Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಚಾಂಪಿಯನ್ಸ್ ಟ್ರೋಫಿ: ಆಂಗ್ಲರ ನಾಡಿಗೆ ಲಗ್ಗೆ ಇಟ್ಟ ಕೊಹ್ಲಿ ಪಡೆ

ನವದೆಹಲಿ, ಮೇ 25 : ಜೂನ್‌ 1ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಹೊರಟಿರುವ ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡ ಗುರುವಾರ ಇಂಗ್ಲೆಂಡ್‌ ತಲುಪಿದೆ.

ಹಾಲಿ ಚಾಂಪಿಯನ್ಸ್ ಟೀಂ ಇಂಡಿಯಾ ಇಂಗ್ಲೆಂಡ್ ತಲುಪಿದೆ ಎಂದು ಭಾರತ ಕ್ರಿಕೆಟ್ ಮಂಡಳಿ (ಬಿಸಿಸಿಐ) ಟ್ವೀಟ್ ಮೂಲಕ ತಿಳಿಸಿದೆ. ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುತ್ತಿದೆ.[ಚಾಂಪಿಯನ್ ಟ್ರೋಫಿ ಅಭ್ಯಾಸ ಪಂದ್ಯಗಳು ಮೇ 26ರಿಂದ ಆರಂಭ]

Champions Trophy 2017: Team India arrive in England to defend title

ಮೇ 28ರಂದು ಭಾರತ- ನ್ಯೂಜಿಲೆಂಡ್ ಮತ್ತು ಮೇ 30ರಂದು ಬಾಂಗ್ಲಾ ವಿರುದ್ಧ 2ನೇ ಅಭ್ಯಾಸ ಪಂದ್ಯ ನಡೆಯಲಿದೆ. ಜೂನ್ 4ರಂದು ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಕಳೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಹೇಂದ್ರ ಸಿಂಗ್ ದೋನಿ ನೇತೃತ್ವದಲ್ಲಿ ಭಾರತ ತಂಡ ಚಾಂಪಿಯನ್ ಆಗಿತ್ತು.

ಭಾರತ ತಂಡ: ವಿರಾಟ್‌ ಕೊಹ್ಲಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಎಂ.ಎಸ್‌. ದೋನಿ, ರಹಾನೆ, ಯುವರಾಜ್ ಸಿಂಗ್‌, ಕೇದಾರ್ ಜಾದವ್, ದಿನೇಶ್‌ ಕಾರ್ತಿಕ್‌, ರವೀಂದ್ರ ಜಡೇಜ, ಆರ್‌. ಅಶ್ವಿನ್, ಜಸ್ ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಉಮೇಶ್‌ ಯಾದವ್‌, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್‌.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+