ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ ಟ್ರೋಫಿ 2025ರ ಟೂರ್ನಿಗೆ ಪಾಕಿಸ್ತಾನ ಅತಿಥ್ಯ ವಹಿಸಿದೆ. ಆದರೆ ಪಾಕಿಸ್ತಾನಕ್ಕೆ ಟೀಮ್ ಇಂಡಿಯಾ ಪ್ರಯಾಣಿಸಲು ಹಿಂದೇಟು ಹಾಕುತ್ತಿದೆ. ಇದೀಗ ಚಾಂಪಿಯನ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಭಾಗವಹಿಸುವ ಬಗ್ಗೆ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನಿಲುವನ್ನು ವಿದೇಶಾಂಗ ಸಚಿವಾಲಯ (ಎಂಇಎ) ಮತ್ತೊಮ್ಮೆ ಸಷ್ಟಪಡಿಸಿದೆ.
2025ರ ಚಾಂಪಿಯನ್ ಟ್ರೋಫಿ ಟೂರ್ನಿ ಸಂಬಂಧ ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದ್ದು, ಭದ್ರತೆಗಳ ಕುರಿತು ಇರುವ ಕಳವಳವನ್ನು ಅದರಲ್ಲಿ ತಿಳಿಸಿದೆ. ಆದರಿಂದ, ಪಾಕಿಸ್ತಾನಕ್ಕೆ ಟೀಮ್ ಇಂಡಿಯಾ ಪ್ರಯಾಣಿಸುವುದು ಅಸಂಭವ ಎಂದು ಎಂಇಎ ವಕ್ತರರಾದ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಚಾಂಪಿಯನ್ ಟ್ರೋಫಿ ಕುರಿತು ಮಾನಾಡಿರುವ ರಣಧೀರ್ ಜೈಸ್ವಾಲ್ ಅವರು, ಪಾಕಿಸ್ತಾನದಲ್ಲಿ ಮುಂದಿನ ವರ್ಷ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ ಟ್ರೋಫಿಯನ್ನು ಆಡಲು ಟೀಮ್ ಇಂಡಿಯಾವನ್ನು ಕಳುಹಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ. ಭದ್ರತಾ ಕಾಳಜಿಯ ದೃಷ್ಟಿಯಿಂದ ಪಾಕಿಸ್ತಾನಕ್ಕೆ ಟೀಮ್ ಇಂಡಿಯಾ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ಈಗಾಗಲೇ ಬಿಸಿಸಿಐಗೆ ನಾವು ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಆಡುವ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿದ್ದ ಅನುಮಾನಗಳಿಗೆ ಎಂಇಎ ತೆರೆ ಎಳೆದಿದೆ.
ಪಾಕಿಸ್ತಾನಕ್ಕೆ ಭಾರತ ತಂಡ ಹೋಗುವ ಬಗ್ಗೆ ಎಂಇಎ ನಿರ್ಧಾರ ಹೊರಬೀಳುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಚಾಂಪಿಯನ್ ಟ್ರೋಫಿ ಕುರಿತು ನಿರ್ಣಯ ಕೈಗೊಳ್ಳಲು ಮಹತ್ವದ ಸಭೆಯನ್ನು ನಡೆಸುತ್ತಿದೆ. ಪಿಸಿಬಿ ಮತ್ತು ಬಿಸಿಸಿಐಯೊಂದಿಗೆ ಐಸಿಸಿ ವರ್ಚುವಲ್ ಸಭೆ ನಡೆಸುತ್ತಿದೆ. ಇದರೊಂದಿಗೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಚಾಂಪಿಯನ್ ಟ್ರೋಫಿ ವಿವಾದಕ್ಕೆ ತೆರೆ ಎಳೆಯುವ ಸಲುವಾಗಿ ಐಸಿಸಿ ಈ ಸಭೆಯನ್ನು ಏರ್ಪಡಿಸಿದೆ ಎಂದು ವರದಿಗಳು ಹೇಳಿವೆ.