Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy 2025: ಚಾಂಪಿಯನ್ಸ್‌ ಟ್ರೋಫಿ ಎಲ್ಲ ತಂಡಗಳು ಪ್ರಕಟ: ಇಲ್ಲಿದೆ ವಿವರ

ಚಾಂಪಿಯನ್ಸ್‌ ಟ್ರೋಫಿ ಫೆಬ್ರವರಿಯಲ್ಲಿ ಪಾಕಿಸ್ತಾನದಲ್ಲಿ ನಡೆಯಲಿದೆ. ಈ ಮೆಗಾ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಲಿವೆ. ಏಳು ವರ್ಷಗಳ ಬಳಿಕ ಟೂರ್ನಿ ನಡೆಯಲಿದ್ದು ಎಲ್ಲರ ಚಿತ್ತ ಕದ್ದಿದೆ. ಪಾಕಿಸ್ತಾನಕ್ಕೆ ಭಾರತ ಪ್ರವಾಸವನ್ನು ಬೆಳೆಸುತ್ತಿಲ್ಲ. ಹೀಗಾಗಿ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಹೈಬ್ರಿಡ್‌ ಮಾಡೆಲ್‌ನಲ್ಲಿ ಈ ಟೂರ್ನಿ ನಡೆಯಲಿದೆ.

ಐಸಿಸಿ ಟೂರ್ನಿಗೆ ಎಲ್ಲ ತಂಡಗಳು ತಮ್ಮ ತಮ್ಮ ತಂಡವನ್ನು ಪ್ರಕಟಿಸಿದ್ದವು. ಆದರೆ ಪಾಕ್‌ ಮಾತ್ರ ಈ ಮೆಗಾ ಟೂರ್ನಿಗೆ ತಂಡವನ್ನು ಪ್ರಕಟಿಸಿರಲಿಲ್ಲ. ಈಗ ಪಾಕ್‌ ಸಹ ಶುಕ್ರವಾರ ತಂಡವನ್ನು ಪ್ರಕಟಿಸಿದೆ. ಪಾಕ್‌ ತಂಡದಲ್ಲಿ ನಾಲ್ವರು ಸ್ಟಾರ್‌ ಆಟಗಾರರು ಎಂಟ್ರಿ ಪಡೆದಿದ್ದಾರೆ. 2017ರಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ ಮೂವರು ಆಟಗಾರರು ತಂಡದಲ್ಲಿ ಸ್ಥಾನದಲ್ಲಿದ್ದಾರೆ. ಎಂಟು ತಂಡಗಳನ್ನು ಎರಡು ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ಗುಂಪು ಹಂತದಲ್ಲಿ ಅಗ್ರ ಸ್ಥಾನ ಪಡೆದ ಎರಡು ತಂಡಗಳು ನಾಕೌಟ್‌ ಹಂತ ಪ್ರವೇಶಿಸಲಿವೆ. "ಎ" ಗುಂಪಿನಲ್ಲಿ ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ನ್ಯೂಜಿಲೆಂಡ್‌ ತಂಡಗಳು ಇದ್ದು, "ಬಿ" ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್‌, ಅಫ್ಘಾನಿಸ್ತಾನ ತಂಡಗಳು ಸ್ಥಾನ ಪಡೆದಿವೆ. ಹಾಗಿದ್ದರೆ ಚಾಂಪಿಯನ್ಸ್‌ ಟ್ರೋಫಿಗೆ ಪ್ರಕಟಿತ ತಂಡಗಳು ಇಂತಿವೆ.

Champions Trophy 2025 All Eight Teams Announce Squads for the Mega Tournament

ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಡ್ಯಾರಿಲ್ ಮಿಚೆಲ್, ವಿಲ್ ಒ'ರೂರ್ಕ್, ಗ್ಲೆನ್ ಫಿಲಿಪ್ಸ್, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ರಚಿನ್ ರವೀಂದ್ರ, ಬೆನ್ ಸಿಯರ್ಸ್, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್.

ಪಾಕ್ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ), ಬಾಬರ್ ಅಜಮ್, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಆಘಾ (ಉಪನಾಯಕ), ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹರಿಸ್ ರೌಫ್, ಮೊಹಮ್ಮದ್ ಹಸನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಸೌಮ್ಯ ಸರ್ಕಾರ್, ತಂಜಿದ್ ಹಸನ್, ತೌಹೀದ್ ಹೃದಯ, ಮುಷ್ಫಿಕರ್ ರಹೀಮ್, ರಿಷದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಎಂಡಿ ಮಹ್ಮದುಲ್ಲಾ, ಜಾಕರ್ ಅಲಿ ಅನಿಕ್, ಮೆಹದಿ ಹಸನ್ ಮಿರಾಜ್, ಪರ್ವೇಜ್ ಹೊಸೈನ್ ಎಮನ್, ನಸುಮ್ ಅಹ್ಮದ್, ತಂಜಿಮ್ ಹಸನ್ ಶಕೀಬ್, ನಹಿದ್ ರಾಣಾ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್. ಪಂತ್, ರವೀಂದ್ರ ಜಡೇಜ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಜಾರ್ಜಿ, ಮಾರ್ಕೊ ಜಾನ್ಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಅನ್ರಿಕ್ ನಾರ್ಟ್ಜೆ, ಕಗಿಸೊ ರಬಾಡ, ರಯಾನ್ ರಿಕಲ್ಟನ್, ತಬ್ರೆಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ರಾಸ್. ವ್ಯಾನ್ ಡೆರ್ ಡಸ್ಸೆನ್.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಹಮಾನಲ್ಲಾ ಗುರ್ಬಾಜ್, ರಹಮತ್ ಶಾ, ಇಕ್ರಮ್ ಅಲಿಖಿಲ್, ಗುಲ್ಬಾದಿನ್ ನಯಬ್, ಅಜ್ಮತುಲ್ಲಾ, ಸೆದಿಖುಲ್ಲಾ ಅಟಲ್, ಮೊಹಮ್ಮದ್ ನಬಿ, ರಶೀದ್ ಖಾನ್, ಎ.ಎಂ. ಗಜನ್ಫರ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಫರೀದ್ ಮಲಿಕ್, ನವೀದ್ ಝದ್ರಾನ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್,

Story first published: Saturday, February 1, 2025, 10:22 [IST]
Other articles published on Feb 1, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+