೆ. ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ವಿರುದ್ಧ ಸೆಣೆಸಿದರೆ. ಭೋಜ್‌ಪುರಿ ದಬಾಂಗ್ಸ್ ಮುಂಬೈ ಹೀರೋಸ್ ವಿರುದ್ಧ ಸೆಣೆಸಲಿದೆ. ಫೈನಲ್ ಪಂದ್ಯ ಕೂಡ ಹೈದರಾಬಾದ್‌ನಲ್ಲೇ ನಡೆಯಲಿದ್ದು, ಮಾರ್ಚ್ 19ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಅತ್ಯುತ್ತಮ ಪ್ರದರ್ಶನ ನೀಡಿರುವ ಕರ್ನಾಟಕ

ಅತ್ಯುತ್ತಮ ಪ್ರದರ್ಶನ ನೀಡಿರುವ ಕರ್ನಾಟಕ

ಕರ್ನಾಟಕ ಬುಲ್ಡೋಜರ್ಸ್ ಈ ಬಾರಿ ಸಿಸಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಲೀಗ್‌ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಸ್ಫೋಟಕ ಬ್ಯಾಟರ್‍, ಆಲ್‌ರೌಂಡರ್ ಗಳ ದಂಡನ್ನೇ ಹೊಂದಿರುವುದು ತಂಡದ ಪ್ರಮುಖ ಶಕ್ತಿಯಾಗಿದೆ.

ಅರುಣ್ ಬಚ್ಚನ್, ರಾಜೀವ್ ಹನು, ಡಾರ್ಲಿಂಗ್ ಕೃಷ್ಣ, ಜಯರಾಮ್ ಕಾರ್ತಿಕ್ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ನಾಯಕ ಪ್ರದೀಪ್ ಬೋಗಾದಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಿಚ್ಚ ಸುದೀಪ್ ತಂಡದಲ್ಲಿರುವುದು ದೊಡ್ಡ ಶಕ್ತಿಯಾಗಿದೆ.

ತೆಲುಗು ವಾರಿಯರ್ಸ್ ಅಪಾಯಕಾರಿ ತಂಡ

ತೆಲುಗು ವಾರಿಯರ್ಸ್ ಅಪಾಯಕಾರಿ ತಂಡ

ಮೂರು ಬಾರಿ ಸಿಸಿಎಲ್ ಚಾಂಪಿಯನ್ ಆಗಿರುವ ತೆಲುಗು ವಾರಿಯರ್ಸ್ ತಂಡವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಹೈದರಾಬಾದ್‌ನಲ್ಲಿ ಪಂದ್ಯ ನಡೆಯುವುದರಿಂದ ತವರಿನ ಅಭಿಮಾನಿಗಳ ಪ್ರೋತ್ಸಾಹ ಹೆಚ್ಚಾಗಿ ಸಿಗಲಿದೆ. ತವರಿನ ಅಂಗಳದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಭಾರಿ ಪೈಪೋಟಿ ನೀಡುವ ಸಾಮರ್ಥ್ಯ ತೆಲುಗು ವಾರಿಯರ್ಸ್ ತಂಡಕ್ಕಿದೆ.

ಅಕಿಲ್ ಅಕ್ಕಿನೇನಿ, ಪ್ರಿನ್ಸ್ ತಂಡದ ಪ್ರಮುಖ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಕರ್ನಾಟಕ ಬುಲ್ಡೋಜರ್ಸ್ ಬ್ಯಾಟಿಂಗ್ ಬೌಲಿಂಗ್ ಜೊತೆಗೆ ಫೀಲ್ಡಿಂಗ್‌ನಲ್ಲಿ ಕೂಡ ಉತ್ತಮ ಪ್ರದರ್ಶನ ನೀಡಬೇಕಿದೆ.

ಪಂದ್ಯದ ದಿನಾಂಕ, ಸಮಯದ ಬಗ್ಗೆ ವಿವರ

ಪಂದ್ಯದ ದಿನಾಂಕ, ಸಮಯದ ಬಗ್ಗೆ ವಿವರ

ಸೆಮಿಫೈನಲ್ ಪಂದ್ಯಗಳು ಮಾರ್ಚ್ 18ರಂದು ಶನಿವಾರ ನಡೆಯಲಿವೆ. ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ನಡುವಿನ ಸೆಮಿಫೈನಲ್ ಮೊದಲನೇ ಪಂದ್ಯದಲ್ಲಿ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ. ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಉಪ್ಪಾಳ ಕ್ರೀಡಾಂಗಣ ಬ್ಯಾಟಿಂಗ್‌ಗೆ ಹೆಚ್ಚಿನ ಸಹಕಾರಿ ಆಗಿರುವುದರಿಂದ, ಎರಡೂ ತಂಡಗಳಲ್ಲಿ ಸ್ಫೋಟಕ ಬ್ಯಾಟರ್ ಗಳಿದ್ದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ. ಸಿಸಿಎಲ್ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ಯೂಟ್ಯೂಬ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ. ಕನ್ನಡದಲ್ಲಿ ಪಂದ್ಯದ ನೇರಪ್ರಸಾರವನ್ನು ಜೀ ಪಿಚ್ಚರ್ ವಾಹಿನಿಯಲ್ಲಿ ವೀಕ್ಷಿಸಬಹುದಾಗಿದೆ. ಜೀ5 ಆಪ್‌ ಚಂದಾದಾರರು ಸಹ ಮೊಬೈಲ್ ಆಪ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

Story first published: Monday, March 13, 2023, 23:53 [IST]
Other articles published on Mar 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+