Champion Trophy 2025: ಪಾಕಿಸ್ತಾನ ಷರತ್ತಿಗೆ ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ; ಬಿಸಿಸಿಐ ಸಷ್ಟನೆ
ಮುಂದಿನ ವರ್ಷ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಿದರೆ, ಭವಿಷ್ಯದಲ್ಲಿ ಭಾರತದಲ್ಲಿ ನಡೆಯುವ ಎಲ್ಲಾ ಐಸಿಸಿ ಟೂರ್ನಿಗಳನ್ನು ಅದೇ ಮಾದರಿಯಲ್ಲಿ ನಡೆಸಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಷರತ್ತು ಹಾಕಿದೆ. ಇದೀಗ ಪಿಸಿಬಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದಿಟ್ಟ ಉತ್ತರ ನೀಡಿದಂತಿದೆ.
ಭದ್ರತಾ ಕಾರಣಗಳಿಂದಾಗಿ ಪಾಕಿಸ್ತಾನ ಪ್ರವಾಸ ಮಾಡುವುದಿಲ್ಲ ಎಂದು ಬಿಸಿಸಿಐ ಪತ್ರ ಬರೆಯುವ ಮೂಲಕ ಐಸಿಸಿಗೆ ಸ್ಪಷ್ಟಪಡಿಸಿದೆ. ಭಾರತ ಪ್ರಸ್ತಾಪಿಸಿರುವ ಹೈಬ್ರಿಡ್ ಮಾದರಿಗೆ ಪಿಸಿಬಿ ಮೂರು ಷರತ್ತುಗಳನ್ನ ವಿಧಿಸಿದೆ ಎಂದು ವರದಿಗಳಾಗಿವೆ. ಈಗ ಪಿಸಿಬಿ ಷರತ್ತುಗಳನ್ನು ಬಿಸಿಸಿಐ ತಿರಸ್ಕರಿಸಿದೆ. ಭಾರತದಲ್ಲಿ ಯಾವುದೇ ಭದ್ರತಾ ಸಮಸ್ಯೆ ಇಲ್ಲ. ಇಲ್ಲಿ ನಡೆಯಲಿರುವ ಐಸಿಸಿ ಟೂರ್ನಿಗಳಿಗೆ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಸಿಸಿಐ ಹೇಳಿರುವ ಬಗ್ಗೆ ವರದಿಗಳು ತಿಳಿಸಿವೆ. ಇದನ್ನು ಬಿಸಿಸಿಐ ಐಸಿಸಿಗೆ ಸ್ಪಷ್ಟಪಡಿಸಿದೆ.

ಭಾರತ 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಲಿದೆ. ಇದಾದ ನಂತರ ಶ್ರೀಲಂಕಾದೊಂದಿಗೆ ಭಾರತವು 2026ರ ಟಿ20 ವಿಶ್ವಕಪ್ ಅನ್ನು ಜಂಟಿಯಾಗಿ ಆಯೋಜಿಸಲಿದೆ. ಇದರೊಂದಿಗೆ 2029ರ ಚಾಂಪಿಯನ್ಸ್ ಟ್ರೋಫಿ ಮತ್ತು 2031ರ ಏಕದಿನ ವಿಶ್ವಕಪ್ ಕೂಡ ಭಾರತದಲ್ಲಿ ಆಯೋಜನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಐಸಿಸಿ ಮುಂದೆ ಪಿಸಿಬಿ ತನ್ನ ಬೇಡಿಯನ್ನು ಮುಂದಿಟ್ಟಿದೆ.
ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ 2025ರ ಫೆಬ್ರುವರಿ-ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದು, ಟೂರ್ನಿಯ ಅಂತಿಮ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ನವೆಂಬರ್ 29 ರಂದು ಐಸಿಸಿ ಈ ವಿಷಯದ ಬಗ್ಗೆ ಸಭೆ ನಡೆಸಿತ್ತು, ಆದರೆ, ಸಭೆಯಲ್ಲಿ ಯಾವುದೇ ಒಮ್ಮತಕ್ಕೆ ಬರಲಿಲ್ಲ. ಇದೀಗ ಹೊಸ ಸಭೆಯನ್ನೂ ಡಿಸೆಂಬರ್ 5 ರಿಂದ 7ಕ್ಕೆ ಮುಂದೂಡಲಾಗಿದೆ. ಐಸಿಸಿಗೆ ಪಿಸಿಬಿ ಸಲ್ಲಿಸಿರುವ ಡ್ರಾಫ್ಟ್ ವೇಳಾಪಟ್ಟಿಯಲ್ಲಿ ಲಾಹೋರ್, ಕರಾಚಿ ಮತ್ತು ರಾವಲ್ಪಿಂಡಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ನಡೆಯಲಿದ್ದು, ಪಾಕಿಸ್ತಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.
ವರದಿಗಳ ಪ್ರಕಾರ, ಚಾಂಪಿಯನ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಪಿಸಿಬಿಗೆ ಐಸಿಸಿಯು ಮನವರಿಕೆ ಮಾಡಿದೆ. ಆದರೆ, ಪಿಸಿಬಿ ಇದನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಇದೀಗ ತನ್ನ ಅಂತಿಮ ನಿಲುವುಗಳೊಂದಿಗೆ ಐಸಿಸಿ ಜೊತೆ ಸಭೆ ನಡೆಸಲು ಪಿಸಿಬಿ ಸಿದ್ಧವಾಗಿದೆ. ಇದೀಗ ಎಲ್ಲರೂ ಐಸಿಸಿ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications