Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CCL 2023: ರೋಚಕ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಸೋಲು: ಫೈನಲ್ ತಲುಪಿದ ತೆಲುಗು ವಾರಿಯರ್ಸ್

CCL 2023: Telugu Warriors Defeated Karnataka Bulldozars By 6 Wickets In Semifinal

ಸೆಲಿಬ್ರಿಟಿ ಕ್ರಿಕೆಟ್ ಲೀಗ್‌ನ 2023ರ ಆವೃತ್ತಿಯ ಸೆಮಿಫೈನಲ್ ಪಂದ್ಯದಲ್ಲಿ ತೆಲುಗು ವಾರಿಯರ್ಸ್ ತಂಡ ಕರ್ನಾಟಕ ಬುಲ್ಡೋಜರ್ಸ್ ವಿರುದ್ಧ 6 ವಿಕೆಟ್‌ಗಳ ರೋಚಕ ಜಯ ಸಾಧಿಸುವ ಮೂಲಕ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಅವರು ಭೋಜ್‌ಪುರಿ ದಬಾಂಗ್ಸ್ ತಂಡದ ವಿರುದ್ಧ ಸೆಣೆಸಲಿದ್ದಾರೆ.

ವಿಶಾಖಪಟ್ಟಣದ ವೈಎಸ್ ರಾಜಶೇಖರರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ತೆಲುಗು ವಾರಿಯರ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿತು.

ನಾಯಕ ಪ್ರದೀಪ್ ಬೊಗಾದಿ 26 ಎಸೆತಗಳಲ್ಲಿ 5 ಬೌಂಡರಿ 2 ಸಿಕ್ಸರ್ ಸಹಿತ ಅಜೇಯ 50 ರನ್ ಗಳಿಸಿ ಮಿಂಚಿದರು. ಡಾರ್ಲಿಂಗ್ ಕೃಷ್ಣ 23 ಎಸೆತಗಳಲ್ಲಿ 33 ರನ್ ಗಳಿಸಿದರು. ಚಂದನ್ ಕುಮಾರ್ 6 ಎಸೆತಗಳಲ್ಲಿ 5 ರನ್ ಗಳಿಸಿದರೆ, ರಾಜೀವ್ 4 ರನ್ ಗಳಿಸಿ ಔಟಾದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ತೆಲುಗು ವಾರಿಯರ್ಸ್ 10 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 95 ರನ್ ಗಳಿಸುವ ಮೂಲಕ 4 ರನ್‌ಗಳ ಹಿನ್ನಡೆ ಪಡೆದುಕೊಂಡಿತು. ಅಶ್ವಿನ್ ಬಾಬು 22 ಎಸೆತಗಳಲ್ಲಿ 36 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಸುನಿಲ್ ರಾವ್, ಜಯರಾಮ್ ಕಾರ್ತಿಕ್, ಪೆಟ್ರೋಲ್ ಪ್ರಸನ್ನ, ಪ್ರದೀಪ್ ಬೋಗಾದಿ ತಲಾ ಒಂದು ವಿಕೆಟ್ ಪಡೆದು ಸಂಭ್ರಮಿಸಿದರು.

CCL 2023: Telugu Warriors Defeated Karnataka Bulldozars By 6 Wickets In Semifinal

ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲ

ಮೂರನೇ ಇನ್ನಿಂಗ್ಸ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಉತ್ತಮ ಆರಂಭ ಪಡೆಯುವಲ್ಲಿ ಎಡವಿತು. ಸುದೀಪ್ ಆರಂಭಿಕರಾಗಿ ಕಣಕ್ಕಿಳಿದು 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ರನೌಟ್ ಆದರು. ರಾಜೀವ್ ಹನು 21 ಎಸೆತಗಳಲ್ಲಿ 32 ರನ್ ಗಳಿಸಿದರು.

ಜಯರಾಮ್ ಕಾರ್ತಿಕ್ 14 ಎಸೆತಗಳಲ್ಲಿ 21 ರನ್ ಗಳಿಸಿದರೆ, ಕರಣ್ ಆರ್ಯನ್ 7 ಎಸೆತಗಳಲ್ಲಿ 13 ರನ್ ಗಳಿಸಿದರು. ಅರುಣ್ ಬಚ್ಚನ್ 7 ಎಸೆತಗಳಲ್ಲಿ ಅಜೇಯ 12 ರನ್ ಗಳಿಸಿದರು. ಕೃಷ್ಣ 6 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಕರ್ನಾಟಕ ಬುಲ್ಡೋಜರ್ಸ್ ಮೂರನೇ ಇನ್ನಿಂಗ್ಸ್‌ನಲ್ಲಿ 10 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 99 ರನ್ ಕಲೆಹಾಕುವ ಮೂಲಕ 103 ರನ್‌ಗಳ ಮುನ್ನಡೆ ಪಡೆದುಕೊಂಡಿತು.

CCL 2023: Telugu Warriors Defeated Karnataka Bulldozars By 6 Wickets In Semifinal

ಚೇಸ್ ಮಾಡಿ ಗೆದ್ದ ತೆಲುಗು ವಾರಿಯರ್ಸ್

104 ರನ್‌ಗಳ ಗುರಿಯನ್ನು ಬೆನ್ನತ್ತಿದ ತೆಲುಗು ವಾರಿಯರ್ಸ್ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಅಶ್ವಿನ್ ಬಾಬು ಕೇವಲ 5 ರನ್ ಗಳಿಸಿ ರನೌಟ್ ಆದರು. ಆದರೆ ರೋಷನ್ 15 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್ ಸಹಿತ 27 ರನ್ ಗಳಿಸಿದರೆ, ರಘು 9 ಎಸೆತಗಳಲ್ಲಿ 2 ಬೌಂಡರಿ 2 ಸಿಕ್ಸರ್ ಸಹಿತ 22 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಥಮನ್ 14 ಎಸೆತಗಳಲ್ಲಿ 1 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 21 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ತಲುಪಿಸಿದರು. ಪ್ರಿನ್ಸ್ ಕೂಡ 10 ಎಸೆತಗಳಲ್ಲಿ ಅಜೇಯ 11 ರನ್ ಗಳಿಸಿ ಥಮನ್ ಜೊತೆ ಉತ್ತಮ ಜೊತೆಯಾಟ ಆಡಿದರು. 9.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 105 ರನ್ ಗಳಿಸುವ ಮೂಲಕ 6 ವಿಕೆಟ್‌ಗಳ ಜಯ ಸಾಧಿಸಿದೆ.

Story first published: Saturday, March 25, 2023, 1:01 [IST]
Other articles published on Mar 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+